Wednesday, November 11, 2026
Menu

ಬರ ನಿರ್ವಹಣೆ: ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಾಲನೆ

ರಾಜ್ಯದಲ್ಲಿ ಮಳೆ ಕೊರತೆ ಕಾಡುತ್ತಿದ್ದು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮೋಡ ಬಿತ್ತನೆ ಯೋಜನೆಗೆ ಶುಕ್ರವಾರ ಅಧಿಕೃತ ಚಾಲನೆ ನೀಡಿದೆ. ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ಕಾರ್ಯಾಚರಣೆಗೆ ಚಾಲನೆ ನೀಡಿದರು. ಮೋಡ ಬಿತ್ತನೆಗೆಂದು ಸಿದ್ಧಪಡಿಸಲಾದ ಲಘು ವಿಮಾನಕ್ಕೆ ರಾಷ್ಟ್ರಧ್ವಜ ಮತ್ತು ನಾಡಧ್ವಜ ಪ್ರದರ್ಶಿಸುವ ಮೂಲಕ ಸಚಿವರು ಮೋಡ ಬಿತ್ತನೆಗೆ ಚಾಲನೆಯಿತ್ತರು. ಈಗ ಮೋಡ ಬಿತ್ತನೆಗೆ ಹವಾಮಾನ ಸೂಕ್ತವಾಗಿಲ್ಲ,

ಗೌರಿ-ಗಣೇಶ ಹಬ್ಬ: ಕೆಎಸ್ಸಾರ್ಟಿಸಿಯಿಂದ 2,400 ಹೆಚ್ಚುವರಿ ಬಸ್‌

ಗೌರಿ-ಗಣೇಶ ಹಬ್ಬಕ್ಕಾಗಿ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಒಟ್ಟು 2,400 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲು ನಿರ್ಧರಿಸಿದೆ. ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. ಸೆಪ್ಟೆಂಬರ್ 14ರಂದು ವಿವಿಧ

ಉದ್ಯಾನಗಳ ಶೇ 5 ಭೂ ಬಳಕೆ ಮಸೂದೆ ವಾಪಸ್‌, ಬಿಜೆಪಿ ಹೋರಾಟಕ್ಕೆ ಮತ್ತೊಂದು ಜಯವೆಂದ ಆರ್‌ ಅಶೋಕ

ಕಾಂಗ್ರೆಸ್‌ ಸರ್ಕಾರ ಉದ್ಯಾನಗಳಲ್ಲಿ ಶೇ 5  ಭೂಮಿಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿರುವುದು ಬಿಜೆಪಿಯ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಮುಂದೆಯೂ ಉದ್ಯಾನಗಳನ್ನು ಬಳಸುವುದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಸಿಎಂಗಳಿಗೆ ಆಹ್ವಾನ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮೈಸೂರು ದಸರಾ ಆಚರಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,  ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಸಿಎಂಗಳಿಗೆ ಆಹ್ವಾನ ನೀಡಲು ತೀರ್ಮಾನಿಸಲಾಗಿದೆ. ರಾಜ್ಯಗಳ ಕಲಾತಂಡಗಳ ಪ್ರದರ್ಶನ ನೀಡಲು ಆಹ್ವಾನಕ್ಕೆ ನಿರ್ಧರಿಸಿದ್ದು, ಏರ್ ಷೋ ನಡೆಸುವ

29,679 ಕೋಟಿ ರೂ. ಹೂಡಿಕೆಯ ಯೋಜನೆಗಳಿಗೆ ಉನ್ನತ ಮಟ್ಟದ ಸಮಿತಿ ಅಸ್ತು

ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಒಟ್ಟು 29,679 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ 9 ಹೊಸ ಮತ್ತು ಹೆಚ್ಚುವರಿ ಹೂಡಿಕೆಯ 8 ಯೋಜನಾ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯು ಹಸಿರು ನಿಶಾನೆ ತೋರಿಸಿದೆ. ಈ

ಕೆಆರ್‌ಐಡಿಎಲ್‌ ಲಂಚ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ

ಕೆಆರ್‌ಐಡಿಎಲ್‌ನಲ್ಲಿ 7% ಲಂಚ ಪಡೆಯುತ್ತಿರುವ ಇಬ್ಬರು ಸಚಿವರನ್ನು ಕೂಡಲೇ ವಜಾ ಮಾಡಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಪ್ರತಿಪಕ್ಷ ನಾಯಕ ಆರ್‌ಅಶೋಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರಾದರೂ ಲಂಚ ಪಡೆದರೆ ನನಗೆ ಕರೆ ಮಾಡಿ ಎಂದು

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಶಿವಕುಮಾರ್

ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ, ಹೋರಾಟಗಾರನಾಗಿ ಬದುಕುತ್ತಿದ್ದು, ಹೋರಾಟಗಾರನಾಗಿಯೇ ಸಾಯುತ್ತಾರೆ. ಇಂತಹ ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಅವರು ಇಂತಹ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಬೇರೆಯವರಂತೆ ರಾಹುಲ್ ಗಾಂಧಿ ಅವರು ಮುಚ್ಚಳಿಕೆ ಬರೆದುಕೊಡಲ್ಲ, ಕ್ಷಮೆ ಕೇಳಲ್ಲ ಎಂದು ಸಿಎಂ ಡಿಕೆ

ಖರ್ಗೆ ಭಾಷಣ ಸ್ಥಳ ಶುದ್ಧೀಕರಣ ಪ್ರಶ್ನಿಸಿದ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌: ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ರಾಹುಲ್ ಗಾಂಧಿಯವರು ಯಾವ ತಪ್ಪು ಮಾಡದಿದ್ದರೂ ಅವರ ಮೇಲೆ ಕೇಸು ದಾಖಲು ಮಾಡಲಾಗಿದೆ. ಇದು ಘನ ಘೋರ ಅನ್ಯಾಯ. ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡಲಾಗಿದೆ.‌ ಇದನ್ನು ಪ್ರಶ್ನೆ ಮಾಡಿದ್ದೇ ಅಪರಾಧ ಎಂಬಂತೆ ರಾಹುಲ್

ಪಿಜಿಗಳಲ್ಲೂ ಆಹಾರ ಸುರಕ್ಷತಾ ನಿಯಮಗಳ ಪಾಲನೆ ತಪಾಸಣೆ

ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ವಿರುದ್ಧ ಕ್ರಮ ತೀವ್ರಗೊಳಿಸಿರುವ ರಾಜ್ಯ ಸರ್ಕಾರ ಪಿಜಿಗಳಲ್ಲೂ ತಪಾಸಣೆ ನಡೆಸಲು ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಪೇಯಿಂಗ್‌ ಗೆಸ್ಟ್‌ ಕೇಂದ್ರಗಳಲ್ಲಿ ಆಹಾರ ಗುಣಮಟ್ಟ ಮತ್ತು ಸುರಕ್ಷತಾ ನಿಯಮಗಳ ಪಾಲನೆ ಪರಿಶೀಲಿಸುವಂತೆ ಆರೋಗ್ಯ ಸಚಿವ

ಸಮಾಜಕ್ಕೆ ಮಹಿಳಾ ಉದ್ಯಮಿಗಳು ಮಾದರಿ: ಸಿಎಂ‌ ಡಿಕೆ ಶಿವಕುಮಾರ್ 

ರಾಮಾಯಣದಲ್ಲಿ ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು. ಆಕೆಯ ತ್ಯಾಗ, ಹೋರಾಟಗಳು ಮಾದರಿಯಾಗಿದೆ. ಮಹಿಳೆಯರು ಸೃಷ್ಟಿಕರ್ತರು. ಸವಾಲುಗಳನ್ನು ಮೆಟ್ಟಿ ಉದ್ದಿಮೆ ಕಟ್ಟಿರುವ ನೀವೂ ಮಾದರಿ ಎಂದು ಸಿಎಂ ಡಿಕೆ ಶಿವಕುಮಾರ್  ಬಣ್ಣಿಸಿದರು. ಎಫ್ ಕೆ ಸಿಸಿಐನ ಸಭಾಂಗಣದಲ್ಲಿ ಬುಧವಾರ ನಡೆದ ಉಬುಂಟು