Menu

ಕೃಷಿ ಸಚಿವರ ತವರಲ್ಲೇ ಆರಂಭವಾಗದ ಭತ್ತ ಖರೀದಿ ಕೇಂದ್ರ: ಆರ್‌ ಅಶೋಕ

ಸಿಎಂ @siddaramaiah ನವರೇ, ಡಿಸೆಂಬರ್ ಆರಂಭದಲ್ಲೇ ಆರಂಭವಾಗಬೇಕಿದ್ದ ಭತ್ತ ಖರೀದಿ ಕೇಂದ್ರ ಇನ್ನೂ ಯಾಕೆ ಆರಂಭ ಆಗಿಲ್ಲ? ನಿಮ್ಮ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ನಿದ್ದೆ ಮಾಡುತ್ತಿದ್ದಾರಾ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ. ಭತ್ತ ಖರೀದಿ ಕೇಂದ್ರಗಳನ್ನು ಕೂಡಲೇ ತೆರೆದು ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಆಗುತ್ತಿರುವ ನಷ್ಟ ತಪ್ಪಿಸದಿದ್ದರೆ ಮತ್ತೊಮ್ಮೆ ರೈತರ ಪ್ರತಿಭಟನೆ ವಿಕೋಪಕ್ಕೆ ತಿರುಗುವುದು ಗ್ಯಾರೆಂಟಿ. ಉತ್ತಮ ಮಳೆಯಿಂದಾಗಿ ಮಂಡ್ಯ, ಮೈಸೂರು ಭಾಗದಲ್ಲಿ

ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ವೇಣುಗೋಪಾಲ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ

ಕೆಸಿ ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಸ್ಪಷ್ಟಪಡಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ

ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ, ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯ: ಸಿಎಂ

ಕೋಗಿಲು ಬಡಾವಣೆಯಲ್ಲಿ  ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ  ನಿರ್ಮಾಣ ಮಾಡಿದ್ದ  167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ  ಖಾಲಿ ಮಾಡಿರಲಿಲ್ಲ. ಅವರಿಗೆಲ್ಲ ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ

ಹಾಸನದ ಮೇಲೆ ಏಕೆ ಕಣ್ಣು: ಕಾಂಗ್ರೆಸ್ ವಿರುದ್ಧ ಎಚ್.ಡಿ. ದೇವೇಗೌಡ ಕಿಡಿ

ಹಾಸನ: ಕಾಂಗ್ರೆಸ್‌ನವರು ರಾಜ್ಯದ 30 ಜಿಲ್ಲೆ ಬಿಟ್ಟು ಹಾಸನದಲ್ಲೇ 2 ವರ್ಷಗಳಲ್ಲಿ 2 ಬಾರಿ ಸಿಎಂ ಸಮಾವೇಶ ನಡೆಸಿರುವುದೇಕೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಶ್ನಿಸಿದರು. ಹುಟ್ಟೂರು ಹರದನಹಳ್ಳಿಯ ಮನೆ ದೇವರಿಗೆ ಸೋಮವಾರ ಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,

ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ; ಸರ್ಕಾರದ ವಿರುದ್ಧ ಹೋರಾಟ: ನಿಖಿಲ್ ಕುಮಾರಸ್ವಾಮಿ

ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಜಪ್ತಿ ಮಾಡಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್

1 ಕೋಟಿ ಸಾಲ ಪಡೆದು ವಂಚನೆ: ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ದ ಪ್ರಕರಣ ದಾಖಲು!

ಬೀದರ್: 2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ 99 ಲಕ್ಷ ರೂ. ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಾಸಕರ ದೂರದ ಸಂಬಂಧಿ ಎಂದು ಹೇಳಲಾಗುವ ದೂರುದಾರರು, ಶರಣು ಸಲಗರ್ ಚುನಾವಣಾ ಸಂಬಂಧಿತ

ಓಲೈಕೆ, ಮತಬ್ಯಾಂಕಿಗಾಗಿ ಸ್ಲಂ ನಿರ್ಮಾಣಕ್ಕೆ ಕಾಂಗ್ರೆಸ್ ಕಾರಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕರ್ನಾಟಕದ ಗೃಹ ಇಲಾಖೆಯನ್ನು ನಡೆಸಲು ಆಗದಿದ್ದರೆ ರಾಜ್ಯದ ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಪ್ರಗತಿ ಪರಿಶೀಲನಾ ಸಭೆ

ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ  ಯೋಜನೆಗಳ ಭೂಸ್ವಾಧೀನ ಕುರಿತು  ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು

ರಷ್ಯಾ-ಉಕ್ರೇನ್‌ ಯುದ್ಧ ಶೀಘ್ರ ಕೊನೆ: ಟ್ರಂಪ್‌

ದೀರ್ಘಕಾಲದಿಂದ ನಡೆಯುತ್ತಿರುವ ರಷ್ಯಾ- ಉಕ್ರೇನ್‌ ನಡುವಿನ ಯುದ್ಧ ಶೀಘ್ರ ಕೊನೆಯಾಗುತ್ತಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಫ್ಲೋರಿಡಾದ ತನ್ನ ಖಾಸಗಿ ನಿವಾಸದಲ್ಲಿ ಟ್ರಂಪ್‌ ಮಹತ್ವದ ಸಭೆ ನಡೆಸಿದ ಬಳಿಕ ಈ ಹೇಳಿಕೆ

ಮರ್ಯಾದೆ ಹತ್ಯೆ ತಡೆಯಲು ಕಾಯ್ದೆ: ಸಿಎಂ ಭರವಸೆ

ಮರ್ಯಾದೆ ಹತ್ಯೆ ತಡೆಯಲು ಕಾಯ್ದೆಯನ್ನು ರೂಪಿಸಿ ಜಾರಿ ಮಾಡಬೇಕೆಂಬ ಮನವಿಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,