ರಾಜ್ಯ
ಕೋಗಿಲು ಪ್ರಕರಣ: ಅಕ್ರಮ ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲವೆಂದ ಡಿಕೆ ಶಿವಕುಮಾರ್
“ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಅಕ್ರಮವಾಗಿ ಸರ್ಕಾರಿ ಜಾಗ ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಮುಸ್ಲಿಂಮರ ಓಲೈಕೆ ಮಾಡಲಾಗುತ್ತಿದೆ ಎನ್ನುವ ಪ್ರತಿಪಕ್ಷದ ಟೀಕೆಗಳ ಬಗ್ಗೆ ಕೇಳಿದಾಗ, “ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರು ಹಣ
ಕೃಷಿ ಸಚಿವರ ತವರಲ್ಲೇ ಆರಂಭವಾಗದ ಭತ್ತ ಖರೀದಿ ಕೇಂದ್ರ: ಆರ್ ಅಶೋಕ
ಸಿಎಂ @siddaramaiah ನವರೇ, ಡಿಸೆಂಬರ್ ಆರಂಭದಲ್ಲೇ ಆರಂಭವಾಗಬೇಕಿದ್ದ ಭತ್ತ ಖರೀದಿ ಕೇಂದ್ರ ಇನ್ನೂ ಯಾಕೆ ಆರಂಭ ಆಗಿಲ್ಲ? ನಿಮ್ಮ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ನಿದ್ದೆ ಮಾಡುತ್ತಿದ್ದಾರಾ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಭತ್ತ ಖರೀದಿ
ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ವೇಣುಗೋಪಾಲ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ
ಕೆಸಿ ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ
ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ, ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯ: ಸಿಎಂ
ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಖಾಲಿ ಮಾಡಿರಲಿಲ್ಲ. ಅವರಿಗೆಲ್ಲ ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ
ಹೊಸವರ್ಷದಂದು ನಂದಿ ಗಿರಿಧಾಮ ಸಾರ್ವಜನಿಕರಿಗೆ ಬಂದ್
ಬೆಂಗಳೂರು:ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ಡಿ.31ರ ಮಧ್ಯಾಹ್ನ 2ರಿಂದ ಜ.1ರ ಬೆಳಿಗ್ಗೆ 10 ಗಂಟೆಯವರೆಗೆ ಬಂದ್ ಮಾಡಲಾಗಿದೆ. ಅತಿಥಿಗೃಹ ಬುಕ್ ಮಾಡಿದವರನ್ನು ಹೊರತುಪಡಿಸಿ ಉಳಿದ ಪ್ರವಾಸಿಗರಿಗೆ ನಿಷೇಧ
ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ; ಸರ್ಕಾರದ ವಿರುದ್ಧ ಹೋರಾಟ: ನಿಖಿಲ್ ಕುಮಾರಸ್ವಾಮಿ
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಜಪ್ತಿ ಮಾಡಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್
1 ಕೋಟಿ ಸಾಲ ಪಡೆದು ವಂಚನೆ: ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ದ ಪ್ರಕರಣ ದಾಖಲು!
ಬೀದರ್: 2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ 99 ಲಕ್ಷ ರೂ. ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಾಸಕರ ದೂರದ ಸಂಬಂಧಿ ಎಂದು ಹೇಳಲಾಗುವ ದೂರುದಾರರು, ಶರಣು ಸಲಗರ್ ಚುನಾವಣಾ ಸಂಬಂಧಿತ
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಪ್ರಗತಿ ಪರಿಶೀಲನಾ ಸಭೆ
ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು
ಮರ್ಯಾದೆ ಹತ್ಯೆ ತಡೆಯಲು ಕಾಯ್ದೆ: ಸಿಎಂ ಭರವಸೆ
ಮರ್ಯಾದೆ ಹತ್ಯೆ ತಡೆಯಲು ಕಾಯ್ದೆಯನ್ನು ರೂಪಿಸಿ ಜಾರಿ ಮಾಡಬೇಕೆಂಬ ಮನವಿಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,
ಆಂಧ್ರದ ಗಣಿಗಾರಿಕೆ ಪರ್ಮಿಟ್, ಕರ್ನಾಟಕ ಭೂ ಒತ್ತುವರಿ: ಜನಾರ್ದನ ರೆಡ್ಡಿ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಂಧ್ರದ ಗಣಿಗಾರಿಕೆ ಪರವಾನಗಿ ಪಡೆದುಕೊಂಡು ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಸಾಬೀತಾಗಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಸರ್ವೆಯಲ್ಲಿ ಈ ವಿಚಾರ ಬಯಲಾಗಿದೆ. ಹೀಗಾಗಿ ಜನಾದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ.




