ರಾಜಕೀಯ
ಶಿಕ್ಷಣದಿಂದ ಮಾತ್ರ ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ
ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಜೆಎಸ್‌ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಮೈಸೂರು ವತಿಯಿಂದ ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ
ಹಾಸನ ಗಣೇಶೋತ್ಸವ ದುರಂತ: ಸಂತ್ರಸ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರಕ್ಕೆ ಆರ್.ಅಶೋಕ ಆಗ್ರಹ
ಹಾಸನ ಗಣೇಶ ವಿಸರ್ಜನೆಯ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಮೃತದ ಕುಟುಂಬಗಳಿಗೆ ಭೇಟಿ ನೀಡಿ ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ
ಸಾಲ ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲ ಮನ್ನಾ ಇಲ್ಲ: ಡಿಕೆ ಸುರೇಶ್
“ಬೆಳೆಸಾಲ, ಹಸು ಸಾಲ ಪಡೆದು ಆರ್ಥಿಕವಾಗಿ ಸಬಲರಾಗಿ. ಬೆಂಗಳೂರಿಗೆ ವಲಸೆ ಹೋಗಿ ಸೆಕ್ಯುರಿಟಿ ಗಾರ್ಡ್ ಗಳಾಗಿ, ಹೋಟೆಲ್ ಕೆಲಸ ಮಾಡಿಕೊಂಡು ಕಷ್ಟದಲ್ಲಿ ಜೀವನ ತಳ್ಳಬೇಡಿ. ಸ್ವಂತ ಊರಿನಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಹೇಳಿದ್ದಾರೆ. ಬೆಂಗಳೂರು ಜಿಲ್ಲಾ
ಬಿಜೆಪಿ ಸಂಸದರು ರಾಜ್ಯದ ನೀರಾವರಿ ಯೋಜನೆಗಳು, ಅನುದಾನಗಳ ಬಗ್ಗೆ ಬಾಯಿ ಬಿಡಲಿ: ಡಿಸಿಎಂ
“ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಅನುದಾನ, ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಅನುಮತಿ ಸೇರಿದಂತೆ ಕರ್ನಾಟಕದ ಪರವಾಗಿ ಬಿಜೆಪಿ ಸಂಸದರು ಬಾಯಿ ಬಿಡಬೇಕು. ಇಲ್ಲದಿದ್ದರೆ ರಾಜಿನಾಮೆ ನೀಡಿ ಮರು ಚುನಾವಣೆ ಎದುರಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲೆಸೆದರು. ಲಕ್ಕವಳ್ಳಿಯ ಭದ್ರಾ
ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಲಾಭದಾಯಕವಾಗಿಸಬೇಕು: ಮುಖ್ಯಮಂತ್ರಿ
ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವುದು ಸಾಧ್ಯವಿಲ್ಲ. ಆದರೆ ಅದನ್ನು ಲಾಭದಾಯಕವಾಗಿಸಲು ಎಲ್ಲಾ ಪ್ರಯತ್ನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಡಳಿತ ಮಂಡ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ
ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ನಾಯಕರನ್ನು ಸುಮ್ಮನೆ ಬಿಡಬೇಕೆ?: ಸಿಎಂ ಸಿದ್ದರಾಮಯ್ಯ
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರನ್ನು ಸುಮ್ಮನೆ ಬಿಡಲು ಆಗುತ್ತದೆಯೇ? ಪೊಲೀಸರು ನಿಯಮದ ಪ್ರಕಾರ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚೋದನಕಾರಿ ಭಾಷಣ ಮಾಡಿದ ವಿರುದ್ಧ ಪ್ರಕರಣ ದಾಖಲಿಸಿಕೊಂಡರೆ, ಹಿಂದುಗಳ
ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಡಿಸಿಎಂ
“ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ತುಮಕೂರಿನ ಸುಂಕಾಪುರ ಬಳಿ ನಡೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪರಿವೀಕ್ಷಣೆ
ನೇಪಾಳದಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ: ಭಾರತೀಯ ಮಹಿಳೆ ಸಾವು
ನೇಪಾಳದಲ್ಲಿ ಕೆ.ಪಿ. ಒಲಿ ಶರ್ಮಾ ಸರ್ಕಾರ ಪತನಗೊಂಡ ಬಳಿಕ ಶಾಂತವಾಗಿದ್ದ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಹಿಂಸಾಚಾರ ಮತ್ತೆ ತಾರಕಕ್ಕೇರಿದ್ದು, ಉತ್ತರ ಪ್ರದೇಶ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ರಾಜೇಶಾ ಗೋಲಾ ಎಂಬ ಮಹಿಳೆ ಪತಿಯ ಜೊತೆ ನೇಪಾಳ ಪ್ರವಾಸಕ್ಕೆ ಹೋಗಿದ್ದರು. ಕಠ್ಮಂಡುವಿನ ಹಯಾತ್
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆ. 22ರಿಂದ ಅ. 7ರವರೆಗೆ
ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ
ಸಿಪಿ ರಾಧಾಕೃಷ್ಣನ್ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ
ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನ್ಕರ್ ಸೇರಿದಂತೆ ಗಣ್ಯರ ಸಮ್ಮುಖ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು.




