ರಾಜ್ಯ
ಎಚ್ಚರಿಕೆ, ಇದು ಕ್ಯಾಬ್, ಓಯೋ ಅಲ್ಲ; ಪ್ರೇಮಿಗಳಿಗೆ ಬೆಂಗಳೂರು ಚಾಲಕನ ವಾರ್ನಿಂಗ್ ವೈರಲ್
ಕೆಲವೊಂದು ಪ್ರೇಮಿಗಳು ಲೋಕದ ಪರಿವೆ ಇಲ್ಲದೆ ಕಿಸ್ಸಿಂಗ್-ರೊಮ್ಯಾನ್ಸ್ ಎಂದು ಅತಿರೇಕವಾಗಿ ವರ್ತಿಸುತ್ತಿರುವುದರಿಂದ ಬೇಸತ್ತ ಬೆಂಗಳೂರಿನ ಕ್ಯಾಬ್ ಚಾಲಕರೊಬ್ಬರು ಕೈಗೊಂಡ ಕ್ರಮ ವೈರಲ್ ಆಗ್ತಿದೆ. ಕ್ಯಾಬ್ ಚಾಲಕ ” ನೋ ರೊಮ್ಯಾನ್ಸ್, ಇದು ಕ್ಯಾಬ್ ಓಯೋ ಅಲ್ಲ, ನಡುವೆ ಅಂತರವಿರಲಿ,” ಎಂದು ತನ್ನ ಕ್ಯಾಬ್‌ನಲ್ಲಿ ವಾರ್ನಿಂಗ್ ಬೋರ್ಡ್ ಅಳವಡಿಸಿ ಸುದ್ದಿಯಾಗಿದ್ದಾರೆ. ಈ ವಾರ್ನಿಂಗ್ ಬೋರ್ಡ್ ಪೋಟೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕೆಲವು ಪ್ರೇಮಿಗಳು ಎಲ್ಲೆಂದರಲ್ಲಿ ಅತಿರೇಕವಾಗಿ ವರ್ತಿಸುವುದರಿಂದ ಇತರರಿಗೂ
ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ
“ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ಬಗ್ಗೆ ಮಾತ್ರ ಪ್ರಶ್ನೆ ಕೇಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ
ಬೆಂಗಳೂರಿನಲ್ಲಿ ರಿಕವರಿ ಚಿನ್ನ ಗುಳುಂ ಮಾಡಿದ ಪಿಎಸ್‌ಐಯಿಂದ ವ್ಯಾಪಾರಿಗೂ 950 ಗ್ರಾಂ ಚಿನ್ನ ವಂಚನೆ
ಪ್ರಕರಣವೊಂದರಲ್ಲಿ ವಶಪಡಿಸಿಕೊಂಡ ಚಿನ್ನವನ್ನು ದುರ್ಬಳಕೆ ಮಾಡಿಕೊಂಡು, ಬಳಿಕ ಚಿನ್ನದ ಅಂಗಡಿ ಮಾಲೀಕನ ಬಳಿ ರಿಕವರಿ ಚಿನ್ನ ತೋರಿಸಬೇಕಿದ್ದು ಫೋಟೋ ತೆಗೆಸಿ ವಾಪಸ್ ಕೊಡುತ್ತೇನೆ ಎಂದು ಹೇಳಿ 950 ಗ್ರಾಂ ಚಿನ್ನದ ಗಟ್ಟಿಯನ್ನು ಪಡೆದುಕೊಂಡು ವಂಚಿಸಿದ್ದ ಕಾಟನ್ಪೇಟೆ ಠಾಣೆ ಪಿಎಸ್ಐ ಸಂತೋಷ್ ವಿರುದ್ಧ
ಚಿತ್ರದುರ್ಗದಲ್ಲಿ ಬೈಕ್‌ಗೆ ಬಸ್ ಡಿಕ್ಕಿ: ವಿದ್ಯಾರ್ಥಿಗಳಿಬ್ಬರ ಸಾವು
ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಯಾಸಿನ್ (22), ಅಲ್ತಾಫ್ (22) ಮೃತ ವಿದ್ಯಾರ್ಥಿಗಳು. ಮೃತ ವಿದ್ಯಾರ್ಥಿಗಳುಕೇರಳ ಮೂಲದವರಾಗಿದ್ದು, ನರ್ಸಿಂಗ್ ಓದುತ್ತಿದ್ದರು. ಘಟನೆ ಸಂಬಂಧ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯೆಂದರೆ ಬಿಜೆಪಿಯ ರಾಜಕೀಯ ದೌರ್ಜನ್ಯ: ಡಿ.ಕೆ.ಶಿವಕುಮಾರ್
ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಚೆನ್ನೈನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ
ರೈಲ್ವೇ, ಬ್ಯಾಂಕ್, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆಗೆ ಆದ್ಯತೆ: ಡಿಕೆ ಶಿವಕುಮಾರ್
ಬೆಂಗಳೂರು: “ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ ರಾಜಕೀಯ ಧ್ವನಿ ಹತ್ತಿಕ್ಕಲಾಗುತ್ತದೆ. ಹೀಗಾಗಿ ಕೇವಲ ಜನಸಂಖ್ಯೆ ಮಾತ್ರವಲ್ಲದೇ, ಮಾನವ ಅಭಿವೃದ್ಧಿ, ತೆರಿಗೆ
ರಾಜ್ಯಾದ್ಯಂತ ಬಂದ್ ಯಶಸ್ವಿಗೊಳಿಸಿದ ಕನ್ನಡಿಗರಿಗೆ ಅಭಿನಂದನೆ: ವಾಟಾಳ್ ನಾಗರಾಜ್
ಬೆಂಗಳೂರು: ಇಡೀ ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಇದಕ್ಕೆ ಹೋರಾಟ ಮಾಡಿದ ಸಂಘಟನೆಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಕರ್ನಾಟಕ ಬಂದ್ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ
ಬಜೆಟ್‌ನ ವಿಸ್ತರಣೆ ಗಾತ್ರ ದ್ವಿಗುಣ: ಅತಿದೊಡ್ಡ ಬಜೆಟ್ ಹೊಂದಿದ 5ನೇ ರಾಜ್ಯ ಕರ್ನಾಟಕ: ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಸರ್ಕಾರಕ್ಕಿಂತಲೂ ನಮ್ಮ ರಾಜ್ಯದ ಬಜೆಟ್‌ನ ವಿಸ್ತರಣೆಯ ಗಾತ್ರ ದ್ವಿಗುಣಗೊಂಡಿದ್ದು, ದೇಶದಲ್ಲೇ ಕರ್ನಾಟಕ ಅತಿದೊಡ್ಡ ಬಜೆಟ್ ಹೊಂದಿರುವ 5ನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮೇಲೆ ನಡೆದ ಸುದೀರ್ಘ ಚರ್ಚೆಗೆ ಉತ್ತರ
ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ: ಬಹುತೇಕ ಕಡೆ ಸಹಜ ಜೀವನ
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್ಗೆ ಕಾರಣವಾದ ಪ್ರಮುಖ ಕೇಂದ್ರ
ಕಾವೇರಿ ನದಿ ಮಲೀನತೆ, ಒತ್ತುವರಿ ತಡೆಯಲು ತಂಡ ರಚನೆ: ಡಿಕೆ ಶಿವಕುಮಾರ್
ಕೊಡಗು (ಭಾಗಮಂಡಲ): ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕೊಡಗಿನ ಭಾಗಮಂಡಲ ಹೆಲಿಪ್ಯಾಡ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕಾವೇರಿ ನದಿ ಮಲೀನತೆ




