Thursday, November 20, 2025
Menu

ರಾಜ್ಯ ಸರ್ಕಾರದಿಂದ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಅಧಿಸೂಚನೆ ನಿರೀಕ್ಷೆ

ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಕನಿಷ್ಠ ವೇತನವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಕರಡು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದಷ್ಟೇ ಪ್ರಮಾಣದಲ್ಲಿ ಕನಿಷ್ಠ ವೇತನ ಹೆಚ್ಚಳ ಮಾಡಿದರೆ ಕಾರ್ಮಿಕರಿಗೆ ದೇಶದಲ್ಲಿಯೇ ಅತಿ ಹೆಚ್ಚು ಕನಿಷ್ಠ ವೇತನ ನೀಡುವ ರಾಜ್ಯ ಎಂದು ಕರ್ನಾಟಕ ಗುರುತಿಸಿಕೊಳ್ಳಲಿದೆ.

ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ಧರಣಿ ಎರಡನೇ ದಿನಕ್ಕೆ, ಸಿಎಂ ನಿವಾಸಕ್ಕೆ ಮುತ್ತಿಗೆ ನಿರ್ಧಾರ

ದರ ಏರಿಕೆ ನೀತಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.  ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ನಿರ್ಧರಿಸಿದೆ. ಮಧ್ಯಾಹ್ನಕ್ಕೆ

ಹಾಲು ದರ ಪರಿಷ್ಕರಣೆಯಿಂದ ನೀಗಿದ ಹೈನುಗಾರರ ಬವಣೆ, ನಾವೀಗ ಪ್ರಶ್ನಿಸಬೇಕಾಗಿರುವುದು ತೆರಿಗೆ ಹಂಚಿಕೆಯ ಪಾಲು

ನಂದಿನಿ ಹಾಲಿನ ದರ ಏರಿಕೆ ಹೈನುಗಾರರಿಗೆ ಹೇಗೆ ನೆರವಾಗಲಿದೆ, ಬೆಲೆ ಏರಿಕೆ ಬಗ್ಗೆ ಅಪಪ್ರಚಾರ ಯಾಕೆ ನಡೆಯುತ್ತಿದೆ, ನಿಜವಾಗಿಯೂ ನಾವು ಪ್ರಶ್ನಿಸಬೇಕಾಗಿರುವುದು ಯಾವುದರ ಬಗ್ಗೆ, ಯಾರನ್ನು ಎಂಬುದರ ಕುರಿತು ಈ ಲೇಖನದಲ್ಲಿ  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಕು ಚೆಲ್ಲಿದ್ದಾರೆ. ನಂದಿನಿ ಹಾಲಿನ ದರವನ್ನು

ಚಿನ್ನ ಕಳ್ಳಸಾಗಣೆ ಪ್ರಕರಣದ ರನ್ಯಾ ರಾವ್‌ಗೆ ಪತಿಯಿಂದ ವಿಚ್ಛೇದನ ಅರ್ಜಿ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿ ಜೈಲು ಸೇರಿರುವ  ನಟಿ ರನ್ಯಾ ರಾವ್‌ಗೆ  ವಿಚ್ಛೇದನ ನೀಡಲು ಮುಂದಾಗಿ ಪತಿ ಜತೀನ್ ಹುಕ್ಕೇರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ವೈವಾಹಿಕ ಜೀವನದಲ್ಲಿ ಸಾಕಷ್ಟು ಮನಸ್ತಾಪಗಳು ಇರುವುದಾಗಿ ಈ ಹಿಂದೆ ಹೇಳಿಕೊಂಡಿದ್ದ ಜತೀನ್ ಹುಕ್ಕೇರಿ ಈಗ ವಿಚ್ಛೇದನ

ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್

ಬೆಂಗಳೂರು: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸಂಹಿತವಾಗಿದೆ ಎಂದು ಸಣ್ಣ

24,000 ಕೋಟಿ ರೂ. ಯೋಜನೆಗಳಿಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣ ಸೇರಿದಂತೆ ವಿವಿಧ ರಸ್ತೆ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ 24 ಸಾವಿರ ಕೋಟಿ ರೂ. ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬುಧವಾರ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ

ನಟ ದರ್ಶನ್ ಜಾಮೀನು ರದ್ದು ಕೋರಿ‌ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಪೊಲೀಸರು ‌ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಏಪ್ರಿಲ್ 22ಕ್ಕೆ ಮುಂದೂಡಿದೆ. ನಟ ದರ್ಶನ್ ಸೇರಿದಂತೆ ಏಳು ಮಂದಿ ಕೊಲೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ

ನಟಿ ರನ್ಯಾ ರಾವ್ ಗೆ ವಿಚ್ಛೇದನ ಕೋರಿ‌ ಪತಿ ಜತಿನ್ ಕೋರ್ಟ್ ಗೆ ಅರ್ಜಿ

ಬೆಂಗಳೂರು:ಅಕ್ರಮ ಚಿನ್ನ ಸಾಗಾಣೆ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಡಿಜಿಪಿ ಮಲಮಗಳು ನಟಿ ರನ್ಯಾ ರಾವ್ ರಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಮುಂದಾಗಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಆಕೆಯಿಂದ

ಏ.9 ಅಥವಾ 10ರವರೆಗೆ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏ.9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ಸ್ ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ

ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: 416 ಕೋಟಿ ರೂ. ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು. ಬೃಹತ್ ಮತ್ತು ಮಧ್ಯಮ