Wednesday, September 30, 2026
Menu

ಒಂದೇ ವಾಕ್ಯದಲ್ಲಿ ಭಾಷಣ ಮುಗಿಸಿ ಹೋದ ರಾಜ್ಯಪಾಲ್ ಗೆಹ್ಲೋಟ್

NREGA ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡದೆ  ರಾಜ್ಯಪಾಲ  ಥಾವರ್​ಚಂದ್ ಗೆಹ್ಲೋಟ್  ಶುಭಾಶಯ ಕೋರಿ ಹೊರ ನಡೆದಿದ್ದಾರೆ. ಈ ಬೆಳವಣಿಗೆ ರಾಜ್ಯಪಾಲರು ಮತ್ತು ಸರ್ಕಾರದ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುವ ಬಗ್ಗೆ ಅನುಮಾನವಿತ್ತು. ಬಂದ ರಾಜ್ಯಪಾಲರು ಒಂದೆರಡು ಮಾತನಾಡಿ ಶುಭಾಶಯ ಕೋರಿ ಸರ್ಕಾರ ನೀಡಿದ ಭಾಷಣದ ಪ್ರತಿ ಓದದೆ

ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ತುಳು: ರಾಜ್ಯ ಸರ್ಕಾರದ ತಂಡ ಆಂಧ್ರಪ್ರದೇಶಕ್ಕೆ ಭೇಟಿ

ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕಾನೂನು ಪ್ರಕ್ರಿಯೆ ಹಾಗೂ ಅನುಷ್ಠಾನದ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರ್ಕಾರವು ನೇಮಿಸಿದ್ದ ಅಧ್ಯಯನ ಸಮಿತಿಯು ಆಂಧ್ರ ಪ್ರದೇಶದಲ್ಲಿ ಅಲ್ಲಿನ ಸರ್ಕಾರದ ವಿವಿಧ ಇಲಾಖೆಗಳ ಜೊತೆಗೆ ಮಾತುಕತೆ

3 ದಿನಗಳ ಚಾಲುಕ್ಯ ಉತ್ಸವಕ್ಕೆ ವೈಭವದ ತೆರೆ

ಬಾಗಲಕೋಟೆ: ಮೂರು ದಿನಗಳ ಕಾಲ ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿ ನಡೆದ ಚಾಲುಕ್ಯರ ಗತವೈಭವ ಸಾರುವ ಐತಿಹಾಸಿಕ ಚಾಲುಕ್ಯ ಉತ್ಸವ ಬುಧವಾರ ತಡರಾತ್ರಿ ವೈಭವದಿಂದ ತೆರೆಕಂಡಿತು. ಬಾದಾಮಿಯ ಇಮ್ಮಡಿ ಪುಲಕೇಶಿ ವೇದಿಕೆ, ಪಟ್ಟದಕಲ್ಲಿನ ವಿಕ್ರಮಾದಿತ್ಯ ವೇದಿಕೆ ಹಾಗೂ ಐಹೊಳೆಯ ಜಯಸಿಂಹ ವೇದಿಕೆ

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ: ಸಚಿವ ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು, ಜ. 21: ಸಮಾಜವನ್ನು ತಿದ್ದಿ ತೀಡುವ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವರಿಗೆ ವಿಶೇಷ ಸೌಲಭ್ಯ ಒದಗಿಸಲು ನಮ್ಮ ಇಲಾಖೆ ಮುಂದಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇಕಡ

ಫೆ.10ರೊಳಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಕೆ ಸಾಧ್ಯತೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ‌ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸುವ ಸಾಧ್ಯತೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ

ರಾಜ್ಯ, ಕೇಂದ್ರ ಸರ್ಕಾರಗಳು ನೈಜ ಕೃಷಿಗೆ ಒತ್ತು ನೀಡಬೇಕು: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೈಜ ಕೃಷಿಗೆ ಒತ್ತು ನೀಡಿ, ಇವರಿಂದ ಬಂದ ಪ್ರಾಥಮಿಕ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಮಾರುಕಟ್ಟೆಗೆ ಒದಗಿಸಿದಲ್ಲಿ ನೈಜ ಕೃಷಿ ಕಾರ್ಯಕ್ರಮ ಯಶ್ವಸಿಯಾಗುವುದು ಎಂದು

ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆ ಮಾಡಿ: ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಉದ್ಯಮಿಗಳಿಗೆ ಡಿಸಿಎಂ ಆಹ್ವಾನ

ದಾವೋಸ್: ಬೆಂಗಳೂರು ಭವಿಷ್ಯದ ನಗರ. ಇಲ್ಲಿನ ಹವಾಗುಣ, ಸಂಸ್ಕೃತಿ, ಮಾನವ ಸಂಪನ್ಮೂಲ ಅತ್ಯುತ್ತಮವಾಗಿದೆ. ವಿಶ್ವದ ಅನೇಕ ಕಂಪನಿಗಳು ಇಲ್ಲಿ ಕೆಲಸ ಮಾಡಿ ಬೆಳೆಯುತ್ತಿವೆ. ನೀವೆಲ್ಲರೂ ಬೆಂಗಳೂರಿಗೆ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಶ್ವದ ಉದ್ಯಮಿಗಳಿಗೆ ಆಹ್ವಾನ ನೀಡಿದರು. ದಾವೋಸ್

ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ರಾಜ್ಯಪಾಲ ಗೆಹ್ಲೋಟ್ ತಿರಸ್ಕಾರ

ಬೆಂಗಳೂರು: ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಮೂಲಕ ನಾಳೆಯಿಂದ ಜನವರಿ 31ರವರೆಗೆ ರಾಜ್ಯ ಸರ್ಕಾರ ಕರೆದಿರುವ ವಿಶೇಷ ಅಧಿವೇಶನಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದೆ. ಮನರೇಗಾ ಯೋಜನೆ ರದ್ದುಗೊಳಿಸಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜಿ ರಾಮ್ ಜಿ ಯೋಜನೆ

ದೇವರ ಅಪಹಾಸ್ಯ: ‘ಕಾಮಿಡಿ ಕಿಲಾಡಿಗಳು’ ಶೋಗೆ ಹೈಕೋರ್ಟ್‌ ಎಚ್ಚರಿಕೆ

ಖಾಸಗಿ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಚಾನೆಲ್ ಮತ್ತು ನಿರ್ದೇಶಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.  ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಎಲ್ಲವನ್ನೂ ಅಪಹಾಸ್ಯ ಮಾಡುವ ಪರವಾನಗಿ ಅಲ್ಲ ಎಂದು ಕೋರ್ಟ್‌ ಎಚ್ಚರಿಕೆ

ಬೆಂಗಳೂರಲ್ಲಿ UPSC ಪ್ರಾದೇಶಿಕ ಕಚೇರಿಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಕೇಂದ್ರ ಸಾರ್ವಜನಿಕ ಸೇವಾ ಆಯೋಗದ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರಿನಲ್ಲಿ ಸ್ಥಾಪಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಯುಪಿಎಸ್‌ಸಿ ಪ್ರಾದೇಶಿಕ ಕಚೇರಿಯನ್ನು ಸ್ಥಾಪಿಸುವುದು ವಿಕೇಂದ್ರೀಕರಣ,