ರಾಜಕೀಯ
ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಮಾರ್ಚ್ 3ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಮಾರ್ಚ್ ೩ರಿಂದ ವಿಧಾನಸಭಾ ಅಧಿವೇಶನ ಆರಂಭಾಗಲಿದ್ದು, ಮಾರ್ಚ್ 7ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಾರಿಗೆ ಬೆಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ವೇಳೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ರಣತಂತ್ರ ರೂಪಿಸಲು ಕಾಂಗ್ರೆಸ್ ಪಕ್ಷದ ಶಾಸಕರನ್ನು ಸಿದ್ಧಗೊಳಿಸಲು ಶಾಸಕಾಂಗ ಪಕ್ಷದ ಸಭೆ
ಮಾರ್ಚ್ 4 ಬೆಂಗಳೂರಿನಲ್ಲಿ ವೀರಶೈವ, ಲಿಂಗಾಯಿತ ಮುಖಂಡರ ಸಭೆ: ರೇಣುಕಾಚಾರ್ಯ
ತುಮಕೂರು: ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷ ಖಾತೆ ತೆರೆಯುವಂತಾಗಲು ಹಗಲಿರುಳು ಪಕ್ಷಕ್ಕಾಗಿ ದುಡಿದ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ.ವಿಜಯೇಂದ್ರ ಅವರನ್ನು ಕೆಲ ಬಿಜೆಪಿ ಮುಖಂಡರು ಬಹಳ ಹೀನಾಯವಾಗಿ ಮಾತನಾಡುತಿದ್ದು, ಅವರಿಗೆ ಬಿ.ಎಸ್.ಯಡಿಯೂರಪ್ಪನವರ ಬಲ ಏನು ಎಂಬುದನ್ನು ತೋರಿಸುವ ಸಲುವಾಗಿ ಮಾರ್ಚ್
ರಾಜ್ಯಗಳ ತೆರಿಗೆ ಪಾಲು ಶೇ.40ಕ್ಕೆ ಕಡಿತ: ಸಿಎಂ ಸಿದ್ದರಾಮಯ್ಯ ಹೋರಾಟದ ಎಚ್ಚರಿಕೆ
ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ. ರಾಜ್ಯದ ತೆರಿಗೆ ಪಾಲನ್ನು ಶೇ. 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ
ತಪ್ಪು ಮುಚ್ಚಿಕೊಳ್ಳಲು ಸಿಎಂ ಕ್ಷೇತ್ರ ಮರುವಿಂಗಡಣೆ ಕುರಿತು ಅಪಸ್ವರ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಇದನ್ನು ರಾಜಕೀಯ ಗೊಳಿಸುತ್ತಿರುವುದು ದುರಾದೃಷ್ಟ ಇದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ
ಫೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಖುದ್ದು ಹಾಜರಾಗಲು ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಆದೇಶ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ ೧ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಕುರಿತು ಪೊಲೀಸರು
ಮಾ.15 ನಂತರ ನೂತನ ಬಿಜೆಪಿ ರಾಷ್ಟ್ರಾಧ್ಯಕ್ಷರ ನೇಮಕ!
ಕೇಂದ್ರ ಸಚಿವ ಜೆಪಿ ನಡ್ಡಾ ಅವರ ಮುಗಿದ ಹಿನ್ನೆಲೆಯಲ್ಲಿ ಮಾರ್ಚ್ 15ರ ನಂತರ ಬಿಜೆಪಿ ರಾಷ್ಟ್ರೀಯ ನೂತನ ಅಧ್ಯಕ್ಷರ ನೇಮಕ ಮಾಡಲು ಚಿಂತನೆ ನಡೆದಿದೆ. ವಿವಿಧ 12 ರಾಜ್ಯಗಳ ಪದಾಧಿಕಾರಿಗಳ ನೇಮಕಾತಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತುಂಬಾ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ
ಮೈಸೂರು ಒಡೆಯರ್ ಕುಟುಂಬಕ್ಕೆ 3,400 ಕೋಟಿ ರೂ.ನೀಡಿ: ರಾಜ್ಯಕ್ಕೆ ಸುಪ್ರೀಂ ನಿರ್ದೇಶನ
ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗೆಂದು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಒಂದು ವಾರ ದೊಳಗೆ 3,400 ಕೋಟಿ ರೂ. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮೊದಲೇ ತೂಕಡಿಸುವ ಜನಪ್ರತಿನಿಧಿಗಳಿಗೆ ಊಟದ ನಂತ್ರ ರಿಕ್ಲೈನರ್ ಚೇರ್ ಬೇರೆ ಕೊಡ್ಬೇಕಾ
ಅಧಿವೇಶನಗಳಿಗೆ ಹಾಜರಾಗುವುದಕ್ಕಿಂತ ಮಹತ್ವದ ಕೆಲಸ ಶಾಸಕರಿಗೆ ಬೇರಾವುದಿದೆ, ಅದಕ್ಕೂ ಗೈರು ಹಾಜರಾಗಿ ಕಲಾಪಗಳಿಗೆ ಚಕ್ಕರ್ ಹೊಡೆಯುತ್ತಾರೆಂದರೆ ಇವರನ್ನು ಆರಿಸಿ ಕಳಿಸುವ ಪ್ರಮೇಯವಾದರೂ ಏನಿದೆ, ಪ್ರೈಮರಿ ಶಾಲೆಯ ಮಕ್ಕಳು ಕೇವಲ ಎರಡು ಮೂರು ದಿನ ಶಾಲೆಗೆ ಚಕ್ಕರ್ ಹಾಕಿದಲ್ಲಿ ಅವರಿಗೆ ನಾನಾ ರೂಪದ
ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿ.ಕೆ. ಶಿವಕುಮಾರ್
ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಕುಂಭಮೇಳ ಹಾಗೂ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿಮ್ಮ
ಪರಿಶಿಷ್ಟ ಜಾತಿ, ಪಂಗಡದ ಹಣ ಬಜೆಟ್ ನಲ್ಲಿಮೀಸಲಿಡಿ: ಶ್ರೀರಾಮುಲು
ಮೈಸೂರು: ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಶೇ24.10ರಷ್ಟು ಹಣ ಮೀಸಲಾಗಿರಿ ಇರಿಸಿ ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದರು. ಮೈಸೂರು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಎಸ್ ಇಪಿ, ಟಿಎಸ್ ಪಿ ಅನುದಾನ




