Thursday, October 01, 2026
Menu

ಬೆಂಗಳೂರಿನಲ್ಲಿ 53 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ

ಬೆಂಗಳೂರಿನಲ್ಲಿ ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ  ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,  ಬೆಂಗಳೂರು ನಗರವನ್ನು  ಶ್ವಾಸತಾಣ ಮತ್ತು ಮನೋಲ್ಲಾಸ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸಂಪುಟ 50 ಕೋಟಿ ರೂ. ಮಂಜೂರು ಮಾಡಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ

ನಾಳೆಯಿಂದ ಎಡದಂಡೆ, 8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ

ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಬಳ್ಳಾರಿ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅಮಾನತು

ಬಳ್ಳಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘರ್ಷಣೆ ಸಂಬಂಧ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡಿದ್ದ ಬಳ್ಳಾರಿ ಜಿಲ್ಲೆಯ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅವರನ್ನು ಅಮಾನತುಗೊಳಿಸಲಾಗಿದೆ. ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಸುವ ಕುರಿತು ನಡೆದ ಘರ್ಷಣೆಯಲ್ಲಿ ಗಾಳಿಯಲ್ಲಿ ಹಲವು ಸುತ್ತಿನ

ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ ಬಿಜೆಪಿ ಮಾಜಿ ಶಾಸಕ ರಾಮದಾಸ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 32 ವರ್ಷಗಳ ಕಾಲ ರಾಜಕೀಯ ಮಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್‌.ಎ.ರಾಮದಾಸ್‌ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ

ಸಿಇಟಿ ವೇಳಾಪಟ್ಟಿ ಪ್ರಕಟ: ಏಪ್ರಿಲ್ 22ರಿಂದ ಪರೀಕ್ಷೆ ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ‌ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ

ಬಳ್ಳಾರಿ ಘಟನೆಯಲ್ಲಿ ನಮ್ಮ ತಪ್ಪಿಲ್ಲ, ಯಾವುದೇ ತನಿಖೆಗೆ ಸಿದ್ಧ: ಜಂಟಿ ಸುದ್ದಿಗೋಷ್ಠಿಯಲ್ಲಿ ಜನಾರ್ದನ ರೆಡ್ಡಿ- ಶ್ರೀರಾಮುಲು ಆಗ್ರಹ

ಬಳ್ಳಾರಿಯಲ್ಲಿ ನಿನ್ನೆ ನಡೆದ ಬ್ಯಾನರ್‌ ಕಟ್ಟುವ ವಿಷಯದಲ್ಲಿ ಗಲಾಟೆ ವಿಷಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಸಾವಿನ ವಿಷಯದಲ್ಲಿ ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ. ಆದರೆ ಈ ರೀತಿಯ ಗೂಂಡಾಗಿರಿಗೆ ನಾವು ಬಗ್ಗುವುದಿಲ್ಲ ಎಂದು ಬಿಜೆಪಿಯ ಮಾಜಿ ಶಾಸಕ ಶ್ರೀರಾಮುಲು ಹಾಗೂ ಶಾಸಕ

ಜನಾರ್ದನ ರೆಡ್ಡಿಗೆ ಭದ್ರತಾ ವ್ಯವಸ್ಥೆ ಕೊಡಿ: ಸುಧಾಕರ ರೆಡ್ಡಿ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಶಾಸಕ ಜನಾರ್ದನ ರೆಡ್ಡಿಯವರಿಗೆ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಈ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು

ಬಳ್ಳಾರಿ ಘಟನೆ ನ್ಯಾಯಾಂಗ ತನಿಖೆ ನಡೆಸಲು ಆರ್.ಅಶೋಕ್ ಆಗ್ರಹ

ಬೆಂಗಳೂರು: ಮಾಜಿ ಸಚಿವ ಮತ್ತು ಶಾಸಕ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಪ್ರಾಣಾಪಾಯ ಇದೆ. ಕೂಡಲೇ ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಸಫಾರಿ ನಿರ್ಬಂಧ ಪುನರ್‌ ಪರಿಶೀಲನೆಗೆ ಸಮಿತಿ: ಸಿಎಂ ಸೂಚನೆ

ಅರಣ್ಯ ಇಲಾಖೆಯಿಂದ ಸಫಾರಿಗೆ ಮತ್ತೆ ಅನುಮತಿ ನೀಡುವ ಹಾಗೂ ಅರಣ್ಯ ಪ್ರವಾಸೋದ್ಯಮದಿಂದ ಮತ್ತೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ರಾಜ್ಯ ವನ್ಯ

ಫೆ.23 ಮಂಡ್ಯದ ಆದಿ ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರತಿಷ್ಠಿತ ಆದಿಚುಂಚನಗಿರಿ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯಲ್ಲಿ ಫೆಬ್ರವರಿ 23ರಂದು ನಡೆಯಲಿರುವ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಬಳಿಕ ನಿರ್ಮಲಾನಂದನಾಥ