Menu

ಸಿಎಂ ಬದಲಾವಣೆ ಚರ್ಚೆ: ಹೇಳಿಕೆ ನೀಡಲ್ಲವೆಂದ ಎಂಎಲ್‌ಸಿ ಯತೀಂದ್ರ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ , ಈ ವಿಷಯದಲ್ಲಿ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಗ್ಗೆ ನಾನು ಏನೇ ಹೇಳಿದರೂ ಮಾಧ್ಯಮದವರು ಅದನ್ನೇ ದಿನಗಟ್ಟಲೇ ಪ್ರಸಾರ ಮಾಡಿ ವಿವಾದ ಸೃಷ್ಟಿಸುತ್ತಾರೆ. ಆದ್ದರಿಂದ ಸಿಎಂ ಬದಲಾವಣೆ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಬಾರದೆಂದು ತೀರ್ಮಾನಿಸಿದ್ದೇನೆ” ಎಂದು

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಇಂದಿನಿಂದ

9 ಡ್ರೀಮ್ಸ್‌ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೇ ಶುರುವಾಗಿದೆ. ಫೆಬ್ರವರಿ 21 ಮತ್ತು 22ರಂದು ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಅಂಗಣದಲ್ಲಿ ನಡೆಯಲಿರುವ ಎರಡು ದಿನಗಳ ಟೂರ್ನಿಯಲ್ಲಿ ಎಂಟು ತಂಡಗಳು ಭಾಗವಹಿಸಲಿವೆ. ಜನಪ್ರತಿನಿಧಿಗಳು, ಐಎಎಸ್‌-ಐಪಿಎಸ್‌ ಅಧಿಕಾರಿಗಳು, ಸಚಿವಾಲಯದ

ಸಿಎಸ್‌ಗೆ ಒಂದೂವರೆ ಕೋಟಿ ರೂ. ಲಂಚ ಆರೋಪ: ಸ್ನೇಹಮಯಿ ಕೃಷ್ಣ ಅರೆಸ್ಟ್‌

ಆರ್‌ಟಿಐ ಕಾರ್ಯಕರ್ತ, ಮುಡಾ ಪ್ರಕರಣದ ರೂವಾರಿ ಆಗಿರುವ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸೈಬರ್‌ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್‌ ನೀಡಿದ ದೂರು ಆಧರಿಸಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ಸ್ನೇಹಮಯಿ ಕೃಷ್ಣ ನಟೇಶ್‌ ವಿರುದ್ಧ ಗಂಭೀರ ಆರೋಪ

ಬಾಗಲಕೋಟೆ ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ; ಸೂಕ್ತ ತನಿಖೆ, ಕಠಿಣ ಕ್ರಮದ ಎಚ್ಚರಿಕೆಯಿತ್ತ ಸಿಎಂ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ

ನಾಗರಹೊಳೆ, ಬಂಡೀಪುರ ಸಫಾರಿ ಮತ್ತೆ ಆರಂಭಕ್ಕೆ ರೈತರಿಂದ ವಿರೋಧ

ಕಳೆದ ಮೂರು ತಿಂಗಳಿಂದ ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬಂದ್‌ ಮಾಡಿದ್ದ ಸಫಾರಿ ಮತ್ತೆ ಆರಂಭಿಸಲು ಸರ್ಕಾರ ಸಮ್ಮತಿಸಿದೆ. ಆದರೆ ಇದಕ್ಕೆ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿ ಸಫಾರಿ ಬಂದ್ ಬಳಿಕ ಪ್ರವಾಸಿಗರು ನೆರೆರಾಜ್ಯದತ್ತ ತೆರಳಲು ಆರಂಭಿಸಿದ್ದರು. ಈ

ಮತದಾರರ ಪಟ್ಟಿ ದೋಷ: ಮನೆವಾರು ಮ್ಯಾಪಿಂಗ್ ಮಾಡಲು ಇಸಿಗೆ ಡಿಕೆ ಶಿವಕುಮಾರ್ ಮನವಿ

“ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್  ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. “ಮತದಾರರ ಪಟ್ಟಿಯಲ್ಲಿ ಒಂದೇ

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಸ್ಪಷ್ಟ ಬಿಂಬಗಳು: ಕೆವಿ ಪ್ರಭಾಕರ್‌

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆವಿ ಪ್ರಭಾಕರ್  ಹೇಳಿದರು. ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಸ ವಿಲೇವಾರಿ ವಿರೋಧಿಗಳ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ, ಶಾಸಕರೇ ಇಟ್ಟುಕೊಳ್ಳಲಿ: ಡಿಕೆ ಶಿವಕುಮಾರ್

“ಬಿಜೆಪಿ ನಾಯಕರು ಕಸ ವಿಲೇವಾರಿ ಮಾಡಲು ಬಿಡುವುದು ಬೇಡ‌. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ?” ಎಂದು ಡಿಸಿಎಂ

ಮಾರ್ಚ್​​ 23ರೊಳಗೆ ಶಕ್ತಿ ಯೋಜನೆ ಬಾಕಿ ವಿವರ ನೀಡಲು ಹೈಕೋರ್ಟ್ ತಾಕೀತು

ಶಕ್ತಿ ಯೋಜನೆಯಡಿ ಸರ್ಕಾರ ಎಷ್ಟು ಹಣ ಬಾಕಿ ಉಳಿಸಿಕೊಂಡಿದೆ, ಸಾರಿಗೆ ನಿಗಮಗಳಿಗೆ ನೀಡಬೇಕಾದ ಬಾಕಿಯ ವಿವರ ಮಾರ್ಚ್​​ 23ರೊಳಗೆ ನೀಡುವಂತೆ ಸೂಚಿಸಿ  ಹೈಕೋರ್ಟ್‌ ರಾಜ್ಯ ಸಾರಿಗೆ ನಿಗಮಕ್ಕೆ  ತಾಕೀತು ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ

ಸಿದ್ದರಾಮಯ್ಯ ಪಾಪರ್‌ ಸಿಎಂ ಆಗಿದ್ರೂ ಶಾಸಕರ ಫಾರಿನ್‌ ಟೂರ್‌: ಆರ್‌ ಅಶೋಕ

ಕಾಂಗ್ರೆಸ್‌ ಸರ್ಕಾರ ಹಣವಿಲ್ಲದೆ ಪಾಪರ್‌ ಆಗಿದೆ. ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಶಾಸಕರು ಫಾರಿನ್‌ ಟೂರ್‌ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ಹೊರಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್‌ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಸಲಹಲು