ರಾಜ್ಯ
ತೆಲಂಗಾಣ ಸರ್ಕಾರದ ಜೊತೆ ಸುಮಧುರ ಗ್ರೂಪ್ 600 ಕೋಟಿ ರೂ. ಒಪ್ಪಂದ
ತೆಲಂಗಾಣ: ದಕ್ಷಿಣ ಭಾರತದ ಅತ್ಯಂತ ಪ್ರಮುಖ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾಗಿರುವ ಸುಮಧುರ ಗ್ರೂಪ್ ಸಂಸ್ಥೆಯು ಭಾರತ ಫ್ಯೂಚರ್ ಸಿಟಿಯಲ್ಲಿ ನಡೆದ ‘ತೆಲಂಗಾಣ ರೈಸಿಂಗ್ ಗ್ಲೋಬಲ್ ಸಮಿಟ್ 2025’ ಶೃಂಗಸಭೆಯಲ್ಲಿ 100 ಎಕರೆ ವಿಸ್ತೀರ್ಣದ ಇಂಡಸ್ಟ್ರಿಯಲ್ ಮತ್ತು ವೇರ್‌ಹೌಸಿಂಗ್ ಪಾರ್ಕ್ ಅಭಿವೃದ್ಧಿಗೆ ತೆಲಂಗಾಣ ಸರ್ಕಾರದ ಜೊತೆಗೆ ₹600 ಕೋಟಿ ಹೂಡಿಕೆ ಮಾಡುವ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಿದೆ. ಉತ್ಪಾದನೆ, ಮೂಲಸೌಕರ್ಯ, ಲಾಜಿಸ್ಟಿಕ್ಸ್ ಮತ್ತು ಅತ್ಯಾಧುನಿಕ ಕೈಗಾರಿಕಾ ಕ್ಷೇತ್ರಗಳಲ್ಲಿ ದೊಡ್ಡ ಹೂಡಿಕೆ
ನಮ್ಮ ಜಾಗದಲ್ಲಿ ಸರ್ಕಾರದಿಂದ ಮಾಲ್ ನಿರ್ಮಾಣ ಸರಿಯಲ್ಲ ಎಂದ ಪ್ರಮೋದಾ ದೇವಿ ಒಡೆಯರ್
ಮೈಸೂರಿನಲ್ಲಿ ಸರ್ಕಾರ ಯೂನಿಟಿ ಮಾಲ್ ನಿರ್ಮಾಣ ಮಾಡುವುದಕ್ಕೆ ನನ್ನ ವಿರೋಧ ಇಲ್ಲ, ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ನ್ಯಾಯಾಲಯದಲ್ಲಿ ಇದೇ ವಿಚಾರವಾಗಿ ಪ್ರಕರಣ ದಾಖಲಾಗಿದೆ ಎಂದು ಪ್ರಮೋದಾ ದೇವಿ ಒಡೆಯರ್ ಹೇಳಿದ್ದಾರೆ. ಮೈಸೂರು ಕಸಬಾ ಹೋಬಳಿಯ ಸ. ನಂ.1
ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್ ಹೇಳಿದ್ರೆ ಮಾತ್ರ ಬದಲಾವಣೆ: ಗಣಿಗ ರವಿಕುಮಾರ್
ಒಂದೆಡೆ ಊಟಕ್ಕೆ ಸೇರಿದ ತಕ್ಷಣ ನಾಯಕತ್ವ ಬದಲಾವಣೆಗೆ ಅಂದ್ರೆ ಹೇಗೆ. ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್ ಹೇಳಿದ್ರೆ ಮಾತ್ರ ಬದಲಾವಣೆ ಎಂದು ಮಂಡ್ಯದಲ್ಲಿ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಜ್ಯ ನಾಯಕತ್ವ ಬದಲಾವಣೆ ವಿಚಾರದಲ್ಲಿ
ಮುಡಾ ಹಗರಣ: 22.47 ಕೋಟಿ ರೂ. ಲಂಚ ಪಡೆ ಮಾಜಿ ಆಯುಕ್ತ ದಿನೇಶ್ ಕುಮಾರ್: ತನಿಖೆಯಲ್ಲಿ ಬಹಿರಂಗ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದು, 22.47 ಕೋಟಿ ರೂ. ಲಂಚ ಪಡೆದಿರುವ ವಿಚಾರ ಇಡಿ ತನಿಖೆಯಲ್ಲಿ ಹೊರ ಬಿದ್ದಿದೆ. 2002
ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲಾಗದು: ಡಿಕೆ ಶಿವಕುಮಾರ್
“ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ , ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು
ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು
ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್
ಇನ್ಮುಂದೆ ಗ್ರಾಮಗಳಲ್ಲಿ ಮನೆಗಳಿಗೆ ನೀರು, ವಿದ್ಯುತ್ ಪಡೆಯಲು ಒಸಿ ಸಿಸಿ ರಗಳೆ ಇಲ್ಲ
ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಒಸಿ ಇಲ್ಲದ
ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ತಡೆ ಜಿಬಿಎ ಮಸೂದೆ ಮಂಡನೆ
ಬೆಳಗಾವಿ: ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಹಾಗೂ ಜಿಬಿಎ ಎರಡನೇ ತಿದ್ದುಪಡಿ ಮಸೂದೆಗಳನ್ನು ವಿಧಾನಸಭೆಯಲ್ಲಿ ಗುರುವಾರ ಮಂಡನೆ ಮಾಡಲಾಗಿದೆ. ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಂತವರಿಗೆ 1 ಲಕ್ಷ ರೂ. ದಂಡ ಹಾಗೂ 3 ವರ್ಷದವರೆಗಿನ
ಪೊಲೀಸ್, ಅರಣ್ಯ ಇಲಾಖೆ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲು: ಸಿಎಂ
ಬೆಳಗಾವಿ: ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ಸರ್ಕಾರದ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡುವ ಮೂಲಕ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗುರುವಾರ ಮೇಲ್ಮನೆಯಲ್ಲಿ
ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು




