Thursday, November 20, 2025
Menu

₹3,500.86 ಕೋಟಿ ಬಂಡವಾಳ ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್‌ ಆ್ಯಂಡ್‌ ಡಿಟರ್‌ಜೆಂಟ್ಸ್‌ ಲಿಮಿಟೆಡ್‌ನ (ಕೆಎಸ್‌ಡಿಎಲ್‌) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು 69 ಯೋಜನೆಗಳ ಒಟ್ಟು ₹3,500.86 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ. ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ

ಬೆಲೆ ಏರಿಕೆ ವಿರುದ್ಧ ಏ.2ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ

ಎಂಎಸ್ಐಲ್ ನಿಂದ ಇ-ಕಾಮರ್ಸ್ ಪೋರ್ಟಲ್ ತೆರೆಯಲು ಸಿದ್ಧತೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಸರಕಾರಿ ಸ್ವಾಮ್ಯದ ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್‌ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್‌ ಪೋರ್ಟಲ್‌ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ ಒಡೆತನದ ವಿವಿಧ ಉತ್ಪನ್ನಗಳ ಮಾರಾಟದ ಜತೆಗೆ ಖರೀದಿ ವ್ಯವಸ್ಥೆಗೂ ಇದು ವೇದಿಕೆಯಾಗಲಿದೆ.

ಯುಗಾದಿ ಹಬ್ಬಕ್ಕೆ ಹಸು ತೊಳೆಯಲು ಹೋಗಿ ಮೂವರು ಕೆರೆ ಪಾಲು

ಮೈಸೂರು: ಯುಗಾದಿ ಹಬ್ಬದ ಅಂಗವಾಗಿ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದ್ (೧೭), ಬಸವೇಗೌಡ (೪೫) ಮತ್ತು ಮುದ್ದೇಗೌಡ (೪೮) ನೀರುಪಾಲಾದವರಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ

ಬಿಎಸ್ ಯಡಿಯೂರಪ್ಪ ಕುಟುಂಬದ ಅಂತ್ಯ ಆರಂಭ: ಬಸನಗೌಡ ಪಾಟೀಲ್ ಯತ್ನಾಳ್

ನಮಗೆ ನಾಳೆಯಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ಅಂತ್ಯ ನಾಳೆಯಿಂದ ಆರಂಭವಾಗಲಿದೆ ಎಂದು ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದರಿಂದ ನಮಗೆ ಪೂರ್ಣ

ಆರ್ಥಿಕವಾಗಿ ದುರ್ಬಲರಿಗೆ ಒಳರೋಗಿಗಳಾಗಿ ಚಿಕಿತ್ಸೆ ನೀಡಲು ಸಚಿವ ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದರು. ಡಾ. ಬಿ.ಆರ್. ಅಂಬೇಡ್ಕರ್

ಬಂಡೀಪುರದಲ್ಲಿ ರಾತ್ರಿ ಸಂಚಾರ ಕುರಿತು ಸಿಎಂ ಜೊತೆ ಚರ್ಚಿಸಿ ತೀರ್ಮಾನ: ಈಶ್ವರ ಖಂಡ್ರೆ

ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ

ಕುಮಾರಸ್ವಾಮಿಗೆ ಹಾಲು ಒಕ್ಕೂಟ ವ್ಯವಸ್ಥೆ ಬಗ್ಗೆ ಗೊತ್ತಿಲ್ಲವೆಂದ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ  ಏನಾದರೂ ಟೀಕೆ ಮಾಡಲಿ. ರೈತರು ಬದುಕಬೇಕಲ್ಲವೇ, ಅವರಿಗೆ ಕಾಳಜಿ ಇದ್ದರೆ ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ. ಜಿಎಸ್ ಟಿ, ಇಂಧನ ತೈಲ ಬೆಲೆ ಕಡಿಮೆ ಮಾಡಿಸಲಿ.  ದರ ಹೆಚ್ಚಳದ ಹಣ ರೈತರಿಗೆ ಹೋಗುವುದಿಲ್ಲ,  ಸರ್ಕಾರಕ್ಕೆ ಹೇಗೆ ಹೋಗುತ್ತದೆ ಎನ್ನುತಾರೆ,

ಯತ್ನಾಳ್​ ಉಚ್ಚಾಟನೆ: ಏ.13ಕ್ಕೆ‌ ಬೆಳಗಾವಿಯಲ್ಲಿ ಪ್ರತಿಭಟನೆ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಏ.10ರೊಳಗೆ ಬಸನಗೌಡ ಪಾಟೀಲ ಯತ್ನಾಳ್​ ಅವರ ಉಚ್ಚಾಟನೆ ಆದೇಶ ವಾಪಸ್‌ ಪಡೆಯದಿದ್ದರೆ ಏ.13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಬಂಧುಗಳು, ಹಿಂದೂಪರ‌ ಕಾರ್ಯಕರ್ತರು,