Wednesday, November 11, 2026
Menu

ಅಶೋಕ್, ವಿಜಯೇಂದ್ರ ಅವರನ್ನು ಸರಿಸಿ ಅಧಿಕಾರಕ್ಕೆ ಬರೋ ಆಸೆ ಕುಮಾರಸ್ವಾಮಿದು: ಡಿಕೆ ಶಿವಕುಮಾರ್ 

ಚುನಾವಣೆ ಹತ್ತಿರ ಬರಲಿ ಅಶೋಕ್ ಹಾಗೂ ವಿಜಯೇಂದ್ರ ಅವರಿಗೆ ಯಾವ ಅಧಿಕಾರವೂ ಇರೋದಿಲ್ಲ. ಬೇರೆಯವರು (ಕುಮಾರಸ್ವಾಮಿ)ಪ್ಯಾರಾಚೂಟ್ ಮೂಲಕ ಇಳಿಯುತ್ತಾರೆ ಎಂದು ಸಿಎಂ  ಕೆ ಶಿವಕುಮಾರ್  ವ್ಯಂಗ್ಯವಾಡಿದ್ದಾರೆ. ಅಶೋಕ್, ವಿಜಯೇಂದ್ರ ಅವರ ಕತೆ ಏನಿದ್ದರೂ, ಬರೀ ಬುಟ್ಟಿ ಬೇವಿನ ಸೊಪ್ಪು, ನಂದೇ ಬೆಳಗು ಪೂಜಾರಿ ಅನ್ನೋ ತರಹ. ಕುಮಾರಸ್ವಾಮಿ ಇವರಿಬ್ಬರನ್ನು ಇಳಿಸಿ‌ ನನಗೇನಾದರೂ ಸಿಗಬಹುದಾ ಅಂತಾ ನೋಡುತ್ತಿದ್ದಾರೆ. ಹೀಗಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಬಾಂಬ್ ಹಾಕುತ್ತೇನೆ ಎನ್ನುತ್ತಿದ್ದಾರೆ ಎಂದೂ ಸಿಎಂ  ಛೇಡಿಸಿದರು.

ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ: ಬೈರತಿ ಸುರೇಶ್

ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ನೇತೃತ್ವದಲ್ಲಿ  ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ಕನ್ನಾಘಟ್ಟ ಗ್ರಾಮದಲ್ಲಿ ಮಹಾಗಣಪತಿ

ಕನಕಪುರ ಹಾಸ್ಟೆಲ್‌ ವಿದ್ಯಾರ್ಥಿಗಳ ಭೇಟಿಯಾಗಿ ಕುಂದು ಕೊರತೆ ಆಲಿಸಿದ ಸಿಎಂ 

ವಿದ್ಯಾರ್ಥಿಗಳು ವ್ಯಕ್ತಪಡಿಸಿರುವ ಕುಂದು ಕೊರತೆಗಳನ್ನು ಉಪ ಆಯುಕ್ತರು, ಸಿಇಒಗಳಿಗೆ ಕಳಿಸಿ ಮರು ಪರಿಶೀಲನೆ ಮಾಡಿಸಿ ಸರಿಪಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಭರವಸೆ ನೀಡಿದರು.  ಅವರು ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಾಲೇಜಿನ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್

ವಿದ್ಯಾರ್ಥಿಗಳಿಗೆ ಕಳಪೆ ಶೂ: ಲೋಕಾಯುಕ್ತ ತನಿಖೆ

ರಾಜ್ಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ ಪೂರೈಕೆ ಬಗ್ಗೆ ಮಾಧ್ಯಮ ವರದಿ ಪರಿಗಣಿಸಿದ ಲೋಕಾಯುಕ್ತ ಸ್ವಯ ಪ್ರೇರಿತ ದೂರು ದಾಖಲಿಸಿಕೊಂಡಿದೆ. ವಿದ್ಯಾ ವಿಕಾಸ ಯೋಜನೆಯಡಿ ರಾಜ್ಯದ 36.56 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ ಸಾಕ್ಸ್‌ ವಿತರಿಸಲು 72

ಎಡಿಜಿಪಿ ಕಂಪನಿಯಿಂದ ಕಿಕ್‌ಬ್ಯಾಕ್: ಸತೀಶ್‌ ಜಾರಕಿಹೊಳಿ ವಿರುದ್ಧ ಮತ್ತೊಂದು ಆರೋಪ

ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದ್ದು, ಎಡಿಜಿಪಿ ಕಂಪನಿಯಿಂದ ಕಿಕ್‌ಬ್ಯಾಕ್ ಪಡೆದಿರುವ ಆರೋಪವೂ ಕೇಳಿಬಂದಿದೆ.  ಜಾರಕಿಹೊಳಿ ನಿವಾಸದಲ್ಲಿ ಪಿಡಬ್ಲ್ಯುಡಿ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಆ ದಾಖಲೆಗಳನ್ನು ಪರಿಶೀಲಿಸಲು ಇಡಿ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ಕಾಂಗ್ರೆಸ್‌ ಒಳಜಗಳ, ಕುರ್ಚಿ ಕಾಳಗ ಮತ್ತೊಮ್ಮೆ ಜಗಜ್ಜಾಹೀರು: ಆರ್‌ ಅಶೋಕ

ಇಡಿ ಗೆ  ದೂರು ಕೊಟ್ಟವರು ನಮ್ಮ ಪಕ್ಷದವರೋ ಅಥವಾ ಬೇರೆಯವರೋ ಅಂತ ಹುಡುಕುತ್ತಿದ್ದೇನೆ, ನನ್ನನ್ನು ರಾಜಕೀಯವಾಗಿ ಕುಗ್ಗಿಸುವ ಹುನ್ನಾರ ಇದಾಗಿದೆ ಎನ್ನುವ ಸಚಿವ @JarkiholiSatish ಅವರ ಹೇಳಿಕೆ @INCKarnataka ಪಕ್ಷದೊಳಗಿನ ಆಂತರಿಕ ಕಚ್ಚಾಟ ಮತ್ತು ಒಳ ಬೇಗುದಿಯನ್ನ ಮತ್ತೊಮ್ಮೆ ಬಟಾಬಯಲು ಮಾಡಿದೆ

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ: ಸಿಎಂ ಡಿಕೆ ಶಿವಕುಮಾರ್

ಪಂಚಾಯಿತಿಯಿಂದ ಸಂಸತ್ತಿನವರಿಗೆ ಹೊಸ ನಾಯಕತ್ವ ಅಗತ್ಯ. ಅದರಲ್ಲಿಯೂ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ. ಜಿ.

ಕಸ್ತೂರಿರಂಗನ್ ವರದಿ: ರೈತರ ಹಿತಕ್ಕೆ ಆದ್ಯತೆ ಎಂದ ಸಿಎಂ ಡಿ‌ಕೆ ಶಿವಕುಮಾರ್

ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಚರ್ಚೆ ನಡೆಸಲು ಸೆಪ್ಟೆಂಬರ್‌ 21 ರಿಂದ 23 ರ ವರೆಗೆ ಮೂರು ದಿನಗಳ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಅರಣ್ಯ ಭವನದಲ್ಲಿ  ಅವರು

ಸಿಎಂ ಶಿವಕುಮಾರ್‌  ರಿಯಲ್‌ ಎಸ್ಟೇಟ್‌ ಏಜೆಂಟ್‌, ನೂರು ದಿನಗಳಲ್ಲಿ ಏನೂ ಸಾಧನೆ ಇಲ್ಲ: ಆರ್‌ ಅಶೋಕ

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಎಲ್ಲರ ಕಣ್ಣಲ್ಲಿ ರಿಯಲ್‌ ಎಸ್ಟೇಟ್‌ ಏಜೆಂಟ್‌, ಸರ್ಕಾರದಿಂದ ಯಾವುದೇ ಅಭಿವೃದ್ಧಿ ನಡೆದಿಲ್ಲ. ಆದರೂ ನೂರು ದಿನದ ಸಾಧನೆ ಎಂದು ಸಂಭ್ರಮಾಚರಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಕಾಂಗ್ರೆಸ್ ಸರ್ಕಾರ

ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನವೆಂಬರ್ 1ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ

ನವೆಂಬರ್ 1ನೇ ತಾರೀಕಿನೊಳಗೆ ಪರವಾನಗಿ‌ ಇಲ್ಲದ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಶಿವಕುಮಾರ್  ಮಾತನಾಡಿದರು. ಅಕ್ರಮ