ರಾಜಕೀಯ
ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು
ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಗ್ಯಾರಂಟಿ ಅನುಷ್ಠಾನ ಸಮಿತಿ ನೇಮಕದಲ್ಲಿ ತಾರತಮ್ಯ ಮಾಡುವ ಮೂಲಕ ಶಾಸಕರ ಹಕ್ಕು ಮೊಟಕುಗೊಳಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ರಾಜ್ಯಪಾಲರಿಗೆ
ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ: ಆರ್. ಅಶೋಕ್
ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ
ಭದ್ರಾ ಮೇಲ್ದಂಡೆ ಕಾಮಗಾರಿ 6 ತಿಂಗಳಲ್ಲಿ ಮುಗಿಸಿ ನೀರು ಹರಿಸಲು ಚಿಂತನೆ: ಡಿ.ಕೆ.ಶಿವಕುಮಾರ್
“ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರ ತಾರತಮ್ಯವನ್ನು ಕಾನೂನು ಪ್ರಕಾರ ಸರಿಪಡಿಸಿ ಮುಂದಿನ ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಕೊಡಬಹುದು ಎಂದು ಮಂತ್ರಿಗಳು, ಶಾಸಕರು ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಭದ್ರಾ
ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅಂದಿದ್ದೇಕೆ ಹೆಚ್‌ಡಿಕೆ
ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಒಡೆದಾಳುವುದು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು
ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ ಅಂದ್ರು ಡಿ.ಕೆ. ಶಿವಕುಮಾರ್
ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನಟಿ ರನ್ಯಾ ರಾವ್ ಚಿನ್ನ
‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ
ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅಂಗೀಕರಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, 20
ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪ್ ಮಾರಾಟ ನಿಷೇಧ
ನದಿಗಳು ಮತ್ತು ಜಲಮೂಲಗಳ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪ್, ಶಾಂಪು ಬಳಕೆ ಹೆಚ್ಚಾಗಿದ್ದು
ಮುಡಾಗೆ ವಾಪಸ್ ಮಾಡಿರೋ ಸೈಟ್ ಪಾರ್ವತಿ ಮತ್ತೆ ಕೇಳಲಿದ್ದಾರೆ: ಶಾಸಕ ಯತೀಂದ್ರ
ಮುಡಾದಿಂದ ಅಕ್ರಮವಾಗಿ ಸೈಟುಗಳನ್ನು ಪಡೆದ ಆರೋಪ ಕೇಳಿ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿಎಂ ಪಾರ್ವತಿ ಸೈಟ್‌ಗಳನ್ನು ವಾಪಸ್ ಮಾಡಿದ್ದರು. ಈ ಸೈಟ್‌ಗಳನ್ನು ಅವರು ಮತ್ತೆ ಕ್ಲೈಮ್ ಮಾಡಲಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
ಚಾಂಪಿಯನ್ಸ್ ಟ್ರೋಫಿಯಲ್ಲಿ ಚಾಂಪಿಯನ್ ಆದ ಭಾರತ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
ಅಮೋಘ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಖಾತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಮೋಘ ಆಟದ ಮೂಲಕ ಭಾರತ ತಂಡ
ಅಭಿವೃದ್ಧಿಯೇ ನಮ್ಮ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ: ಡಿ.ಕೆ.ಶಿವಕುಮಾರ್
“ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ




