ರಾಜಕೀಯ
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅ.1ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ
ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ನಗದುರಹಿತ ವೈದ್ಯಕೀಯ ಸೇವೆ ಒದಗಿಸಲು ಹೊಸ ಯೋಜನೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಅನ್ನು ಅಕ್ಟೋಬರ್ 1 ರಿಂದ ಜಾರಿಗೊಳಿಸಲು ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಆದೇಶ ಹೊರಡಿಸಿದ್ದು, ಯೋಜನೆಗೆ ಸೇರ್ಪಡೆಯಾಗುವುದು ನೌಕರರ ಆಯ್ಕೆಯ ಮೇಲಿದೆ. ಈ ಯೋಜನೆ ಜಾರಿಗೆ ಬಂದ ಕೂಡಲೇ ಹಳೆಯ ಜ್ಯೋತಿ ಸಂಜೀವಿನಿ ಯೋಜನೆ ಸ್ಥಗಿತಗೊಳ್ಳಲಿದೆ.
ಜಾತಿ ಗಣತಿ ಭವಿಷ್ಯ: ಹೈಕೋರ್ಟ್ನಲ್ಲಿ ವಾದ ಪ್ರತಿವಾದ ಹೇಗಿತ್ತು?
ರಾಜ್ಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿರೋಧಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ನೇತೃತ್ವದ ಪೀಠದಲ್ಲಿ ನಡೆಯಿತು. ಅರ್ಜಿದಾರರು ಮತ್ತು ಸರ್ಕಾರದ ಪರ ವಕೀಲರ ವಾದ ಮತ್ತು ಪ್ರತಿವಾದ
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ: ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ-2025
ರಜೆ ಮುಗಿಯುತ್ತಿದ್ದಂತೆ ಶಾಲೆ ಆರಂಭ: ಮಧು ಬಂಗಾರಪ್ಪ ಸ್ಪಷ್ಟನೆ
ಕರ್ನಾಟಕದಲ್ಲಿ ಜಾತಿ ಸಮೀಕ್ಷೆ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ನಡೆಯುತ್ತಿರುವ ಸಂದರ್ಭದಲ್ಲೇ, ಶಾಲಾ ರಜೆ ವಿಸ್ತರಣೆ ಕುರಿತಾಗಿ ಉದ್ಭವವಾಗಿರುವ ಪ್ರಶ್ನೆಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವರ್ಗದವರಿಗೂ ಸಮಾನತೆ ಸೃಷ್ಟಿಸಲು ಸಾಮಾಜಿಕ,
ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು
ಸೌಜನ್ಯ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ
ವಿಪ್ರೊ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕೋರಿ ಸಿಎಂ ಪತ್ರ
ಬೆಂಗಳೂರು ಹೊರ ವರ್ತುಲ ರಸ್ತೆ ಕಾರಿಡಾರ್‌ನಲ್ಲಿ, ಅದರಲ್ಲೂ ಮುಖ್ಯವಾಗಿ ಇಬ್ಲೂರು ಜಂಕ್ಷನ್ ಬಳಿ ಸಂಚಾರ ದಟ್ಟಣೆ ತಗ್ಗಿಸಲು ನಿಮ್ಮ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜಿ ಅವರಿಗೆ ಪತ್ರ
ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ಜಾರಿ: ಸಂಸದ ಸುಧಾಕರ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ತಂದಿದೆ. ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಬಿಪಿಎಲ್ ಕಾರ್ಡ್: ಅನರ್ಹರ ಪತ್ತೆಗೆ ಹಲವು ಇಲಾಖೆಗಳ ತಂತ್ರಾಂಶ ಸಂಯೋಜನೆ
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಕಾರ್ಡ್‌ಗಳ ರದ್ದತಿಗೆ ಮುಂದಾಗಿರುವ ಸರ್ಕಾರ, ಅನರ್ಹರಿಗೆ ಬಿಪಿಎಲ್ ಕಾರ್ಡ್ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಮುಂದಾಗಿದೆ. ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ವರದಿ ಮತ್ತು ಆಹಾರ ಇಲಾಖೆಯ ಕಾರ್ಯಾಚರಣೆಯಲ್ಲಿ 10.09
ಟೆಕ್ಸಾಸ್ ಹನುಮ ಸುಳ್ಳು ಹಿಂದೂ ದೇವರ ಪ್ರತಿಮೆ ಎಂದ ಟ್ರಂಪ್ ಸಹಚರ
ಅಮೆರಿಕದ ಟೆಕ್ಸಾಸ್ನಲ್ಲಿ ಸ್ಥಾಪಿಸಲಾಗಿರುವ ೯0 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಡ್ರೊನಾಲ್ಡ್ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ನಾಯಕರೊಬ್ಬರು ಅವಮಾನಿಸಿ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. ನಮ್ಮದು ಕ್ರಿಶ್ಚಿಯನ್ ರಾಷ್ಟ್ರ, ಆದರೂ ಸುಳ್ಳು ಹಿಂದೂ ದೇವರ ಪ್ರತಿಮೆಯನ್ನು ಇಲ್ಲೇಕೆ ನಿರ್ಮಿಸಲು
ಪ್ರಧಾನಿ ನಿವಾಸದ ರಸ್ತೆಯಲ್ಲಿರುವ ಗುಂಡಿಗಳನ್ನು ಕೂಡ ಮಾಧ್ಯಮದವರು ನೋಡಿ: ಡಿಕೆ ಶಿವಕುಮಾರ್
ನಾನು ದೆಹಲಿ ಒಂದು ಸುತ್ತು ಬಂದೆ. ಅಲ್ಲಿ ಎಷ್ಟು ರಸ್ತೆಗುಂಡಿಗಳಿವೆ ಹಾಗೂ ಪ್ರಧಾನಮಂತ್ರಿಗಳ ನಿವಾಸದ ರಸ್ತೆಯಲ್ಲಿಯೇ ಎಷ್ಟು ರಸ್ತೆಗುಂಡಿಗಳಿವೆ ಎಂಬುದನ್ನು ಮಾಧ್ಯಮದವರು ಪರಿಶೀಲಿಸಬೇಕು. ಕರ್ನಾಟಕದ ಬಗ್ಗೆ ಮಾತ್ರ ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ




