ರಾಜಕೀಯ
ಡಿಕೆ ಶಿವಕುಮಾರ್ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ: ಆರ್.ಅಶೋಕ
ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ “ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ.” ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ. ಈಗ “ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ” ಎಂದು ರೈತರ ಅಸಹಾಯಕರು ಅನ್ನುವ ರೀತಿ ಹೀಯಾಳಿಸಿ ಮಾತನಾಡಿದ್ದೀರಿ. ಡಿಕೆ ಶಿವಕುಮಾರ್ ಅವರೇ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್: ಸಂಪುಟ ನಿರ್ಣಯ
ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ವ್ಯವಸ್ಥೆ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಬಳಕೆಗೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಚುನಾವಣಾ ಪ್ರಕ್ರಿಯೆಯಲ್ಲಿ ಅಗತ್ಯವಾದ ಕೆಲವು ಕಾನೂನು ಹಾಗೂ
ಜಿಬಿಐಟಿ ಯೋಜನೆ ಭೂ ಸಂತ್ರಸ್ತ ರಿಗೆ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿ ಪರಿಹಾರ: ಡಿಸಿಎಂ
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಆಯಾ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೂ ಪರಿಹಾರ ನೀಡಲು ತೀರ್ಮಾನಿಸಿಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ
ರಷ್ಯಾದಿಂದ ತೈಲ ಆಮದು ಮುಂದುವರಿಸಿದ್ರೆ ಮತ್ತಷ್ಟು ಸುಂಕ: ಭಾರತಕ್ಕೆ ಟ್ರಂಪ್ ಬೆದರಿಕೆ
ಭಾರತವು ರಷ್ಯಾದಿಂದ ತೈಲ ಆಮದು ಮುಂದುವರಿಸಿದರೆ ಮತ್ತಷ್ಟು ಸುಂಕ ಪಾವತಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಚೀನಾದ ನಂತರ ಭಾರತವೇ ರಷ್ಯಾದ ತೈಲದ ಅತಿದೊಡ್ಡ ಖರೀದಿದಾರ ಎಂದು ಈ ಹಿಂದೆ ಟ್ರಂಪ್ ಅಸಹನೆ ಹೊರ ಹಾಕಿದ್ದರು.
ಕೋಲಾರದ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು. ನಂತರದ ಮಾತನಾಡಿದ ಅವರು, ಬೆಂಗಳೂರಿನ ಸುತ್ತಮುತ್ತಲಿನ
ಜಕ್ಕೂರು ಏರೋಡ್ರೋಂ ವಿಸ್ತರಣೆ ಹಾಗೂ ಸ್ಥಳ ಬಳಕೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ
ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನ: ಮೂರು ದಿನಗಳಲ್ಲಿ ಅಂತಿಮ ತೀರ್ಮಾನವೆಂದ ಡಿಕೆ ಶಿವಕುಮಾರ್
ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ
ಜಿಬಿಎ ನೂತನ ಪಾಲಿಕೆ ಕಚೇರಿಗಳಿಗೆ ನ. 1 ರಂದು ಭೂಮಿಪೂಜೆ, ಐದು ಪಾಲಿಕೆಗಳಿಗೆ 300 ಕೋಟಿ ರೂ. : ಡಿಸಿಎಂ
ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್
ಬಿಆರ್‌ಎಸ್ ಶಾಸಕಿ ಸ್ಥಾನಕ್ಕೆ ಕವಿತಾ ರೆಡ್ಡಿ ರಾಜೀನಾಮೆ
ಬಿಆರ್‌ಎಸ್‌ನಿಂದ ಅಮಾನತುಗೊಂಡ ಕೆ. ಕವಿತಾ ರೆಡ್ಡಿ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್‌ಎಸ್‌ಗೆ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಪರಿಷತ್ತಿನ ಸ್ಪೀಕರ್‌ಗೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆಯಾದಾಗಿನಿಂದ ನಾನು ನಾನಾ ಕಾರಣಗಳಿಗಾಗಿ
ಶಾಸಕ ಮುನಿರತ್ನ ವಿರುದ್ಧ ಎರಡನೇ ಅತ್ಯಾಚಾರ ಪ್ರಕರಣ: ಬಿ ರಿಪೋರ್ಟ್ ಸಲ್ಲಿಸಿದ ಎಸ್‌ಐಟಿ
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಎಸ್‌ಐಟಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಬಿ ರಿಪೋರ್ಟ್ ಸಲ್ಲಿಸಿದ್ದು, ಈ ಆರೋಪ ಸಾಬೀತಾಗಿಲ್ಲ ಎಂದು ಹೇಳಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇನ್ನೂ ಬಿ ರಿಪೋರ್ಟ್ ಅನ್ನು ಮಾನ್ಯ




