Menu

ವಿಧಾನ ಪರಿಷತ್ತಿನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿ, ವಿಧೇಯಕದ ಉದ್ದೇಶವನ್ನು ವಿವರಿಸಿದರು. ನಂತರ ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ವಿಧೇಯಕ

ಜಮಖಂಡಿಯಲ್ಲಿ ಗರ್ಭದಲ್ಲೇ ಶಿಶು ಸಾವು: ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬ ಆಕ್ರೋಶ

ಬಾಗಲಕೋಟೆಯ ಜಮಖಂಡಿಯಲ್ಲಿರುವ ತಾಯಿ-ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭದಲ್ಲೇ ಶಿಶು ಮೃತಪಟ್ಟಿದ್ದು, ಇದಕ್ಕೆ ವೈದ್ಯರ ಬೇಜವಾಬ್ದಾರಿಯೇ ಕಾರಣವೆಂದು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ಜಮಖಂಡಿಯ ಚೌಡಯ್ಯ ನಗರದ ನಿವಾಸಿ.ಶಿವಪ್ಪ ರೇವಣಸಿದ್ದಪ್ಪ ಬೋವಿ ಅವರ ಪತ್ನಿ ಇಂದ್ರಾ ಅವರ ಗರ್ಭದಲ್ಲೇ ಮಗು ಮೃತಪಟ್ಟಿದೆ. ಇಂದ್ರಾ ಅವರನ್ನು

ಸಾರಿಗೆ ನಿಗಮಗಳಿಗೆ 5 ವರ್ಷಗಳಲ್ಲಿ 5,200 ಕೋಟಿ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ತೈಲಬೆಲೆ ಏರಿಕೆ, ಸಿಬ್ಬಂದಿ ವೇತನ ಸೇರಿದಂತೆ ಆರ್ಥಿಕ ಸೌಲಭ್ಯ ನಿರ್ವಹಣೆಯಿಂದಾಗಿ ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ 5,200 ಕೋಟಿ ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನ ಪ್ರಶ್ನೋತ್ತರ

ರನ್ಯಾ ಚಿನ್ನ ಕಳ್ಳಸಾಗಾಣೆ: ಜಾಮೀನು ಅರ್ಜಿ ಆದೇಶ ಮಾ.14 ಪ್ರಕಟ

ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ಬೆಂಗಳೂರು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಮಾರ್ಚ್ 14ಕ್ಕೆ ಕಾಯ್ದಿರಿಸಿದೆ. ಕಳೆದ ೧೫ ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ

ಅರಮನೆ ಮೈದಾನದ ಭೂಭಾಗಕ್ಕೆ ಟಿಡಿಆರ್‌ ನಿರಾಕರಣೆ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು:ಅರಮನೆ ಮೈದಾನದ ಭೂಭಾಗಕ್ಕೆ ಟಿಡಿಆರ್‌ ನೀಡಲು ನಿರಾಕರಿಸುವ ಸಂಬಂಧಪಟ್ಟಂತೆ ರೂಪಿಸಲಾಗಿರುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಹಿ ಹಾಕಿದ್ದಾರೆ. ರಾಜ್ಯಪಾಲರ ಸಹಿಯ ಬೆನ್ನಲ್ಲೇ ರಾಜ್ಯಸರ್ಕಾರ ಶೀಘ್ರದಲ್ಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಿದ್ದು, ನಂತರ ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಲು ತಯಾರಿ ನಡೆಸಿದೆ. ಬೆಂಗಳೂರು

ರಾಜ್ಯ, ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ

ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ

5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ

5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ

ಶಿಕ್ಷಣ, ವೈದ್ಯಕೀಯ ಕ್ಷೇತ್ರಕ್ಕೆ ವೀರಶೈವ ಮಠಗಳ ಕೊಡುಗೆ ಅನುಪಮ: ಈಶ್ವರ ಖಂಡ್ರೆ

ಬೆಂಗಳೂರು ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ

ವಾಟರ್ ಮ್ಯಾನ್ ಸರ್ಕಾರಿ ನೌಕರರೆಂದು ಘೋಷಣೆ ಆಸಾಧ್ಯ: ಬೈರತಿ ಸುರೇಶ್

ಬೆಂಗಳೂರು:ರಾಜ್ಯದ ಎಲ್ಲಾ ಮಹಾನಗರ ವ್ಯಾಪ್ತಿಯ ಜಲಮಂಡಳಿಗಳಲ್ಲಿ 13 ಸಾವಿರ ಮಂದಿ ವಾಟರ್ ಮ್ಯಾನ್ ಗಳಿದ್ದು, ಇವರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಬೈರತಿ ಸುರೇಶ್ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ

ತುಮಕೂರು ಕೆಂಪಮ್ಮ ದೇಗುಲ ಬಳಿ ವಾಮಾಚಾರ, ಬಾಗಿಲಿಗೆ ತಗುಲಿದ ಬೆಂಕಿ

ತುಮಕೂರಿನ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಎದುರು ದುಷ್ಕರ್ಮಿಗಳು ವಾಮಾಚಾರ ಎಸಗಿರುವುದು ಪತ್ತೆಯಾಗಿದೆ. ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿಯು ದೇಗುಲದ ಬಾಗಿಲನ್ನು ಸಂಪೂರ್ಣ ಆವರಿಸಿ