ರಾಜ್ಯ
ಹನಿಟ್ರ್ಯಾಪ್ ತನಿಖೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಚಿವ ಕೆಎನ್ ರಾಜಣ್ಣ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ಮಧುಬಲೆಯನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಪ್ರಕರಣದ ತನಿಖೆಗೆ ಆಗ್ರಹಿಸಿ ಸರ್ಕಾರಕ್ಕೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಹನಿಟ್ರ್ಯಾಪ್ ಯತ್ನ ನಡೆದಿರುವ ಬಗ್ಗೆ ಕಳೆದ ಶುಕ್ರವಾರ ಸದನದಲ್ಲಿ ಪ್ರಸ್ತಾಪಿಸಿ ಇಲ್ಲಿಯವರೆಗೆ ಯಾವುದೇ ದೂರು ನೀಡಿದೆ ಹಲವು ಉಹಾಪೋಹಗಳಿಗೆ ಕಾರಣವಾಗಿದ್ದ ರಾಜಣ್ಣ ಅವರು ಮಂಗಳವಾರ ಸದಾಶಿವನಗರದ ನಿವಾಸದಲ್ಲಿ ಡಾ. ಜಿ ಪರಮೇಶ್ವರ್ ಅವರಿಗೆ ಅಧಿಕೃತವಾಗಿ ಮನವಿ ನೀಡಿದ್ದಾರೆ. ದೂರು
ಸಿಎಂ ಜೊತೆ ಚರ್ಚಿಸಿ ಹನಿಟ್ರ್ಯಾಪ್ ಪ್ರಕರಣ ತನಿಖೆ: ಜಿ.ಪರಮೇಶ್ವರ್
ಸಚಿವ ಕೆಎನ್ ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಪ್ರಕರಣದ ಕುರಿತು ಸಿಎಂ ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿ ಯಾವ ರೀತಿಯ ತನಿಖೆ ನಡೆಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸಹಕಾರ ಸಚಿವ
ದಾವಣಗೆರೆಯಲ್ಲಿ ಕಾರು ಚಲಾಯಿಸುತ್ತಿದ್ದಾಗಲೇ ಮೃತಪಟ್ಟ ಗುತ್ತಿಗೆದಾರ
ದಾವಣಗೆರೆ ನಗರದ ಬಿಐಇಟಿ ರಸ್ತೆಯ ಈಶ್ವರ ಧ್ಯಾನ ಮಂದಿರದ ಬಳಿ ಕಾರು ಚಾಲನೆ ಮಾಡುವಾಗ ಚಾಲಕ ಹೃದಯಸ್ತಂಭನಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಕಾಏಕಿ ಹೃದಯಸ್ತಂಭನಗೊಂಡ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ
ರಾಜ್ಯದಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ ಪ್ರಕರಣಗಳು
ಬೇಸಿಗೆ ಮಧ್ಯೆ ಮಳೆಯೊಂದಿಗೆ ವಾತಾವರಣ ಬದಲಾಗುತ್ತಿದ್ದಂತೆ ಬೆಂಗಳೂರು ನಗರ ಒಳಗೊಂಡಂತೆ ರಾಜ್ಯದಲ್ಲಿ ವೈರಲ್ ಜ್ವರ ಕೇಸ್‌ಗಳು ಹೆಚ್ಚುತ್ತಿವೆ. ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ನಿಗಾ ಘಟಕವು ಈ ಸಂಬಂಧ ಮಾಹಿತಿ ಪ್ರಕಟಿಸಿ ಅಂಕಿ ಅಂಶಗಳನ್ನು ನೀಡಿದೆ. ಮಾರ್ಚ್ ಆರಂಭದಲ್ಲಿ ಸಂಪೂರ್ಣ
ಪಿಯುಸಿ, ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ: ಮೂವರ ಬಂಧನ
ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯ ಮೂಲಕ ಪಿಯುಸಿ ಮತ್ತು ಎಸ್ಎಸ್ಎಲ್ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು.
ಸಂಘಟಿತ ಅಪರಾಧ ಕೇಸ್ ದಾಖಲಿಸಲು ಅನುಮತಿ: ಎಚ್ಚರಿಕೆ ವಹಿಸಲು ಹೈಕೋರ್ಟ್ ಸೂಚನೆ
ಸಂಘಟಿತ ಅಪರಾಧ (ಬಿಎನ್ಎಸ್ ಸೆಕ್ಷನ್ 111) ಅಡಿ ಪ್ರಕರಣ ದಾಖಲಿಸಲು ತನಿಖಾಧಿಕಾರಿಗಳಿಗೆ ಅನುಮತಿ ನೀಡುವಾಗ ವಿಚಾರಣಾ ನ್ಯಾಯಾಲಯಗಳು ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ಸೋಮವಾರ ಹೈಕೋರ್ಟ್ ತಿಳಿಸಿದೆ. ಮತ್ತೊಬ್ಬ ವ್ಯಕ್ತಿಯ ಎಟಿಎಂ ಕದ್ದು ಬಳಕೆ ಮಾಡಿ 1 ಲಕ್ಷ ರೂ. ಹಣ
ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌ಡಿಕೆ ಸದ್ಯ ನಿರಾಳ
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಸಂಬಂಧ ತಹಶೀಲ್ದಾರ್ ನೀಡಿದ ನೋಟಿಸ್ ವಿರುದ್ಧ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಬಗ್ಗೆ ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಎಎಜಿ ಕಿರಣ್ ರೋಣ್
ನಿವೃತ್ತ ಜಸ್ಟಿಸ್ ನಾಗಮೋಹನ್ ದಾಸ್ ವರದಿ ಬಳಿಕ ಸಿಎಂ ಜತೆ ಒಳಮೀಸಲು ಚರ್ಚಿಸಿ ಕ್ರಮ
ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಒಂದು ವಾರದಲ್ಲಿ ನೀಡಲಿರುವ ಮಧ್ಯಂತರ ವರದಿ ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ
ಆಯುರ್ವೇದ ಉಳಿಸಿ ಬೆಳೆಸಿಕೊಂಡು ಹೋಗಬೇಕು: ಡಿಕೆ ಶಿವಕುಮಾರ್
ಆಯುರ್ವೇದ ಚಿಕಿತ್ಸಾ ಪದ್ಧತಿ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದ್ದು, ಇದು ನಮ್ಮ ಮೂಲ. ಆಯುರ್ವೇದ ನಮ್ಮ ಆಸ್ತಿಯಾಗಿದ್ದು ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾ ವಿಶ್ವವಿದ್ಯಾಲಯದ ಪುರುಷ ವಿದ್ಯಾರ್ಥಿನಿಲಯದ
ರಾಜ್ಯ ಇತಿಹಾಸದಲ್ಲೇ 18 ಸಾವಿರ ಮೆ.ವ್ಯಾ. ದಾಖಲೆ ಪ್ರಮಾಣದ ವಿದ್ಯುತ್ ಬೇಡಿಕೆ
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ. ಸೋಮವಾರ ಜಂಟಿ




