Wednesday, February 18, 2026
Menu

ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ:  ಡಿಕೆ ಶಿವಕುಮಾರ್

ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ  ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು

ದೊಡ್ಡಣ್ಣನಿಗೆ ಶಾಂಘಾಯ್ ಶೃಂಗ ಸಭೆಯ ಗುದ್ದು.. !

ಶಾಂಘಾಯ್ ಶೃಂಗಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಭಾರತ ಗಟ್ಟಿ ಧ್ವನಿ ಮೂಡಿಸಿದೆ. ಪೆಹಲ್‌ಗಾವ್ ನರಮೇಧದಲ್ಲಿ ಉಗ್ರರ ಪಾತ್ರವಿರುವುದನ್ನು ಭಾರತವು ಈ ವೇಳೆ ಒತ್ತಿ ಹೇಳಿದೆ. ಶಾಂಘಾಯ್ ಶೃಂಗಸಭೆಯು ಭಾರತದ ರಾಜತಾಂತ್ರಿಕತೆಯ ಜಯದ ಮೊದಲ ಅಧ್ಯಾಯವೊಂದೇ ಅಲ್ಲ. ಭವಿಷ್ಯದಲ್ಲಿ ರಷ್ಯಾ ಮತ್ತು ಚೀನಾ ಅಲ್ಲದೆ

ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲು: ಆರ್‌. ಅಶೋಕ

ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು. ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಯಲಾಗಿದೆ

ರಷ್ಯಾ, ಉಕ್ರೇನ್‌ ಸಂಘರ್ಷ ಶೀಘ್ರ ಕೊನೆಯಾಗಿ ಶಾಂತಿ ನೆಲೆಸಲಿ: ಪ್ರಧಾನಿ ಮೋದಿ

ರಷ್ಯಾ ಮತ್ತು ಉಕ್ರೇನ್ ಎರಡೂ ದೇಶಗಳು ಶಾಂತಿಯನ್ನು ಸಾಧಿಸಲು ಮುಂದುವರಿಯಬೇಕೆಂದು ಆಶಿಸುತ್ತೇವೆ. ಈ ಸಂಘರ್ಷ ಆದಷ್ಟು ಬೇಗ ಕೊನೆಗೊಳ್ಳಬೇಕೆಂದು ಭಾರತ ಬಯಸುತ್ತದೆ. ಉಕ್ರೇನ್‌ ಮತ್ತು ರಷ್ಯಾದ ನಡುವೆ ಶಾಶ್ವತ ಶಾಂತಿಯನ್ನು ಕಂಡುಕೊಳ್ಳುವ ಮಾರ್ಗವು ಇಡೀ ಜಗತ್ತಿನ ಮಾನವೀಯತೆಯ ಕರೆಯಾಗಿದೆ ಎಂದು ಪ್ರಧಾನಿ

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು  ಮಾತನಾಡಿದರು.‌ ನನ್ನ ಊರಿನ ಶಾಲೆಯಲ್ಲಿ ನಾನು

ಸಚಿವ ಜಮೀರ್‌ಗೆ 2.5 ಕೋಟಿ ರೂ. ಸಾಲ: ರಾಧಿಕಾ ಕುಮಾರಸ್ವಾಮಿಯ ವಿಚಾರಣೆ ನಡೆಸಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ಜಮೀರ್‌ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಪತ್ತೆಯಾಗಿರುವ

ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ

ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ,

ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಕೆ ಶಿವಕುಮಾರ್ 

ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು  ಅರಮನೆ ಮೈದಾನದಲ್ಲಿ ಭಾನುವಾರ ನಡೆದ

ಭಾರತ ಮತ್ತು ಚೀನಾ ಅಭಿವೃದ್ಧಿಯ ಪಾಲುದಾರರು: ಪ್ರಧಾನಿ ಮೋದಿ

ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಚೀನಾದೊಂದಿಗಿನ ಸಂಬಂಧಗಳ ಬಲಪಡಿಸುವಿಕೆ ಮತ್ತು ಮುಂದುವರಿಸುವಿಕೆ ಭಾರತದ ಬದ್ಧತೆಯಾಗಿದೆ. ಭಾರತ ಮತ್ತು ಚೀನಾ ಅಭಿವೃದ್ಧಿಯ ಪಾಲುದಾರರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಚಾಮುಂಡೇಶ್ವರಿ ಚಲೋ’ :  ಆರ್.ಅಶೋಕ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ