Wednesday, September 30, 2026
Menu

ಮಂಡ್ಯದ ಅಂಕೇಗೌಡ, ಬೆಂಗಳೂರಿನ ಸುಶೀಲಮ್ಮ ಸೇರಿ 45 ಜನರಿಗೆ ಪದ್ಮ ಪ್ರಶಸ್ತಿ

2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಕರ್ನಾಟಕದ ಜ್ಞಾನದಾಸೋಹಿ ಮಂಡ್ಯದ ಅಂಕೇಗೌಡ (ಸಾಹಿತ್ಯ ಮತ್ತು ಶಿಕ್ಷಣ) , ಸಮಾಜ ಸೇವಕಿ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಸಂಸ್ಥಾಪಕಿ ಡಾ. ಎಸ್.ಜಿ. ಸುಶೀಲಮ್ಮ ಸೇರಿದಂತೆ 45 ಜನರಿಗೆ ಪ್ರತಿಷ್ಠಿತ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ. ಕಲೆ, ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಅಂಕೇಗೌಡ , ಡಾ. ಎಸ್.ಜಿ. ಸುಶೀಲಮ್ಮ(ಕರ್ನಾಟಕ), ಆರ್ಮಿಡಾ

ತಲೆ ಮರೆಸಿಕೊಂಡಿರುವ ಆರೋಪಿ ರಾಜೀವ್ ಗೌಡ ಮಂಗಳೂರಿನಿಂದಲೂ ಪರಾರಿ

ಶಿಡ್ಲಘಟ್ಟ ಪೌರಾಯುಕ್ತರೊಂದಿಗೆ ಅವಹೇಳನಕಾರಿಯಾಗಿ ಮಾತನಾಡಿ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜೀವ್ ಗೌಡ ತಲೆ ಮರೆಸಿಕೊಂಡು ಮಂಗಳೂರಿಗೆ ಹೋಗಿದ್ದು, ಈಗ ಅಲ್ಲಿಂದಲೂ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಬಂಧನ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಪರಮೇಶ್ವರ್‌

ದಾವೂಸ್ ನಲ್ಲಿ 45ಕ್ಕೂ ಹೆಚ್ಚು ಕಂಪನಿಗಳ ಜತೆ ಹೂಡಿಕೆ ಚರ್ಚೆ, ರಾಜ್ಯದ  ನಗರಗಳಲ್ಲಿ ಸಂಚಾರಿ ಗ್ರಿಡ್: ಡಿಕೆ ಶಿವಕುಮಾರ್

ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು.  ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾದ  ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ, ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯವಿದೆ  ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದ್ದಾರೆ.  ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು

ರಾಜ್ಯಪಾಲರ ವಿರುದ್ದ ಕ್ರಮ ಖಂಡನೀಯ, ಬಿಕೆ ಹರಿಪ್ರಸಾದ್ ವಿರುದ್ದ ಕ್ರಮ ಜರುಗಿಸಿ : ಬೊಮ್ಮಾಯಿ

ರಾಜ್ಯ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಮತ್ತು ತಮ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ

ಸೀಟ್ ಬ್ಲಾಕಿಂಗ್, ಪಿಎಸ್‌ಐ ನೇಮಕ ಅಕ್ರಮ: ಇಡಿಯಿಂದ ಆಸ್ತಿ ಮುಟ್ಟುಗೋಲು

ಬೆಂಗಳೂರಿನ ಬಿಎಂಎಸ್ ಎಜುಕೇಶನ್ ಟ್ರಸ್ಟ್‌ಗೆ ಸಂಬಂಧಿಸಿದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಹಗರಣ ಪ್ರಕರಣದಲ್ಲಿ ಇಡಿ 19.46 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದರೆ, ರಾಜ್ಯದಲ್ಲಿ 2021–22ರಲ್ಲಿ ನಡೆದ 545 ಪಿಎಸ್‌ಐ ನೇಮಕದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 1.53 ಕೋಟಿ ರೂ.

37 ಸಕೆಂಡ್‌ಗಳಲ್ಲಿ ಗವರ್ನರ್‌ ಎಸಗಿದ ಅಪಚಾರ ಒಂದೆರಡಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ

37 ಸಕೆಂಡ್‌ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ, ರಾಷ್ಟ್ರಗೀತೆಗೆ ಅಪಚಾರ, ಸಂವಿಧಾನಕ್ಕೆ ದ್ರೋಹ, ಕರ್ನಾಟಕಕ್ಕೆ ಅಗೌರವ, ಕನ್ನಡಿಗರಿಗೆ ಅಪಮಾನ, ರಾಜ್ಯ ಸರ್ಕಾರಕ್ಕೆ ಅವಮಾನ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ ಕಾರಿದ್ದು, ರಾಜ್ಯಪಾಲರಿಂದ ಇಷ್ಟೆಲ್ಲ ಅಪಚಾರವಾದರೂ ಬಿಜೆಪಿಯವರ ಸಮರ್ಥನೆ ನೋಡುತ್ತಿದ್ದರೆ ರಾಜ್ಯಪಾಲರ

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ವಿಶ್ವದಲ್ಲೇ ಮಾದರಿ: ಸಂತೋಷ್‌ ಲಾಡ್‌

ರಾಜ್ಯದ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಮಾದರಿಯಾಗಿವೆ. ಈ ಗ್ಯಾರಂಟಿಗಳಿಗೆ ವರ್ಷಕ್ಕೆ ಅರವತ್ತು ಸಾವಿರ ಕೋಟಿ ವ್ಯಯಿಸಲಾಗುತ್ತಿದೆ. ಐದು ವರ್ಷಕ್ಕೆ ಮೂರು ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ

ಬಾಂಗ್ಲಾ ವಲಸಿಗರ ಜಾಲ ಬಯಲಿಗೆಳೆದ ವ್ಯಕ್ತಿಗೆ ಪೊಲೀಸ್‌ ಕಿರುಕುಳ: ಸರ್ಕಾರದ ವಿರುದ್ಧ ಆರ್‌ ಅಶೋಕ ಗಂಭೀರ ಆರೋಪ

ಕಾಂಗ್ರೆಸ್ ಸರ್ಕಾರಕ್ಕೆ ಅಕ್ರಮ ಬಾಂಗ್ಲಾದೇಶಿಗಳ ಮೇಲೆ ಯಾಕಿಷ್ಟು ವ್ಯಾಮೋಹ, ರಾಜ್ಯದಲ್ಲಿ ವ್ಯಾಪಕವಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ಜಾಲವನ್ನು ಬಯಲಿಗೆಳೆದಿದ್ದಕ್ಕಾಗಿ ಡಾ. ನಾಗೇಂದ್ರಪ್ಪ ಅವರಿಗೆ ಪೊಲೀಸರಿಂದ ಕಿರುಕುಳ ನೀಡಲಾ ಗುತ್ತಿದ್ದು, ಅವರು ವಿಧಾನಸೌಧದ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಂಗ್ರೆಸ್ ಸರ್ಕಾರ

ಶಿಡ್ಲಘಟ್ಟ ಮಹಿಳಾಧಿಕಾರಿಗೆ ಬೆದರಿಕೆ ರಾಜೀವ್ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ಬ್ಯಾನರ್ ವಿಚಾರಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೆ ಕರೆ ಮಾಡಿ ಬೆದರಿಕೆ ಹಾಕಿ ಪ್ರಕರಣಕ್ಕೆ ಸಂಬಂಧ ರಾಜೀವ್ ಗೌಡನ ಜಾಮೀನು ಅರ್ಜಿ ವಜಾಗೊಂಡಿದೆ. ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಚಿಕ್ಕಬಳ್ಳಾಪುರ 2ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್