ರಾಜ್ಯ
ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಅಪಘಾತಕ್ಕೆ ಬಲಿ!
ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಎರಡು ಪ್ರತ್ಯೇಕ ಅಪಾಘಾತ ಪ್ರಕರಣಗಳಲ್ಲಿ ಮೃತಪಟ್ಟಿದ್ದಾರೆ. ಗುಜರಾತ್ ನ ಪೋರ್ ಬಂದರ್ ಬಳಿ ಸಂಭವಿಸಿದ ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನಿವಾಸಿಗಳಾದ ವಿಶ್ವನಾಥ ಅವಜಿ (55) ಮತ್ತು ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟಿದ್ದಾರೆ. ವಾಹನದಲ್ಲಿ ಒಟ್ಟು 17 ಮಂದಿ ಪ್ರಯಾಗ್ರಾಜ್ಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ನಿಂತಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಪೋರಬಂದರ್
ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿಮಠದ ಸ್ವಾಮೀಜಿ ಭವಿಷ್ಯ
ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಸದ್ಯಕ್ಕೇನು ತೊಂದರೆಯಿಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್
ಅರಣ್ಯ ಇಲಾಖೆಯ ಮುನ್ನೆಚ್ಚರಿಕೆ ಪಾಲಿಸಲು ಸಚಿವ ಈಶ್ವರ ಖಂಡ್ರೆ ಮನವಿ
ಬೀದರ್: ರಾಜ್ಯದಲ್ಲಿ ಕಾಡಾನೆ ದಾಳಿಗೆ ನಿನ್ನೆ ಮತ್ತು ಇಂದು ಇಬ್ಬರು ಸಾವಿಗೀಡಾಗಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಸಾರ್ವಜನಿಕರು ಇಲಾಖೆಯ ಮುನ್ನೆಚ್ಚರಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.
ಪೊಲೀಸರಿಂದ ಒತ್ತಡದ ಆರೋಪ: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಏ.8ಕ್ಕೆ ಮುಂದೂಡಿಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯ ಏಪ್ರಿಲ್ ೮ಕ್ಕೆ ಮುಂದೂಡಿದೆ. ನಟ ದರ್ಶನ್, ಪವಿತ್ರಾ ಗೌಡ ಮತ್ತು ಸಹಚರರು ಕೊಲೆ ಮಾಡಿದ್ದಾರೆ ಎಂಬ ಪೊಲೀಸರ ಆರೋಪದ ಕುರಿತು ವಿಚಾರಣೆ ಮಂಗಳವಾರ ನಡೆದಿದ್ದು, ದರ್ಶನ್ ಮತ್ತು ಪವಿತ್ರಾ
ಕನ್ನಡ ಧ್ವಜ ಹಿಡಿದು ಜೈ ಕರ್ನಾಟಕವೆಂದ ಮಹಾರಾಷ್ಟ್ರ ಚಾಲಕ
ಮಹಾರಾಷ್ಟ್ರದಲ್ಲಿ ಕನ್ನಡ, ಕನ್ನಡಿಗರ ಮೇಲೆ ಮರಾಠಿಗರು ನಡೆಸುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ಬಾಗಲಕೋಟೆಯಲ್ಲಿ ಕನ್ನಡಿಗರು ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಚಿತ್ರದುರ್ಗ ಹಾಗೂ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕನ್ನಡಪರ ಹೋರಾಟಗಾರರು ಮಹಾರಾಷ್ಟ್ರ ಬಸ್ಗೆ ‘ಜೈ ಕರ್ನಾಟಕ’ ಎಂದು ಬರೆದು ಕನ್ನಡಾಭಿಮಾನ ಮೆರೆದಿದ್ದಾರೆ. ಇಳಕಲ್
ಐಎಂಎ ಹಗರಣ ಸಂತ್ರಸ್ತರಿಗೆ ನಿಗದಿತ ಪರಿಹಾರದ ಭರವಸೆ ನೀಡಿದ ಸಚಿವ ಕೃಷ್ಣ ಭೈರೇಗೌಡ
ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡಿರುವ ಎಲ್ಲ ಸಂತ್ರಸ್ತರಿಗೂ ರಂಜಾನ್ ಹಬ್ಬಕ್ಕೂ ಮೊದಲು ನಿಗದಿತ ಪರಿಹಾರ ಹಣ ನೀಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಸಂಬಂಧ ವಿಕಾಸಸೌಧ ಕಚೇರಿಯಲ್ಲಿ ಸಭೆ
ಕೇಣಿ ಗ್ರೀನ್ ಫೀಲ್ಡ್ ಬಂದರು ವಿರೋಧಿಸಿ ನಾಗರಿಕರ ಪ್ರತಿಭಟನೆ ತೀವ್ರ, ನಿಷೇಧಾಜ್ಞೆ ಜಾರಿ
ಕೇಣಿ ಗ್ರೀನ್ ಫೀಲ್ಡ್ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರ ವಿರೋಧ ತೀವ್ರಗೊಂಡಿದ್ದು, ಕೇಣಿ ಗ್ರಾಮದಲ್ಲಿ ಪೊಲೀಸ್ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. ನಾಗರಿಕರ ವಿರೋಧದ ನಡುವೆಯೂ ಯೋಜನೆ ಜಾರಿಗೆ ರಾಜ್ಯ ಸರಕಾರ ಮುಂದಾಗಿ ಪ್ರದೇಶದ ಭೌಗೋಳಿಕ ತಾಂತ್ರಿಕ ಅಧ್ಯಯನ ಕಾಮಗಾರಿಗಾಗಿ ಗುತ್ತಿಗೆ ಕಂಪನಿ ಮುಂದಾಗಿದೆ.
ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿ.ಕೆ. ಶಿವಕುಮಾರ್
ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ
ಬಂಗಾರಪೇಟೆಯಲ್ಲಿ ಕಾಡಾನೆ ದಾಳಿಗೆ ಬಲಿಯಾದ ಮಹಿಳೆ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿ ಬಳಿ ಒಂಟಿ ಕಾಡಾನೆಯ ದಾಳಿಗೆ ಒಳಗಾಗಿ ರೈತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಜುಳ (44) ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿಈ ದುರಂತ ನಡೆದಿದೆ. ಘಟನೆಯಿಂದ ಸಾಕರಸನಹಳ್ಳಿ
ದಲಿತ ವಿದ್ಯಾರ್ಥಿಗಳ ಊಟದ ತಟ್ಟೆ ತೊಳೆಯಲ್ಲವೆಂದ ಸಹಾಯಕಿ ಮನೆಗೆ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆಗಳನ್ನು ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯನ್ನು ಜಿಲ್ಲಾಡಳಿತ ಮನೆಗೆ ಕಳಿಸಿ ಪರ್ಯಾಯ ವ್ಯವಸ್ಥೆ ಮಾಡಿದೆ. ಅಡುಗೆ ಸಹಾಯಕಿಯ ಈ ಕಾರ್ಯವೈಖರಿಯಿಂದ ಮಧ್ಯಾಹ್ನದ