ರಾಜಕೀಯ
ಪಂಚ ಗ್ಯಾರಂಟಿ ಯೋಜನೆಯಡಿ ರೂ. 97,813 ಕೋಟಿ ಅನುದಾನ ವೆಚ್ಚ
ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಮುಖ್ಯಾಂಶಗಳು ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ 544ಕೋಟಿ ಫಲಾನುಭವಿಗಳಿಗೆ ರೂ.13,903ಕೋಟಿ
ಪಕ್ಷದ ಬಲವರ್ಧನೆಗೆ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ: ಡಿಕೆ ಸುರೇಶ್
ಒರಿಸ್ಸಾ ರಾಜ್ಯದಲ್ಲಿ ಜಿಲ್ಲಾ ಹಾಗೂ ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಸೇರಿದಂತೆ ಜಿಲ್ಲಾ ಅಧ್ಯಕ್ಷರುಗಳ ಆಯ್ಕೆಯ ವಿಚಾರವಾಗಿ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ ನಡೆಸಲಾಗುತ್ತಿದೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಹೇಳಿದರು. ಒಡಿಸ್ಸಾ
ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ
ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ
ಗಣೇಶ ಮೆರವಣಿಗೆಯಲ್ಲಿ ಕಲ್ಲೆಸೆತ: ನಾಳೆ ಮದ್ದೂರು ಬಂದ್
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಾನುವಾರ ಮದ್ದೂರಿನಲ್ಲಿ ಕಲ್ಲು ತೂರಾಟ ನಡೆದು ಎರಡೂ ಕೋಮುಗಳ ಹಲವು ಯುವಕರು ಗಾಯಗೊಂಡಿದ್ದು, ಇಂದು ನಿಷೇಧಾಜ್ಞೆ ಜಾರಿಯಲ್ಲಿದೆ. ನಾಳೆ ಅಂದರೆ ಮಂಗಳವಾರ ಕೃತ್ಯ ಖಂಡಿಸಿ ಹಿಂದೂ ಮುಖಂಡರು ಮದ್ದೂರು ಬಂದ್‌ಗೆ ಕರೆ ನೀಡಿದ್ದಾರೆ. ಮಂಗಳವಾರ ಮದ್ದೂರು
ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್ ಸ್ಪ್ರಿಂಗ್‌ಬೋರ್ಡ್ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಸಿಎಸ್‌ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ
ತುಂಗಾಭದ್ರಾ ಡ್ಯಾಂನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್, ಎಂಟು ಅಳವಡಿಕೆಗೆ ಸಿದ್ಧ
ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅಧೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ
ಹೆಸರಘಟ್ಟದಲ್ಲಿ ಕ್ಯೂ-ಸಿಟಿಗೆ 6.17 ಎಕರೆ ಜಾಗ ಮಂಜೂರು
ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ
ಚಿಂತಾಮಣಿಯಲ್ಲಿ ವಿವಾದ ಸೃಷ್ಟಿಸಿದ ಪ್ಯಾಲೆಸ್ತೀನ್ ಧ್ವಜ
ಕೇಂದ್ರ ಸರ್ಕಾರವೇ ಪ್ಯಾಲೆಸ್ತೀನ್ ಪರ ಎಂದು ಹೇಳಿದರೂ ಕಲಬುರಗಿ ಬಳಿಕ ಚಿಕ್ಕಬಳ್ಳಾಪುರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಾಟ ವಿವಾದ ಭುಗಿಲೆದ್ದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ದರ್ಗಾ ಉರುಸ್ ವೇಳೆ ಸರ್ಕಾರಿ ಗಂಧೋತ್ಸವ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಾಟ ಮಾಡಿದ್ದ ಪುಂಡರು ಪ್ಯಾಲೆಸ್ಟೈನ್ ಧ್ವಜ
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ: ಸಂಪುಟದಲ್ಲಿ ಚರ್ಚೆಯ ಭರವಸೆಯಿತ್ತ ಡಿಸಿಎಂ
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಏರ್ಪಡಿಸಿದ್ದ “ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ” ಕಾರ್ಯಕ್ರಮದಲ್ಲಿ ಶಿವಕುಮಾರ್
ಕಾಂಗ್ರೆಸ್ ನಾಯಕರು ರೈತರಿಗೆ ಅಪಮಾನ ಮಾಡಿರುವುದು ಇದೇನು ಮೊದಲಲ್ಲ: ಆರ್ ಅಶೋಕ್ ಕಿಡಿ
ಅಧಿಕಾರದ ಮದದಿಂದ ಕಾಂಗ್ರೆಸ್ ನಾಯಕರು ರೈತರ ಮೇಲೆ ದಬ್ಬಾಳಿಕೆ ಮಾಡಿರುವುದು, ಅನ್ನದಾತರಿಗೆ ಅಪಮಾನ ಮಾಡಿರುವುದು ಇದೇನು ಮೊದಲಲ್ಲ. ಆ ಪಟ್ಟಿ ಬಹಳ ದೊಡ್ಡದಿದೆ. ಆದರೆ ಹಿರಿಯರು, ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಹ ಈಗ ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದು ಕನ್ನಡ ನಾಡಿನ ಕೃಷಿಕರ




