Wednesday, November 19, 2025
Menu

ಬಿಆರ್ ಪಾಟೀಲ್ ನೀತಿ ಯೋಜನಾ ಆಯೋಗದ ಅಧ್ಯಕ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿ.ಆರ್.ಪಾಟೀಲ್ ಅವರಿಗೆ  ಸಂಪುಟ ದರ್ಜೆ ಸ್ಥಾನಮಾನ ಮತ್ತು ಎಲ್ಲಾ ಸೌಲಭ್ಯ ನೀಡವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಿಎಂ ಸಲಹೆಗಾರ

ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ 

ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ. 

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ  ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ. 2022 ಫೆಬ್ರವರಿ 17 ರಂದು ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯ ಪದಾಧಿಕಾರಿಗಳ ತಂಡವು ಆಯ್ಕೆಯಾಗಿದ್ದ ಸಂದರ್ಭದಲ್ಲಿ

ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಭಾರತದ ಪ್ರಜಾಪ್ರಭುತ್ವಕ್ಕೆ ಅಪಮಾನ: ಡಿ.ಕೆ‌.ಶಿವಕುಮಾರ್

ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಯೋಜಿತವಾಗಿ ನಡೆಸಿದ ಹೇಯ ಕೃತ್ಯ. ನಮ್ಮ ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅಪಮಾನ. ಕೇರಳದ ಕಮ್ಯುನಿಸ್ಟ್ ಪಕ್ಷದಿಂದ ಈ ರೀತಿಯ ಕೃತ್ಯವನ್ನು ನಿರೀಕ್ಷೆ ಮಾಡಿರಲಿಲ್ಲ. ಹುತಾತ್ಮ ಯುವ ಕಾರ್ಯಕರ್ತರ ಹೆಸರಿನಲ್ಲಿ ಸ್ಥಾಪಿಸಲಾಗುವ ಸಾಂಸ್ಕೃತಿಕ ಕೇಂದ್ರಕ್ಕೆ

ಬಿಜೆಪಿ ಮುಖ್ಯಮಂತ್ರಿಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ: ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ

ರೈತರ ಬೇಡಿಕೆಗಳಿಗೆ ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡ ರೊಂದಿಗೆ  2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ,  ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ

ಫೋಟೋ ಶೂಟಿಂಗ್ ಮಾಡಿದರೆ ಸಮಸ್ಯೆಗಳು ಪರಿಹಾರ ಆಗಲ್ಲ: ಡಿಸಿಎಂಗೆ ಆರ್‌. ಅಶೋಕ್‌ ಟಾಂಗ್‌

ವೈಟ್ ಟಾಪಿಂಗ್ ಕಾಮಗಾರಿ ಹೆಸರಿನಲ್ಲಿ ಫೋಟೋ ಶೂಟಿಂಗ್ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರ ಆಗುತ್ತಾ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ  ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕಾಲೆಳೆದಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನಿಮಗೆ ಬ್ರ್ಯಾಂಡ್ ಬೆಂಗಳೂರಿನ

ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್: ಡಿಸಿಎಂ

ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ ಎಂದು

ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಸಿದ್ಧರಾಗಿ: ಡಿಕೆ ಶಿವಕುಮಾರ್‌

ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸ ದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಬೆಂಗಳೂರು ನಗರ ಪಾಲಿಕೆ ಚುನಾವಣೆ ಯನ್ನು ನಡೆಸಬೇಕಾಗಿದ್ದು

ಬುರ್ಖಾ ಹಾಕಿಕೊಂಡು ಹೋಗಿ ಗಲಾಟೆ ಮಾಡಿರುವ ವೀಡಿಯೊವಿದೆ ಎಂದ ಬಿಕೆ ಹರಿಪ್ರಸಾದ್‌

ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡಲು ಹೋಗುತ್ತಾರೆ, ಇದೇನು ಹೊಸದಲ್ಲ, ನನ್ನ ಬಳಿ ವೀಡಿಯೊ ಇದೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರೆಸ್ಸೆಸ್‌ಗೆ ನೂರು ವರ್ಷ ತುಂಬುತ್ತಿದೆ.