ರಾಜ್ಯ
ಕಾಂಗ್ರೆಸ್ ಶಾಸಕನ ಕಾರಿನಲ್ಲಿ ಪ್ರೀತಂಗೌಡ: ರಾಜಕೀಯ ಸಂಚಲನ ಸೃಷ್ಟಿಸಿದ ವೀಡಿಯೊ
ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್‌ಗೌಡ ಮತ್ತು ಹಾಸನ ಮಾಜಿ ಶಾಸಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಒಂದೇ ಕಾರಲ್ಲಿ ಓಡಾಡುತ್ತಿರುವ ದೃಶ್ಯದ ವೀಡಿಯೊ ವೈರಲ್ ಆಗಿದ್ದು, ರಾಜಕೀಯ ಸಂಚಲನ ಸೃಷ್ಟಿಸಿದೆ. ಪ್ರೀತಂಗೌಡ ಕಾಂಗ್ರೆಸ್ ಸಖ್ಯ ಬೆಳೆಸಿದ್ದಾರೆಯೇ ಎಂಬ ಚರ್ಚೆ ಕಾವೇರಿದೆ. ಖಾಸಗಿ ಕಾರ್ಯಕ್ರಮ ನಿಮಿತ್ತ ಲಲಿತ ಮಹಲ್ ಹೋಟೆಲ್‌ಗೆ ಭೇಟಿ ನೀಡಿದ್ದ ಪ್ರೀತಂಗೌಡ, ಶಾಸಕ ಹರೀಶ್‌ಗೌಡ ಅವರ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಜತೆಯಲ್ಲೇ ಹಾಸನ ಜಿಲ್ಲಾ
ಮಹಾತ್ಮಾ ಗಾಂಧಿ ಹೆಸರು ಬದಲಿಸುವ ಕೆಲಸ ಮಾಡಿದ ಬಿಜೆಪಿಯ ಅಂತಿಮ ದಿನಗಳು ಸಮೀಪಿಸುತ್ತಿವೆ: ಡಿಕೆ ಶಿವಕುಮಾರ್
“ದೀಪ ಆರುವಾಗ ಜೋರಾಗಿ ಉರಿಯುತ್ತದೆಯಂತೆ. ಅದೇ ರೀತಿ ಬಿಜೆಪಿಯ ಅಂತಿಮ ದಿನಗಳು ಸಮೀಪಿಸಿರುವ ಕಾರಣ, ಮಹಾತ್ಮಾ ಗಾಂಧಿ ಅವರ ಹೆಸರು ಬದಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ಮನರೇಗಾ ಬಚಾವೋ ಪ್ರತಿಭಟನಾ ಸಮಾವೇಶದಲ್ಲಿ
ಮನರೇಗಾ ಮರುಸ್ಥಾಪಿಸಲು ಕಾಂಗ್ರೆಸ್‌ನ ಹೋರಾಟ ಬೆಂಬಲಿಸಿ: ಮುಖ್ಯಮಂತ್ರಿ
ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ದೇಶಾದ್ಯಂತ
ಸಚಿವ ಮಹದೇವಪ್ಪ ನಮ್ಮ ರಾಷ್ಟ್ರೀಯ ನಾಯಕರು, ಅವರಿಗೆ ಇಲ್ಲಿಂದಲೇ ನಮಸ್ಕಾರ: ಡಿಸಿಎಂ
ಸಚಿವ ಮಹದೇವಪ್ಪ ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ ಎಂದು ಡಿಕೆ ಶಿವಕುಮಾರ್ ತಿವಿದಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಹದೇವಪ್ಪ ಅವರು ದಲಿತ ಸಿಎಂ ವಿಚಾರ ಮಂಡಿಸಿರುವ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಡಿಸಿಎಂ ಹೀಗೆ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರೀಯ ನೀರು ಗುಣಮಟ್ಟ
“ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ”
ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ “ಮಂಥನ” ದ ವೇದಿಕೆಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಹೇಳಿದ್ದಾರೆ.
10ನೇ ಗ್ಯಾರಂಟಿಯಾಗಿ ಉಚಿತ ಆರೋಗ್ಯ ನಮ್ಮ ಸರ್ಕಾರದ ಸಂಕಲ್ಪ: ಡಿಕೆ ಶಿವಕುಮಾರ್
ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಸಂಕಲ್ಪ. ಇದನ್ನು ನಮ್ಮ ಸರ್ಕಾರ ಕಾರ್ಯರೂಪಕ್ಕೆ
ಮುಂದಿನ ಆಯವ್ಯಯದಲ್ಲಿ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು: ಸಿಎಂ ಸಿದ್ದರಾಮಯ್ಯ
ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದ್ದಾರೆ. ಕಾರವಾರದಲ್ಲಿ ಜಿಲ್ಲಾ ಪಂಚಾಯತ್ , ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಲೋಕೋಪಯೋಗಿ ಇಲಾಖೆ ಆಯೋಜಿಸಿದ್ದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ
ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ
ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡಲು ಐದು ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಈ ಕಾರ್ಯಾಚರಣೆ ನಡೆಸಿದೆ. ಶಾಸಕ ಚಂದ್ರು ಲಮಾಣಿಗೆ ಸೇರಿದ
ನೇಮಕ, ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ತಡೆಯುವುದು ಸರ್ಕಾರದ ಆಶಯ: ಸಿಎಂ
ಸರ್ಕಾರವು ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಠಚಾರ ತಡೆಯಲು ಸಾಧ್ಯವಾಗುತ್ತಿದೆ. ವೈದ್ಯರನ್ನು ಸೇರಿದಂತೆ 5700 ಹುದ್ದೆಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ ಗಳ ಹಾವಳಿ ಹೆಚ್ಚುತ್ತಿದ್ದು, ಸರ್ಕಾರಿ ನೌಕರರು
ಬಿಕ್ಲು ಶಿವ ಕೊಲೆ: ಬೈರತಿ ಬಸವರಾಜ್‌ಗೆ ಫೆ.26ರವರೆಗೆ ಜ್ಯುಡಿಷಿಯಲ್ ಕಸ್ಟಡಿ
ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ. ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಮತ್ತೆ ಪೊಲೀಸ್ ಕಸ್ಟಡಿಗೆ ನೀಡವಂತೆ ಮನವಿ ಮಾಡಿತ್ತು. ವೈದ್ಯಕೀಯ




