Menu

ಪಶುವೈದ್ಯ ಇಲಾಖೆಯಲ್ಲಿ 700 ಗ್ರೂಪ್ ‘ಡಿ’ ವೃಂದದ ಹುದ್ದೆ ಭರ್ತಿಗೆ ಮಂಜೂರಾತಿ

ರಾಜ್ಯದ ಪಶುವೈದ್ಯ ಇಲಾಖೆಯಲ್ಲಿ ಒಟ್ಟು 18563 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 8151 ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಂತೆ ಒಟ್ಟು 10412 ಹುದ್ದೆಗಳು ಖಾಲಿ ಇವೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್  ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಸಚಿವರು,  ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ

ವಿದ್ಯುತ್‌ ಕಳ್ಳತನ: 6.36 ಕೋಟಿ ರೂ. ದಂಡ ವಿಧಿಸಿದ ಸೆಸ್ಕ್

ಮೈಸೂರು: ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು 6 ಕೋಟಿ ರೂ.ಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿದ್ದಾರೆ. ಸೆಸ್ಕ್‌ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸೆಸ್ಕ್

ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಯಸ್ಕ ಬಾಲಕಿ, ಆರೋಪಿಯ ಬಂಧನ

ಯಲ್ಲಾಪುರದ ಮೂಲದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ಮುಂಡಗೋಡ ತಾಲೂಕಿನ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದಳು. ಈ

ದೇವಾಲಯದ ಹೆಸರಿಗೆ ಖಾತೆ ದಾಖಲು: ಸಚಿವ ರಾಮಲಿಂಗಾರೆಡ್ಡಿ

ಉಚ್ಛನ್ಯಾಯಾಲಯದ ಆದೇಶದಂತೆ ದೇವಾಲಯದ ಹೆಸರಿಗೆ ಖಾತೆ ದಾಖಲು ಮಾಡಿ ದೇವಾಲಯದ ಹೆಸರು-ಧಾರ್ಮಿಕ ದತ್ತಿ ಇಲಾಖೆ ಎಂದು ಪಹಣಿಯಲ್ಲಿ ನಮೂದಿರುವ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಮತ್ತು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ 

ಕಾವೇರಿ 2.0 ತಂತ್ರಾಂಶದೊಂದಿಗೆ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಕಾವೇರಿ 2.0 ತಂತ್ರಾಂಶ ಚಾಲನೆಗೆ ಬಂದ ನಂತರ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ ದೊರೆತಿದ್ದು, ಪ್ರಸ್ತುತ ಕಾಲಮಾನದಲ್ಲಿ ಸಾಫ್ಟ್‌ವೇರ್‌ಗೆ ಸಂಬಂಧಿಸಿದಂತೆ ಉದ್ಭವಿಸುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ  ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ನೆಡೆದ

ವಾಣಿಜ್ಯ ತೆರಿಗೆ ಇಲಾಖೆಗೆ ಜಿಎಸ್‍ಟಿ ವಂಚಿಸಿದಾತ ಅರೆಸ್ಟ್‌ 

ಬೆಂಗಳೂರಿನ ಜಿಮ್ ಮತ್ತು ಫಿಟ್ನೆಸ್ ಕೇಂದ್ರದ ಮಾಲೀಕರೊಬ್ಬರು ಗ್ರಾಹಕರಿಂದ ರೂ.39 ಕೋಟಿಗೂ ಮಿಗಿಲಾದ ಶುಲ್ಕ ಮತ್ತು  ಜಿ.ಎಸ್.ಟಿ ತೆರಿಗೆಯನ್ನು ಸಂಗ್ರಹಿಸಿದ್ದರೂ ಸರ್ಕಾರಕ್ಕೆ ಪಾವತಿಸದ ಪ್ರಕರಣವೊಂದರಲ್ಲಿ  ವಾಣಿಜ್ಯ ತೆರಿಗೆಗಳ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಜಿಮ್ ಮಾಲೀಕರನ್ನು ಬಂಧಿಸಿದ್ದಾರೆ. ಜಿಮ್ ಮಾಲೀಕರು ನಗರದಲ್ಲಿ

ಜಾತಿ ರಾಜಕಾರಣ ನಡೆಯಲ್ಲ: ಯತ್ನಾಳ್ ಗೆ ಬಿವೈವಿ ಟಾಂಗ್

ಜಾತಿ ಹೆಸರು ಹೇಳಿ ರಾಜಕಾರಣ ಮಾಡುತ್ತಿರುವವರು, ಮಾಡಿದವರು ಕೇವಲ ಶಾಸಕರಾಗಿ, ಮಾಜಿ ಸಚಿವರಾಗಿ ಉಳಿದುಕೊಂಡಿದ್ದಾರೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲ ಸಮಾಜಗಳ ಧ್ವನಿಯಾಗಿ ಹೋರಾಟ ಮಾಡಿದ ಯಡಿಯೂರಪ್ಪ ಅವರಂಥ ನಾಯಕರು 4 ಬಾರಿ ಮುಖ್ಯಮಂತ್ರಿಯಾಗಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ

ಹಾಲಿನ ಖರೀದಿ ದರ ಹೆಚ್ಚಳ ಸರ್ಕಾರದ ಪರಿಶೀಲನೆಯಲ್ಲಿದೆ: ಸಚಿವ ಕೆ.ವೆಂಕಟೇಶ್

ಬೆಂಗಳೂರು: ಹಾಲಿನ ಮಾರಾಟ ದರವನ್ನು ಹೆಚ್ಚಿಸಿ, ಹಾಲಿನ ಖರೀದಿ ದರವನ್ನು ಸಹ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಪರಿಶೀಲನೆಯಲ್ಲಿಯಲ್ಲಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಡಾ ಉಮಾಶ್ರೀ ಮತ್ತು ಡಾ.ಎಂ.ಜಿ.

26 ಲಕ್ಷ ನಕಲಿ ಕಾರ್ಡ್‍ಗಳು ರದ್ದು: ಸಚಿವ ಸಂತೋಷ ಲಾಡ್

ಬೆಂಗಳೂರು: ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‍ಗಳಲ್ಲಿ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸದನಕ್ಕೆ ತಿಳಿಸಿದರು. ಸದಸ್ಯ ಮಹೇಷ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ

ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ತಾಯಿ ಶಾರದಾ, ಮಕ್ಕಳಾದ ಅಮೃತಾ, ಆದರ್ಶ ಮತ್ತು ಅನುಷ್ಕಾ ಮೃತಪಟ್ಟಿದ್ದಾರೆ. ಮೂರು ಮಕ್ಕಳೊಂದಿಗೆ ತಾಯಿ