Wednesday, September 30, 2026
Menu

ಶಿಕಾರಿಪುರದಲ್ಲಿ ಕರಡಿ ದಾಳಿ: ತೀವ್ರ ಗಾಯಗೊಂಡ ಕೃಷಿಕ

ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮ ಸಮೀಪದ ಗಂಗವ್ವನ ಸರ ಮೀಸಲು ಅರಣ್ಯ ಪ್ರದೇಶದಲ್ಲಿ ಹಾರೋಗೊಪ್ಪ‌ ಗ್ರಾಮದ ಕೃಷಿಕ ಸೋಮ್ಲನಾಯ್ಕ(60) ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ರೈತ  ಸೋಮ್ಲನಾಯ್ಕ  ಜಮೀನಿನಲ್ಲಿ ಅಳವಡಿಸಿದ್ದ ಮೋಟರ್ ಆನ್​ ಮಾಡಲು  ಹೋಗಿದ್ದಾಗ ಕರಡಿ ದಾಳಿ ನಡೆಸಿದೆ. ಕರಡಿ ದಾಳಿಯಿಂದ  ಕುತ್ತಿಗೆ ಮತ್ತು ಬೆನ್ನಿನ ಭಾಗಕ್ಕೆ ತೀವ್ರ  ಗಾಯಗೊಂಡ ಅವರು ತಪ್ಪಿಸಿಕೊಂಡು‌ ಬಂದಿದ್ದಾರೆ.  ನಂತರ ಹಾರೋಗೊಪ್ಪ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಪ್ರಥಮ‌ ಚಿಕಿತ್ಸೆ

ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ, ಅಲೆಮಾರಿ ಸಮುದಾಯಕ್ಕೆ ಮನೆ: ರಾಜ್ಯ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: 2027, ಡಿಸೆಂಬರ್ 31ರವರೆಗೆ ನಡೆಯುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಈ ಮೂಲಕ  ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ

ಕಾಂಗ್ರೆಸ್ ಸುಳ್ಳಿನ ಯಂತ್ರ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು: ಮನ್‍ರೇಗಾ ಕುರಿತು ಸುಳ್ಳು ಮತ್ತು ಅಸತ್ಯವನ್ನು ಮಾನ್ಯ ರಾಜ್ಯಪಾಲರ ಮೂಲಕ ಹೇಳಿಸಲು ಕರ್ನಾಟಕ ಸರಕಾರ ಬಯಸಿತ್ತು. ಕಾಂಗ್ರೆಸ್ ಪಕ್ಷವು ಸುಳ್ಳಿನ ಯಂತ್ರ ಎಂದು ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು ಫಲಾನುಭವಿ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ

ಬೆಂಗಳೂರು:ರಾಜ್ಯದಲ್ಲಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದೆ ಎಂದು ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಿದೆ‌. ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ‌ ಸೇರಿದಂತೆ ಸರ್ಕಾರದ ಪ್ರಮುಖ ಸಾಧನೆಗಳನ್ನು ಉಲ್ಲೇಖಿಸಲಾಗಿದೆ. 46 ಪುಟಗಳ

ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಪ್ರಶ್ನಿಸಿ ಹೈಕೋರ್ಟ್​ಗೆ ಸಿಬಿಐ ಅರ್ಜಿ

ಬೆಂಗಳೂರು:ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಕೇಂದ್ರ ತನಿಖಾ ದಳ(ಸಿಬಿಐ) ದಾಖಲಿಸಿರುವ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಈ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2 ತಿಂಗಳಲ್ಲಿ 14 ಕೋಟಿ ಆದಾಯ!

ದಕ್ಷಿಣ ಕನ್ನಡದ ಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವರ್ಷದ ಕೊನೆಯ 2 ತಿಂಗಳಲ್ಲಿ 14.78 ಕೋಟಿ ರೂ. ಆದಾಯ ಹರಿದು ಬಂದಿದ್ದು, ಹೊಸ ದಾಖಲೆ ಬರೆದಿದೆ. 2025ರ ನವೆಂಬರ್​​​ ಹಾಗೂ ಡಿಸೆಂಬರ್​​ ತಿಂಗಳಲ್ಲಿ ಭಾರೀ ಪ್ರಮಾಣದಲ್ಲಿ ಭಕ್ತರು ಕುಕ್ಕೆ ಸುಬ್ರಹ್ಮಣ್ಯ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ರಾಜೀವ್​ ಗೌಡ ಬೆದರಿಕೆ: ಎಫ್​​ಐಆರ್​ ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದ ಎಫ್​​ಐಆರ್​ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್​​ ಮುಖಂಡ ರಾಜೀವ್​ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಬಗ್ಗೆ ಆದೇಶ ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ರಾಜೀವ್‌ ಗೌಡ ಮತ್ತಷ್ಟು

ಅಹಿಂದ ಸಮಾವೇಶಕ್ಕೆ ಬಸ್ ಕೊಡಬೇಡಿ: ಡಿಸಿಎಂ ಮೇಲಿನ ಆರೋಪ ಸುಳ್ಳೆಂದ ಕೆಎಸ್‌ ಶಿವರಾಮ್

ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನ ಅಹಿಂದ ಸಮಾವೇಶಕ್ಕೆ ಬಸ್ ನೀಡದಂತೆ ತಡೆದಿದ್ದಾರೆಂಬ ಆರೋಪ ಯಾರು ಸಹ ಮಾಡಬಾರದು. ಅಂತಹ ಯಾವುದೇ ಪ್ರಯತ್ನ ಅವರು ಮಾಡಿಲ್ಲ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್  ಹೇಳಿದ್ದಾರೆ. ಮೈಸೂರಿನಲ್ಲಿ ಈ ಕುರಿತು

ಕೈಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ: ಆರ್‌ ಅಶೋಕ

@INCKarnataka ಪಕ್ಷದ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ. ಸದನದ ಸಂಪ್ರದಾಯ ಹಾಗೂ ನಿಯಮಾವಳಿಗಳನ್ನ ಗಾಳಿಗೆ ತೂರಿ ರಾಜ್ಯಪಾಲರ ಭಾಷಣಕ್ಕೆ ಮೂಲಕ ಅಡ್ಡಿ ಪಡಿಸುವ ಮೂಲಕ ಸದನಕ್ಕೆ ಅಪಮಾನ ಎಸಗಿದ್ದಾರೆ. ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು

ಭಾಷಣ ಮಾಡದ ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ: ಸಿಎಂ ಸಿದ್ದರಾಮಯ್ಯ

ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,