ರಾಜಕೀಯ
ಬೆಂಗಳೂರು ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ, ಬೆಂಬಲ ಕೋರಿ ಕೇಂದ್ರ ಸಚಿವರಿಗೆ ಡಿಸಿಎಂ ಮನವಿ
ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧಹಂತದ ತ್ಯಾಜ್ಯ ವಿಲೇವಾರಿ (Treatment and Disposal of Legacy Leachate)ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡು ವಂತೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ದೆಹಲಿಯಲ್ಲಿಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವರಾದ ಮನೋಹರ್
ಮಗು ಅತ್ತರೆ ಯಾರು ಸಮಾಧಾನ ಪಡಿಸಬೇಕು: ಕೆಎನ್ ರಾಜಣ್ಣ ಪತ್ರಕ್ಕೆ ಡಿಕೆ ಸುರೇಶ್ ಪ್ರತಿಕ್ರಿಯೆ
ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು? ತಂದೆ – ತಾಯಿ, ಪೋಷಕರು ಸಮಾಧಾನ ಮಾಡಬೇಕು. ಇಲ್ಲಿ ಕೂಡ ಏನೇ ಸಮಸ್ಯೆ ಇದ್ರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪತ್ರದ ಬಗ್ಗೆ ಮಾಜಿ ಸಂಸದ ಡಿ.ಕೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಜೀವ ರಕ್ಷಕ ಪ್ರಶಸ್ತಿ
ಸಮಾಜದಲ್ಲಿ ಬದಲಾವಣೆ ಬೇಕಾದರೆ ಮೊದಲು ಸರಿಯಾದ ಜನಪ್ರತಿನಧಿಯನ್ನು ಆಯ್ಕೆ ಮಾಡಬೇಕು. ಈ ಆಯ್ಕೆ ಮಾಡುವುದು ಸವಾಲಿನ ಕೆಲಸ. ಇದು ಜವಾಬ್ದಾರಿಯುತವಾದ ಕೆಲಸ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು. ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ
ಮಾರ್ಚ್‌ಗೆ ಕೋರಮಂಗಲ- ಸರ್ಜಾಪುರ ಬಫರ್ ರಸ್ತೆ ಕಾಮಗಾರಿ ಪೂರ್ಣ: ಡಿಸಿಎಂ
“ಮುಂದಿನ ವರ್ಷ ಮಾರ್ಚ್ ತಿಂಗಳ ವೇಳೆಗೆ ಕೋರಮಂಗಲದಿಂದ ಸರ್ಜಾಪುರವರೆಗಿನ 5.50 ಕಿ.ಮೀ ಉದ್ದದ ಬಫರ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಜಕಾಲುವೆ ಪಕ್ಕದಲ್ಲಿ ಸಂಚಾರಿಯುಕ್ತ ಬಫರ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು
ದ್ವೇಷ ಭಾಷಣ ತಡೆ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯ, ಬಿಜೆಪಿಯವರಿಂದ ಏಕೆ ವಿರೋಧ?
ದ್ವೇಷ ಭಾಷಣ ತಡೆ ಮಸೂದೆಯನ್ನು ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಈ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ . ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ
ಖಜಾನೆ ತುಂಬಿಸಲು ಸರ್ಕಾರದಿಂದ 569 ಮದ್ಯ ಲೈಸೆನ್ಸ್ ಇ- ಹರಾಜು
ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹಿಳಾ ಆಯೋಗ ಇತ್ತೀಚೆಗೆ ಮನವಿ ಮಾಡಿದೆ, ಇದೀಗ ಸರ್ಕಾರ ರಾಜ್ಯದ 569 ವೈನ್ ಸ್ಟೋರ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ಲೈಸೆನ್ಸ್ ಇ-ಹರಾಜಿಗೆ ಮುಂದಾಗಿದೆ. ಮದ್ಯ ಮಾರಾಟ ಇಳಿಕೆಯಾಗಿದ್ದು, ಸಂಪನ್ಮೂಲ ಕ್ರೋಢೀಕರಣಕ್ಕೆ
ಅಧಿಕಾರ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ತೀರ್ಮಾನಿಸುತ್ತಾರೆ: ಸಿಎಂ ಸಿದ್ದರಾಮಯ್ಯ
ಮೈಸೂರು : ಯಾರು ಪಕ್ಷಕ್ಕಿಂತ ದೊಡ್ಡವರಾದರೂ ಸಾಧ್ಯವೇ ಇಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ರಾಹುಲ್ ಗಾಂಧಿ ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಿಂತ ಯಾರು ದೊಡ್ಡವರಲ್ಲ.
ಕಾಂಗ್ರೆಸ್‌ನ ಯಾವ ನಾಯಕರಾದ್ರೂ ಖರ್ಗೆ ಸಾಹೇಬರ ಮಾತು ಕೇಳಬೇಕು: ದಿನೇಶ್ ಗುಂಡೂರಾವ್
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮಾತಿನಂತೆ ಎಲ್ಲರೂ ನಡೆಯಬೇಕಿದೆ. ಅನಾವಶ್ಯಕ ಗೊಂದಲ ಪಕ್ಷಕ್ಕೂ, ಕಾರ್ಯಕರ್ತರಿಗೂ ಒಳ್ಳೆಯದಲ್ಲ. ಯಾರೇ ನಾಯಕರು ಆದರೂ ಕೂಡಾ ಖರ್ಗೆ ಸಾಹೇಬರ ಮಾತು ಕೇಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ
ಕಾಂಗ್ರೆಸ್‌ನವರು ಅಧಿಕಾರದ ಕುರ್ಚಿಗಾಗಿ ಜನರ ನೆಮ್ಮದಿ ಹಾಳು ಮಾಡಿದ್ದಾರೆ: ವಿ ಸೋಮಣ್ಣ
ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಅಧಿಕಾರ ಏನಾದರೂ ಆಗಲಿ, ಯಕ್ಕುಟ್ಟು ಹೋಗಲಿ. ಅಧಿಕಾರದ ಕುರ್ಚಿಗಾಗಿ ಕಿತ್ತಾಡಿಕೊಂಡು ಜನರ ನೆಮ್ಮದಿ ಹಾಳು ಮಾಡುತ್ತಿದ್ದು, ಸಣ್ಣ ಗುಂಡಿಗಳನ್ನು ಮುಚ್ಚಲು ಅವರಿಗೆ ಯೋಗ್ಯತೆಯಿಲ್ಲವೆಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಕಿಡಿಕಾರಿದರು. ಕೋಲಾರ ನಗರದ
ರಾಜ್ಯ ನಾಯಕತ್ವ ಗೊಂದಲ ಹೈಕಮಾಂಡ್‌ನದಲ್ಲ, ಲೋಕಲ್‌ನವರ ಸೃಷ್ಟಿ: ಮಲ್ಲಿಕಾರ್ಜುನ ಖರ್ಗೆ
ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಕಾಂಗ್ರೆಸ್ ಹೈಕಮಾಂಡ್ ಸೃಷ್ಟಿ ಮಾಡಿಲ್ಲ, ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಹೀಗಾಗಿ ಸ್ಥಳೀಯ ನಾಯಕರೇ ಅದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್ ಅಂದ್ರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿಎಂ-ಡಿಸಿಎಂ




