Menu

ಧರ್ಮಸ್ಥಳ ಪ್ರಕರಣದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ

ಬಿಹಾರ ಚುನಾವಣೆ ಫಲಿತಾಂಶ ಬಳಿಕ ಮತಗಳ್ಳತನ ಆರೋಪ ಮಾಡುತ್ತಾರೆ: ಆರ್‌ ಅಶೋಕ

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ.

ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದೆ : ಸಿಎಂ ಸಿದ್ದರಾಮಯ್ಯ

ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಢ್ಯದ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು

ಕಾರಾಗೃಹ ಇಲಾಖೆ ಸರಿ ಮಾಡೋದು ಅಸಾಧ್ಯ, ರಿಲೀವ್‌ ಮಾಡಿ: ADGP ದಯಾನಂದ್‌ ಮನವಿ

ಕಾರಾಗೃಹ ಇಲಾಖೆಯನ್ನು ಸರಿ ಮಾಡೋದು ನಾಯಿ ಬಾಲಕ್ಕೆ ದಬ್ಬೆ ಕಟ್ಟಿದಂತೆ, ಕಾರಾಗೃಹ ಇಲಾಖೆ ಸಿಬ್ಬಂದಿ ಯಾರ ಮಾತನ್ನು ಕೇಳೋದಿಲ್ಲ, ದಯವಿಟ್ಟು ಕಾರಾಗೃಹ ಇಲಾಖೆಯಿಂದ ರಿಲೀವ್‌ ಮಾಡಿ ಎಂದು ADGP ದಯಾನಂದ್‌ DGP ಸಲೀಂ ಹಾಗು ಗೃಹ ಸಚಿವ ಪರಮೇಶ್ವರ್ ಗೆ ಮನವಿ

ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ: ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆ ವಿಚಾರದಲ್ಲಿ ಬೇರೆಯವರ ಮೇಲೆ ಆರೋಪ ಮಾಡುವುದಿಲ್ಲ. ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಜನಸಾಮಾನ್ಯರನ್ನು ರಕ್ಷಿಸಿ, ಸರ್ಕಾರದ ಗೌರವ ಉಳಿಸಿಕೊಳ್ಳುವುದೇ ಪರಿಹಾರ. ಸೂಕ್ತ ಸಮಯ ಬಂದಾಗ ನಾವು ಆರೋಪ ಮಾಡುತ್ತೇವೆ. ಈಗ ನಾವು ಆರೋಪ

ಶಿವಮೊಗ್ಗ ಜೈಲಿನಲ್ಲಿ ಅನಾರೋಗ್ಯದಿಂದ ಕೈದಿ ಸಾವು

ಜೀವಾವಧಿ ಶಿಕ್ಷೆಗೆ ಗುರಿಯಾಗಿ ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿದ್ದ ಕೈದಿಯೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು ಕೆಪಿ ಮೃತಪಟ್ಟ ಕೈದಿ. ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಸಜಿ ಬಾಬು ಶಿಕ್ಷೆಗೆ ಗುರಿಯಾಗಿ 2025 ಆಗಸ್ಟ್ 22 ಕ್ಕೆ ಶಿವಮೊಗ್ಗ ಸೆಂಟ್ರಲ್

ಮಂಡ್ಯದಲ್ಲಿ  ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ ಸಚಿವ ಸಂತೋಷ್ ಲಾಡ್ 

ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರಿಗೆ ಸೌಲಭ್ಯ, ಅನುಕೂಲತೆಗಳನ್ನು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ

ಅಶಾಂತಿ ಮೂಡಿಸುವ ಶಕ್ತಿಗಳ ದಮನಕ್ಕೆ ಕೇಂದ್ರ ಕ್ರಮ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆ ಮಾಡಿ ಅಶಾಂತಿ ಮೂಡಿಸುವ ಈ ಶಕ್ತಿಗಳ ದಮನಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು : ಡಿಕೆ‌ ಶಿವಕುಮಾರ್

“ಜ್ಞಾನ, ತಂತ್ರಜ್ಞಾನದ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನದ ಹಲವಾರು ಪಂಡಿತರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ. ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್ ನಲ್ಲಿರುವ ಕಾಲಿನ್ಸ್ ಇಂಡಿಯಾ ಆಪರೇಶನ್ ಸೆಂಟರ್ ನ ಉದ್ಘಾಟನಾ ಸಮಾರಂಭದಲ್ಲಿ 

ಕೆಪಿಎಸ್ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ, ಕೌಶಲ್ಯ ತರಗತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಕೆಪಿಎಸ್ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಮತ್ತು 6ನೇ ತರಗತಿಯಿಂದ ಕೌಶಲ್ಯ ಅಭಿವೃದ್ಧಿ (ಸ್ಕಿಲ್) ತರಗತಿ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ದೇಶದ ಪ್ರಥಮ ಶಿಕ್ಷಣ ಸಚಿವರಾದ ಡಾ. ಮೌಲಾನಾ ಅಬುಲ್ ಕಲಾಂ ಆಜಾದ್