ರಾಜ್ಯ
ಜನವರಿ 22ರಿಂದ 31ರವರೆಗೆ ಜಂಟಿ ಅಧಿವೇಶನದಲ್ಲಿ MGNREGA ವಿಶೇಷ ಚರ್ಚೆ
ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. \ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು. ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ
ಜನವರಿ 29ರಂದು ಸಾರಿಗೆ ನೌಕರರ ಪ್ರತಿಭಟನೆ
ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಜನವರಿ 29ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲಿದ್ದಾರೆ. ಜನವರಿ 29ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನೌಕರರು
ರನ್ಯಾರಾವ್ ಅಕ್ರಮ ಚಿನ್ನ ಸಾಗಣೆ ಕೇಸ್: ಸಸ್ಪೆಂಡೆಡ್ ಡಿಜಿಪಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್
ಕಚೇರಿಯಲ್ಲಿ ಸಮವಸ್ತ್ರದಲ್ಲಿ ಇರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡ ವೀಡಿಯೊ ವೈರಲ್ ಬಳಿಕ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರರಾವ್‌ಗೆ ನಟಿ ರನ್ಯಾರಾವ್ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಸರ್ಕಾರಿ ವಾಹನ ದುರ್ಬಳಕೆ ಮಾಡಿರುವುದಾಗಿ
ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆರ್ ಅಶೋಕ ಆಗ್ರಹ
ಬಾರ್, ಪಬ್, ಕ್ಲಬ್‌ಗಳಿಂದ ‘ಮಂಥ್ಲಿ ಮನಿ’ ವಸೂಲಿ ಮಾಡುವ ಭ್ರಷ್ಟ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಿ.ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ನಡೆಯುತ್ತಿರುವ ಬಲವಂತದ ವಸೂಲಿ ದಂಧೆಯಲ್ಲಿ ಬರೋಬ್ಬರಿ 2,500 ಕೋಟಿ ರೂಪಾಯಿಗಳ ಬೃಹತ್ ಹಗರಣ
ಜೈಲುವಾಸಿ ಪವಿತ್ರಾಗೌಡಗೆ ಮನೆಯೂಟ: ರದ್ದು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್‌ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ನಗರದ ಸೆಷನ್ಸ್ ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಲು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ ತನಿಖೆ
ಕಚೇರಿಯಲ್ಲಿ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸ: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್
ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದುಕೊಂಡೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವ ವೀಡಿಯೊ ವೈರಲ್ ಆದ ಬೆನ್ನಲ್ಲೇ ರಾಜ್ಯ ಸರ್ಕಾರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ನಿನ್ನೆ ಮಧ್ಯಾಹ್ನ 10
ಅಬಕಾರಿ ಅಕ್ರಮದಲ್ಲಿ ಹೆಸರು ದುರ್ಬಳಕೆ: ಕಾನೂನು ಕ್ರಮದ ಎಚ್ಚರಿಕೆಯಿತ್ತ ಸಚಿವ ತಿಮ್ಮಾಪೂರ
ಯಾವನೋ ಒಬ್ಬ ಆಡಿಯೋ ದುರುಪಯೋಗ ಮಾಡಿಕೊಂಡು ನನ್ನ ಹಾಗೂ ನನ್ನ ಮಗನ ಹೆಸರನ್ನು ಹೇಳುತ್ತಿದ್ದಾನೆ. ಕೆಲ ಅಧಿಕಾರಿಗಳ ಹೆಸರನ್ನು ತೆಗೆದುಕೊಂಡಿದ್ದಾನೆ. ಅವನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ
ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ತನಿಖಾ ಸಂಸ್ಥೆಗಳಿಂದ ವಿರೋಧ ಪಕ್ಷಗಳ ನಾಯಕರ ಬೇಟೆ
ಕಾಂಗ್ರೆಸ್ ಮತ್ತು ಮಿತ್ರಕೂಟ ಮತ್ತು ಪ್ರಾದೇಶಿಕ ಪಕ್ಷಗಳನ್ನು ಸಂಪೂರ್ಣವಾಗಿ ನೆಲಸಮಗೊಳಿಸುವ ಅಜೆಂಡಾ ಬಿಜೆಪಿ ಹೊಂದಿರುವುದು ಹೊಸದೇನಲ್ಲ. ನರೇಂದ್ರ ಮೋದಿ ಕಳೆದ ಹತ್ತು ವರ್ಷಗಳಿಂದಲೂ ದೇಶದಿಂದ ಕಾಂಗ್ರೆಸ್ ಅನ್ನು ಸಂಪೂರ್ಣ ವಾಗಿ ಹೊರದೂಡುತ್ತೇವೆ ಮತ್ತು ಈ ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆಂದು ಬಹಿರಂಗವಾಗಿ
ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವ: ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ(ಬಾದಾಮಿ), ಜನವರಿ 19: 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾದಾಮಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ
ಚಾರ್ಮಡಿ ಘಾಟ್ ಅರಣ್ಯಕ್ಕೆ ಬೆಂಕಿ ನೂರಾರು ಎಕರೆ ಸುಟ್ಟು ಭಸ್ಮ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ. ನಿರಂತರ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದ್ದು, ಆತಂಕ




