ರಾಜಕೀಯ
ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಗುರುವಾರ ಶಿವಕುಮಾರ್ ಬಣದ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿ, ಪ್ರೀತಿ ವಿಶ್ವಾಸಕ್ಕಾಗಿ ಊಟಕ್ಕೆ ಸೇರುತ್ತೇವೆ. ಅದನ್ನು ಬಣ ರಾಜಕೀಯ, ಶಕ್ತಿ ಪ್ರದರ್ಶನ ಎನ್ನುವುದು ಸರಿಯಲ್ಲ. ಅಧಿವೇಶನ ಮುಗಿದ ತಕ್ಷಣ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು. ಗುರುವಾರ ನಡೆದದ್ದು
ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ: ಸರ್ಕಾರ ಆದೇಶ
ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ತಂಡವು ಉಪ ಮುಖ್ಯ
ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್ ಹೇಳಿದ್ರೆ ಮಾತ್ರ ಬದಲಾವಣೆ: ಗಣಿಗ ರವಿಕುಮಾರ್
ಒಂದೆಡೆ ಊಟಕ್ಕೆ ಸೇರಿದ ತಕ್ಷಣ ನಾಯಕತ್ವ ಬದಲಾವಣೆಗೆ ಅಂದ್ರೆ ಹೇಗೆ. ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್ ಹೇಳಿದ್ರೆ ಮಾತ್ರ ಬದಲಾವಣೆ ಎಂದು ಮಂಡ್ಯದಲ್ಲಿ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಜ್ಯ ನಾಯಕತ್ವ ಬದಲಾವಣೆ ವಿಚಾರದಲ್ಲಿ
ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲಾಗದು: ಡಿಕೆ ಶಿವಕುಮಾರ್
“ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ , ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು
ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು
ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್
ಇನ್ಮುಂದೆ ಗ್ರಾಮಗಳಲ್ಲಿ ಮನೆಗಳಿಗೆ ನೀರು, ವಿದ್ಯುತ್ ಪಡೆಯಲು ಒಸಿ ಸಿಸಿ ರಗಳೆ ಇಲ್ಲ
ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಒಸಿ ಇಲ್ಲದ
ಕೇಂದ್ರ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ
ಕೇಂದ್ರ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ (91) ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸುದೀರ್ಘ ಕಾಲ ರಾಜಕೀಯವಾಗಿ ಸಕ್ರಿಯರಾಗಿದ್ದ ಶಿವರಾಜ್ ಪಾಟೀಲ್ ಲೋಕಸಭೆಯ ಸ್ಪೀಕರ್ ಆಗಿಯೂ
ದ್ವೇಷ ಭಾಷಣದ ಕಾನೂನು ವಿರುದ್ದ ಬಿಜೆಪಿಯಿಂದ ಕಾನೂನು ಹೋರಾಟ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇವತ್ತು ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನ ವಿರುದ್ದವಿದೆ. ನಾವು ಇದನ್ನು ಖಂಡಿಸುತ್ತೇವೆ ಅಲ್ಲದೇ ಇದರ ವಿರುದ್ದ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭೂ ವಿವಾದ: ಕಾನೂನು ಸಚಿವ ಹೆಚ್‌ಕೆ ಪಾಟೀಲ್ ಕುಟುಂಬದ ವಿರುದ್ಧ ಸುಪ್ರೀಂನಲ್ಲಿ ಅಕ್ಕ ತಂಗಿಗೆ ಗೆಲುವು
ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್‌ಕೆ ಪಾಟೀಲ್ ವಿರುದ್ಧ ಹುಬ್ಬಳ್ಳಿಯ ಅಕ್ಕ-ತಂಗಿ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದೆಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ತೀರ್ಪಿನ ಮೂಲಕ ಸರ್ವೋಚ್ಚ ನ್ಯಾಯಾಲಯ ಅಚ್ಚರಿಯುಂಟು ಮಾಡಿದೆ. ತಮಗೆ ಸೇರಿರುವ ಹುಬ್ಬಳ್ಳಿ ನಗರದ ಪಿಂಟೋ
ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋಟಿ ರೂ. ಕಾಮಗಾರಿ ಪ್ರಗತಿ: ಡಿಕೆ ಶಿವಕುಮಾರ್
“ಚಿಕ್ಕನಾಯಕನಹಳ್ಳಿ ತಾಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ , ವಿಜೆಎನ್ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳಿದ್ದು, 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲೂಕಿನಲ್ಲಿ ನಡೆಯುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ




