ರಾಜಕೀಯ
ಆಸ್ಪತ್ರೆ ಬಗ್ಗೆ ಕೇಳಿದ್ರೆ ಪತ್ರಕರ್ತೆಗೆ ಉಡಾಫೆ ಉತ್ತರವಿತ್ತ ಆರ್.ವಿ. ದೇಶಪಾಂಡೆ ನಡೆಗೆ ವ್ಯಾಪಕ ಟೀಕೆ
ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪತ್ರಕರ್ತೆಯೊಬ್ಬರು ಪ್ರಶ್ನಿಸಿದಾಗ, ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಸಂಬದ್ಧ ಮತ್ತು ಅವಮಾನಕರವಾಗಿ ಉಡಾಫೆ ಉತ್ತರ ನೀಡಿರುವುದಕ್ಕೆ ಮಾಧ್ಯಮಗಳು ಸೇರಿದಂತೆ ನಾಗರಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ದೇಶಪಾಂಡೆ ಈ ಸಂಬಂಧ ವಿವಾದಾಸ್ಪದ ಹೇಳಿಕೆಯೊಂದಿಗೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದಾರೆ. ಪತ್ರಕರ್ತೆಯು ನಿಮ್ಮ ಕಾಲಾವಧಿಯಲ್ಲಿ ಜಿಲ್ಲೆಗೆ ಒಂದು ಉತ್ತಮ ಆಸ್ಪತ್ರೆ ನಿರ್ಮಿಸಿಕೊಡಿ ಎಂದು ಮನವಿ ಮಾಡಿದಾಗ, ದೇಶಪಾಂಡೆ, ನಿನ್ನ ಹೆರಿಗೆಗೆ ಆಸ್ಪತ್ರೆ
ಪ್ರವಾಸೋದ್ಯಮ,ಪೌರಾಣಿಕ, ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ : ಸಿಎಂ
ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ
ಜಮೀರ್ ಅಹ್ಮದ್‌ಗೆ 3.70 ಕೋಟಿ ರೂ. ಸಾಲ ನೀಡಿದ್ದ ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್
ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಲೋಕಾಯುಕ್ತ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ ಬಳಿಕ ಜಮೀರ್‌ಗೆ ಸಾಲ ನೀಡಿರುವ ಕೆಜಿಎಫ್ ಬಾಬು ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ನಟಿ ರಾಧಿಕಾ ಕುಮಾರಸ್ವಾಮಿ
ಸೌಜನ್ಯ ತಾಯಿ ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯ ಬಿಜೆಪಿಗೆ ಇದೆಯೇ ?
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ,
ಜಿಬಿಎ ನವೆಂಬರ್ 1ಕ್ಕೆ ವಾರ್ಡ್ ಪುನರ್ ವಿಂಗಡಣೆ, 30ಕ್ಕೆ ಮೀಸಲು ಅಧಿಸೂಚನೆ ಪ್ರಕಟ
ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ,ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, 02-09-2025ರಂದು ಬೆಂಗಳೂರು ಮಹಾನಗರದ
ಶಾಂಘಾಯ್ ಶೃಂಗಸಭೆ ಬಳಿಕ ಹೆಚ್ಚಿತು ಅಮೆರಿಕದ ತಳಮಳ
ಭಾರತದ ಜೊತೆ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಳ್ಳುವ ರೀತಿ ಅಮೆರಿಕ ಕೆಲವೊಂದು ನೀತಿಗಳನ್ನು ಜಾರಿಗೊಳಿಸಿದ ಪರಿಣಾಮ ಇಂದು ಅಮೆರಿಕಕ್ಕೆ ಭಾರಿ ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ಟ್ರಂಪ್‌ಗೆ ಬುದ್ಧಿ ಬರಲಿ… ಶಾಂಘಾಯ್ ಶೃಂಗಸಭೆ ಬಳಿಕ ಅಮೆರಿಕದ ತಳಮಳ ಅಧಿಕಗೊಂಡಿದೆ. ಭಾರತದ ದಿಟ್ಟ
ನ್ಯಾ.ನಾಗಮೋಹನ್‍ದಾಸ್ ಅಥವಾ ಮಾಧುಸ್ವಾಮಿ ವರದಿಗೆ ಅನುಮೋದನೆ: ಗೋವಿಂದ ಕಾರಜೋಳ ಆಗ್ರಹ
ಬೆಂಗಳೂರು: ರಾಜ್ಯ ಸಚಿವ ಸಂಪುಟದ ಸಭೆ ಇದೇ 4ರಂದು ನಡೆಯಲಿದೆ. ಆ ಸಂದರ್ಭದಲ್ಲಿ ನಾಗಮೋಹನ್‍ದಾಸ್ ಅವರ ವರದಿ ಅಥವಾ ಮಾಧುಸ್ವಾಮಿಯವರ ನೇತೃತ್ವದ ವರದಿಯನ್ನು ಒಪ್ಪಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು
ಬಿಜೆಪಿ ಮಾಡ್ತಿರೋದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ
ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಶ್ರವಣ ಸಮಸ್ಯೆ ಪತ್ತೆ ನಿಜಕ್ಕೂ ದೊಡ್ಡ ಸಾಧನೆ: ಸಿಎಂ
ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು
ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್




