Menu

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮಹಿಳೆ ಬಲಿ

ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ ಬಾಧಿತ ಮಹಿಳೆಯೊಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65) ಮೃತ ಮಹಿಳೆ. ಆಕೆ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಜನರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಕೊಪ್ಪ, ಎನ್​.ಆರ್.ಪುರ

ಕೇಂದ್ರ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧ ಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕರಿಮಣಿ ಮಾಲೀಕ ಯಾರು ಎನ್ನುವುದು ಕೀಳು ಅಭಿರುಚಿಯ ಪ್ರಯೋಗ

ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಶ್ಲಾಘಿಸಿದ್ದಾರೆ. ಸದನದ ಚರ್ಚೆಗಳು ಬಸವಣ್ಣ ಹೇಳಿದಂತೆ ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು. ಸದನದಲ್ಲಿ ಮಾತನಾಡಿದರೆ

300 ಕೋಟಿ ಡಾಲರ್‌ ಕಥೆ ಹೇಳಿ ಮಹಿಳೆಗೆ ಒಂದು ಕೋಟಿ ರೂ. ನಾಮ

ಮನೆಗೆ ಶಾಂತಿ ಪೂಜೆ ಮಾಡಲೆಂದು ಬಂದ ವ್ಯಕ್ತಿ ತನ್ನಲ್ಲಿ 300 ಕೋಟಿ ಅಮರಿಕನ್‌ ಡಾಲರ್‌ ಇದೆ, ತಾನು ಚಿನ್ನದ ವ್ಯವಹಾರ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಕೆ.ಆರ್.ಪುರಂನ ಕಿತ್ತಗನೂರು

ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ ಸಮಬಾಳು ಸಮಪಾಲು ಎನ್ನಲಿ: ವಿಜಯೇಂದ್ರಗೆ ಡಿ.ಕೆ.ಶಿವಕುಮಾರ್ ಸವಾಲು

“ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರಾದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ತಿರುಗೇಟು ನೀಡಿದರು. ಗದಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಎಕ್ಸ್ (ಟ್ವೀಟ್)

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಯಾರೇ ಹಾಕಿದ್ರೂ ಕ್ರಮಕ್ಕೆ ಡಿಸಿಎಂ ಶಿವಕುಮಾರ್ ಸೂಚನೆ

ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್  ಬಿಬಿಎಂಪಿ ಕಮಿಷನರ್ ಅವರಿಗೆ

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವು

ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್‌ಪೋಸ್ಟ್ ಬಳಿ ಶನಿವಾರ ರಾತ್ರಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ನಂದನ್ ಹಾಗೂ ಜೀವನ್ ಎಂದು ಗುರುತಿಸಲಾಗಿದೆ. ಸುನೀಲ್, ಧನುಷ್ ಮತ್ತು ಶಶಾಂಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಚೆಕ್‌ಪೋಸ್ಟ್ ಸಮೀಪ ಕಾರು

ಮಂಡ್ಯದ ವಿದ್ಯಾಸಂಸ್ಥೆಯಲ್ಲಿ ಪುಡ್‌ ಪಾಯಿಸನ್‌ಗೆ ವಿದ್ಯಾರ್ಥಿ ಬಲಿ

ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಫುಡ್ ಪಾಯಿಸನ್‌ಗೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿ ದ್ದಾರೆ. ಅರುಣಾಚಲ ಪ್ರದೇಶ ಮೂಲದ ಕೆರ್ಲಾಂಗ್ (13) ಮೃತ ವಿದ್ಯಾರ್ಥಿ. ಶುಕ್ರವಾರ ರಾತ್ರಿ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಹೋಳಿ ಹಬ್ಬಕ್ಕೆ ಊಟ ಮಾಡಿಸಿದ್ದು,

ಬೀದರ್‌ನಲ್ಲಿ ನೀರಲ್ಲಿ ಮುಳುಗಿ ಮೂವರ ಸಾವು

ಬೀದರ್‌ನಲ್ಲಿ ಎರಡು ಸ್ಥಳಗಳಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಪ್ರಕಾಶ್(22), ಶಿವಾಜೀ (21) ಮತ್ತು ಆಕಾಶ್ ಕಂಟೆಪ್ಪ ಗುಂಗೆ (23) ಮೃತಪಟ್ಟವರು. ಪ್ರಕಾಶ್ ಹಾಗೂ ಶಿವಾಜೀ ಎಂಬ ಯುವಕರಿಬ್ಬರು ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದ ಐತಿಹಾಸಿಕ ಬಾವಿಯಲ್ಲಿ ಈಜಲು

ಜಿಲ್ಲೆಗೊಂದು ವಿವಿಗಿಂತ ಸ್ಪೆಷಾಲಿಟಿ ಆಸ್ಪತ್ರೆ ಅವಶ್ಯ

ಅನಗತ್ಯ ವಿಶ್ವವಿದ್ಯಾಲಯ ಸ್ಥಾಪಿಸಿ ಕಳಪೆ ಗುಣಮಟ್ಟದ ಶಿಕ್ಷಣ ನೀಡಿ  ನಮ್ಮ ಕಾಲದಲ್ಲಿ ಇಷ್ಟು ವಿಶ್ವವಿದ್ಯಾಲಯ ಆರಂಭವಾಗಿವೆ ಎಂದು ಸಂಖ್ಯೆಯ ಹಿಂದೆ ಬೀಳುವ ಬದಲಾಗಿ, ಅದೇ ಭೂಮಿ ಹಾಗೂ ಅಷ್ಟೇ ಅನುದಾನದಲ್ಲಿ ಜಿಲ್ಲೆಗೊಂದು ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿಸಿದರೆ ಹಲವರ ಪ್ರಾಣ