Tuesday, February 17, 2026
Menu

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ  ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಗುರುತಿಸಲಾಗಿರುವ ಅನರ್ಹ

ಸ್ಲಂ ಬೋರ್ಡ್‌ನಡಿ 42 ಸಾವಿರ ಮನೆಗಳ ನಿರ್ಮಾಣ, ಮೂಲಸೌಲಭ್ಯಗಳಿಗೆ ಅನುದಾನ

ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಸತಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳ ಬಗ್ಗೆ ವಿವರಿಸಿದರು.

ಜನರನ್ನು ವಿಭಜಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ:  ಡಿಕೆ ಶಿವಕುಮಾರ್ 

“ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ತರಾಟೆಗೆ ತೆಗೆದುಕೊಂಡಿದ್ದಾರೆ.  ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಅವರು  ಪ್ರತಿಕ್ರಿಯಿಸಿದರು. ಮದ್ದೂರು ಗಣೇಶ ವಿಸರ್ಜನೆ

ಬೆಳೆ ಹಾನಿ ಪರಿಹಾರ ವಿಳಂಬ ತಡೆಗೆ  ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಬದಲಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಶಿವಾನಂದ ಪಾಟೀಲ 

ಬೆಳೆ ಹಾನಿ ಪರಿಹಾರ ವಿತರಣೆಯನ್ನು ಸರಳೀಕರಣಗೊಳಿಸಲು ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಳಲ್ಲಿ ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ  ಶಿವಾನಂದ ಪಾಟೀಲ ರೈತರಿಗೆ ಭರವಸೆ ನೀಡಿದರು. ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ

ಕತಾರ್‌ನಲ್ಲಿ ಇಸ್ರೇಲ್‌ ಪಡೆ ವೈಮಾನಕ ದಾಳಿ: ಹಮಾಸ್‌ ನಾಯಕನ ಮಗ ಸೇರಿ ಆರು ಮಂದಿ ಸಾವು

ಕತಾರ್‌ ರಾಜಧಾನಿ ದೋಹಾದಲ್ಲಿ ಇಸ್ರೇಲ್‌ ಪಡೆಯು ಭೀಕರ ವಾಯುದಾಳಿ ನಡೆಸಿದ್ದು, ನಮ್ಮ ನಾಯಕನ ಪುತ್ರ ಸೇರಿ ಕನಿಷ್ಠ 6 ಮಂದಿ ಮೃತಪಟ್ಟಿರುವುದಾಗಿ ಹಮಾಸ್‌ ಬಂಡುಕೋರರ ಗುಂಪು ಅಧಿಕೃತ ಹೇಳಿಕೆ ನೀಡಿದೆ. ಈ ದಾಳಿಯಲ್ಲಿ ಹಮಾಸ್ ನಾಯಕ ಖಲೀಲ್ ಅಲ್-ಹಯ್ಯನ ಪುತ್ರ, ಸಹಾಯಕ

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಕರೆ ತರಲು ರಾಜ್ಯ ಸರ್ಕಾರ ಕ್ರಮ

ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ಅಲ್ಲಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ

ಸಿಪಿ ರಾಧಾಕೃಷ್ಣನ್ ಭಾರತದ ನೂತನ ಉಪರಾಷ್ಟ್ರಪತಿ

ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಭಾರತದ ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಭಾರತದ 15ನೇ ಉಪರಾಷ್ಟ್ರಪತಿ. ರಾಧಾಕೃಷ್ಣನ್ ಅವರು ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು

ಮದ್ದೂರು ಗಲಭೆ: ಜಾತಿಧರ್ಮ ಪರಿಗಣಿಸದೆ ತಪ್ಪೆಸಗಿದವರ ವಿರುದ್ಧ ಕ್ರಮವೆಂದ ಸಿಎಂ

ಮದ್ದೂರಿನ ಗಲಭೆ  ಪ್ರಕರಣಕ್ಕೆ ಸಂಬಂಧಿಸಿದಂತೆ  21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೆ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮದ್ದೂರು ಗಲಭೆ ಗೆ ಸಂಬಂಧಪಟ್ಟಂತೆ

ಸೋಷಿಯಲ್‌ ಮೀಡಿಯಾ ಬ್ಯಾನ್‌ ಹಿಂಪಡೆದರೂ ನೇಪಾಳ ಪ್ರಧಾನಿ ಒಲಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರ

ನೇಪಾಳದಲ್ಲಿ ಸೋಷಿಯಲ್‌ ಮೀಡಿಯಾಗಳ ಬ್ಯಾನ್‌ ಹಿಂಪಡೆಯಲಾಗಿದ್ದರೂ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜಕೀಯ ಭ್ರಷ್ಟಾಚಾರ ಮತ್ತು ಆಡಳಿತದಲ್ಲಿ ಪಾರದರ್ಶಕತೆ ಕೊರತೆ ಖಂಡಿಸಿ ನೇಪಾಳದ ನಾಗರಿಕರು ದಂಗೆ ಎದ್ದು ಪ್ರಧಾನಮಂತ್ರಿ ಕೆಪಿ ಶರ್ಮಾ ಒಲಿ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಕಠ್ಮಂಡುವಿನಲ್ಲಿ ಹಿಂಸಾತ್ಮಕ

ಮುಜರಾಯಿ ಇಲಾಖೆಗೆ 27.70 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಸ್ವಂತ ಕಟ್ಟಡ

ರಾಜ್ಯದ ದೇವಸ್ಥಾನಗಳಿಗೆ ಸೂರು ಕಲ್ಪಿಸುವ ಹಾಗೂ ದೇಗುಲಗಳ ನಿರ್ವಹಣೆ ಮಾಡುವ ಧಾರ್ಮಿಕ ದತ್ತಿ ಇಲಾಖೆಗೆ ಸ್ವಂತ ಸೂರಿಲ್ಲದ ಕಾರಣ 5 ಮಹಡಿಯ ಧಾರ್ಮಿಕ ಸೌಧ ನಿರ್ಮಾಣಕ್ಕೆ ರಾಮಲಿಂಗ ರೆಡ್ಡಿ ಪ್ಲ್ಯಾನ್ ಮಾಡಿದ್ದಾರೆ. ರಾಜ್ಯದಲ್ಲಿನ ಸಾವಿರಾರು ದೇವಸ್ಥಾನಗಳ ಸುಪರ್ದಿ, ಅವುಗಳ ನಿರ್ವಹಣೆಗೆ ಅನುದಾನ