Thursday, October 01, 2026
Menu

ಪ್ರಕರಣದ ವಿಚಾರಣೆ ಬೇರೆ ಕೋರ್ಟ್‌ಗೆ ವರ್ಗಾಯಿಸಿ: ಪ್ರಜ್ವಲ್‌ ರೇವಣ್ಣ ಮನವಿ ವಜಾಗೊಳಿಸಿದ ಸುಪ್ರೀಂ

ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರಣೆಯನ್ನು ಬೇರೆ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ನಿಂದ ಬೇರೆ ಕೋರ್ಟ್‌ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ಸಿಜೆಐ ಪೀಠ ತಿರಸ್ಕರಿಸಿದೆ. ಸಿಜೆಐ ಸೂರ್ಯಕಾಂತ್ ನೇತೃತ್ವದ

ಉಡುಪಿ: 10 ಮಂದಿ ಅಕ್ರಮ ಬಾಂಗ್ಲಾ ವಲಸಿಗರಿಗೆ 2 ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ

ಕಳೆದ ವರ್ಷ ಉಡುಪಿಯಲ್ಲಿ ಸಿಕ್ಕಿಬಿದ್ದಿದ್ದ 10 ಮಂದಿ ಅಕ್ರಮ ಬಾಂಗ್ಲಾದೇಶದ ವಲಸಿಗರಿಗೆ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಕಳೆದ ವರ್ಷ ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಸ್‌ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ

ಭೂ ವಿವಾದ: ಕಾನೂನು ಸಚಿವ ಹೆಚ್‌ಕೆ ಪಾಟೀಲ್‌ ಕುಟುಂಬದ ವಿರುದ್ಧ ಸುಪ್ರೀಂನಲ್ಲಿ ಅಕ್ಕ ತಂಗಿಗೆ ಗೆಲುವು

ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್‌ಕೆ ಪಾಟೀಲ್ ವಿರುದ್ಧ ಹುಬ್ಬಳ್ಳಿಯ ಅಕ್ಕ-ತಂಗಿ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದೆಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ತೀರ್ಪಿನ ಮೂಲಕ ಸರ್ವೋಚ್ಚ ನ್ಯಾಯಾಲಯ ಅಚ್ಚರಿಯುಂಟು ಮಾಡಿದೆ. ತಮಗೆ ಸೇರಿರುವ ಹುಬ್ಬಳ್ಳಿ ನಗರದ ಪಿಂಟೋ

ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋಟಿ ರೂ. ಕಾಮಗಾರಿ ಪ್ರಗತಿ: ಡಿಕೆ ಶಿವಕುಮಾರ್‌

“ಚಿಕ್ಕನಾಯಕನಹಳ್ಳಿ ತಾಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ , ವಿಜೆಎನ್‌ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳಿದ್ದು,  2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲೂಕಿನಲ್ಲಿ ನಡೆಯುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್‌ ಸ್ಪಷ್ಟಪಡಿಸಿದೆ: ಯತೀಂದ್ರ

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಒಂದು ಮಟ್ಟಿಗೆ ತಣ್ಣಗಾಗಿದ್ದರೂ ಸಿಎಂ ಸಿದ್ದರಾಮಯ್ಯ ಅವರ ಮಗ, ವಿಧಾನಪರಿಷತ್‌ ಸದಸ್ಯ ಯತೀಂದ್ರ ಅವರು ಬೂದಿ ಮುಚ್ಚಿರುವ ಕೆಂಡಕ್ಕೆ ಗಾಳಿ ಹಾಕಿ ಉರಿಸುವ ಕೆಲಸ ಮುಂದುವರಿಸಿದ್ದಾರೆ. ಬೆಳಗಾವಿಯಲ್ಲಿ ಅವರು  ಮುಖ್ಯಮಂತ್ರಿ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆ

ಗಾಂಧಾರಿ ವಿದ್ಯೆ ಚಮತ್ಕಾರ: ಬಳ್ಳಾರಿಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ಸ್ಪರ್ಶ, ವಾಸನೆ ಹಾಗೂ ಶಬ್ದದಿಂದಲೇ ವ್ಯಕ್ತಿ ಹಾಗೂ ವಸ್ತುಗಳನ್ನು ಗುರುತಿಸುವ ಪ್ರಾಚೀನ ಕಲೆ “ಗಾಂಧಾರಿ” ವಿದ್ಯೆಯನ್ನು ಕರಗತ ಮಾಡಿಕೊಂಡಿರುವ ಬಳ್ಳಾರಿ ತಾಲೂಕಿನ ಕೊರ್ಲಗುಂದಿ ಗ್ರಾಮದ ವಿದ್ಯಾರ್ಥಿನಿ ಹಿಮಾಬಿಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 8ನೇ ತರಗತಿಯ ಪರೀಕ್ಷೆ ಬರೆಯುವ ಮೂಲಕ ತಮ್ಮ ಸೇಹಿತರು,

ಸಿಎಂ ಬದಲಾವಣೆ: ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ ಅಂದ್ರು ಡಿಸಿಎಂ

ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಐದು ವರ್ಷ

ರಾಯಚೂರಿನಲ್ಲಿ ಎಸ್‌ಡಿಎಂಸಿ ಅಧ್ಯಕ್ಷನ ವೈಯಕ್ತಿಕ ಸಾಲ: ಬ್ಯಾಂಕ್‌ನಿಂದ ಮಕ್ಕಳ ಬಿಸಿಯೂಟಕ್ಕೆ ಕತ್ತರಿ

ಎಸ್‌ಡಿಎಂಸಿ ಅಧ್ಯಕ್ಷನ ವೈಯಕ್ತಿಕ ಸಾಲ ತೀರಿಸದ ಕಾರಣ ರಾಯಚೂರು ತಾಲೂಕಿನ ಕೂಡ್ಲೂರು ಗ್ರಾಮದ ಪ್ರಾಥಮಿಕ ಶಾಲೆಯ ಮಕ್ಕಳ ಬಿಸಿಯೂಟವನ್ನು ಬ್ಯಾಂಕ್‌ ಕಸಿದುಕೊಂಡಿದೆ. ಯಾವುದೋ ವ್ಯಕ್ತಿ ಪಡೆದ ಸಾಲಕ್ಕೆ ಬ್ಯಾಂಕ್‌ ಶಾಲಾ ಮಕ್ಕಳ ಬಿಸಿಯೂಟಕ್ಕೆ ತೊಂದರೆ ನೀಡುತ್ತಿದೆ. ಬ್ಯಾಂಕ್ ಅಧಿಕಾರಿಗಳ ಕಾರ್ಯವೈಖರಿಯಿಂದ 255

ಆರ್‌ಟಿಒ ಕಚೇರಿಗಳಲ್ಲಿ ಬ್ರೋಕರ್‌ಗಳು: ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯಿತ್ತ ಸಚಿವರು

ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದಲ್ಲಿ ಕಚೇರಿಯ ಅಧಿಕಾರಿಗಳ ಹೊಣೆ ಹೊರಬೇಕು, ಕಠಿಣ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರು

ವಾಕ್‌ ಸ್ವಾತಂತ್ರ್ಯ ಕಿತ್ತುಕೊಳ್ಳಲು ರಾಜ್ಯ ಸರ್ಕಾರದಿಂದ ಮಸೂದೆ: ಆರ್‌ ಅಶೋಕ ಕಿಡಿ

ವಾಕ್‌ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲೆಂದೇ ರಾಜ್ಯ ಸರ್ಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ(ಪ್ರತಿಬಂಧಕ) ಮಸೂದೆ-2025 ತಂದಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮಸೂದೆ ರಾಜ್ಯ