Thursday, November 20, 2025
Menu

ಚುನಾವಣಾ ಅಭ್ಯರ್ಥಿಗಳು ತಮ್ಮ ವಿರುದ್ಧ ಬಾಕಿ ಇರುವ ಎಲ್ಲ ಪ್ರಕರಣ ಘೋಷಿಸಬೇಕು: ಹೈಕೋರ್ಟ್‌

ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಸಿವಿಲ್‌ ನ್ಯಾಯಾಲಯ, ಅರೆ ನ್ಯಾಯಾಧೀಕರಣ, ಆಡಳಿತಾತ್ಮಕ ಪ್ರಾಧಿಕಾರಗಳಲ್ಲಿ ಬಾಕಿಯಿರುವ ಪ್ರಕರಣಗಳು, ಜಾತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ಪ್ರಶ್ನಿಸಿರುವುದು ಸೇರಿದಂತೆ ಎಲ್ಲ ಅಂಶಗಳನ್ನು ಘೋಷಿಸುವ ಅಗತ್ಯವಿದೆ ಎಂದು ಹೈಕೋರ್ಟ್‌ ಹೇಳಿದೆ. ಪ್ರಜಾಪ್ರತಿನಿಧಿ ಕಾಯಿದೆ ಅಡಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಜಾತಿ ಮತ್ತು ಶಿಕ್ಷಣ ಪ್ರಮಾಣ ಪತ್ರಗಳ ಕುರಿತಂತೆ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಭಾರತೀಯ ಕಾನೂನು ಆಯೋಗ ಗಮನ ಹರಿಸಬೇಕು ಎಂದೂ ನ್ಯಾಯಪೀಠ

ಸಿಎಂ ಆಗಲೆಂದು ಸತೀಶ್‌ ಜಾರಕಿಹೊಳಿ ಹೆಚ್‌ಡಿಕೆಯನ್ನು ಭೇಟಿಯಾದ್ರು ಎಂದ ಜಿಟಿಡಿ

ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಪೊಲೀಸ್‌ ಅತಿಥಿಯಾಗಿದ್ದಾನೆ. ಸಾಹಿಲ್ ಜೈನ್

ಚಾಮರಾಜನಗರ ಆಕ್ಸಿಜನ್ ದುರಂತ; ನೋಟಿಸ್ ಗೆ ಉತ್ತರಿಸದ 29 ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಕೋವಿಡ್ ಸಮಯದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್‌ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಸಚಿವ ಸಂಪುಟ

ಶಾಸಕ ಯತ್ನಾಳ್‌ ಉಚ್ಚಾಟನೆ: ಬಿಜೆಪಿ ಘಟಕಗಳ ಪದಾಧಿಕಾರಿಗಳ ಸರಣಿ ರಾಜೀನಾಮೆ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಬಳಿಕ ವಿಜಯಪುರದಲ್ಲಿ ಬಿಜೆಪಿಯ ನಾನಾ ಘಟಕಗಳ ಪದಾಧಿಕಾರಿಗಳ ರಾಜೀನಾಮೆ ಪರ್ವ ಆರಂಭಗೊಂಡಿದೆ. ಬಿಜೆಪಿ ನಗರ ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ ರಾಜೀನಾಮೆ ನೀಡಿದ್ದು, ನಗರ

ಶಾಸಕರು ಲೋಕಾಯುಕ್ತಕ್ಕೆ ಜೂ.30ರೊಳಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ

ಬೆಂಗಳೂರು: ಶಾಸಕರು ಹಾಗೂ ಅವರ  ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂನ್ 30ರೊಳಗೆ ಲೋಕಾಯುಕ್ತರಿಗೆ ಸಲ್ಲಿಸಬೇಕಾಗಿದೆ. 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2024-25ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತರಿಗೆ

ಅಕ್ರಮ ಮರ ಕಡಿತರೆ ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, ಮಾ.26: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ

ಬಿಜೆಪಿಯಿಂದ 6 ವರ್ಷ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ!

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು

ಹಾಸನ ವರ್ತುಲ ರಸ್ತೆ ಯೋಜನೆ: ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಕೋರಿಕೆ

ನವದೆಹಲಿ: ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿಗಳು,ರಾಜ್ಯಸಭೆ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್

64 ಗಂಟೆಗಳಲ್ಲಿ 1.2 ಲಕ್ಷ ಚದರಡಿ ಕೈಗಾರಿಕಾ ಶೆಡ್ ನಿರ್ಮಾಣ, ಮೌಂಟ್ ರೂಫಿಂಗ್ ವಿಶ್ವದಾಖಲೆ!

ಬೆಂಗಳೂರು: ತ್ವರಿತ ಗತಿ ಮತ್ತು ಉತ್ಕೃಷ್ಟ ಗುಣಮಟ್ಟದ ಕೈಗಾರಿಕಾ ಶೆಡ್ ನಿರ್ಮಾಣಕ್ಕೆ ಹೆಸರಾಗಿರುವ ಮೌಂಟ್ ರೂಫಿಂಗ್ ಅಂಡ್ ಸ್ಟ್ರಕ್ಚರ್ಸ್, ಶಿರಾದಲ್ಲಿ ಇರುವ ಕೈಗಾರಿಕಾ ಪ್ರದೇಶದಲ್ಲಿ ಕೇವಲ 64 ಗಂಟೆಗಳಲ್ಲಿ 1.2 ಲಕ್ಷ ಚದರ ಅಡಿ ವಿಸ್ತಾರದ ಪ್ರೀ-ಎಂಜಿನಿಯರ್ಡ್ ಕಟ್ಟಡ ನಿರ್ಮಿಸುವ ಮೂಲಕ