ರಾಜ್ಯ
ಸುರಂಗ ಟೆಂಡರ್ ರದ್ದು ಕೋರಿ ನಟ ಪ್ರಕಾಶ್ ಬೆಳವಾಡಿ ಹೈಕೋರ್ಟ್ ಮೊರೆ: ತೇಜಸ್ವಿ ಸೂರ್ಯ ವಕಾಲತ್ತು!!
ಗ್ರೇಟರ್ ಬೆಂಗಳೂರು ಯೋಜನೆಯಡಿ ಹೆಬ್ಬಾಳದಿಂದ ಸಿಲ್ಕ್ಬೋರ್ಡ್ವರೆಗೂ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ಟೆಂಡರ್ ರದ್ದುಗೊಳಿಸುವಂತೆ ಕೋರಿ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಬೆಳವಾಡಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ)ಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ, ಉದ್ದೇಶಿತ ಯೋಜನೆಗಾಗಿ ಯಾವುದೇ ಮರಗಳನ್ನು ಕಡಿಯವುದಕ್ಕೆ ಅವಕಾಶ ಇರುವುದಿಲ್ಲ ಎಂದು ನ್ಯಾಯಪೀಠ
ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾಗೆ 25.30 ಕೋಟಿ ರೂ. ದಂಡ!
ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್ 25.30 ಕೋಟಿ ರೂ. ದಂಡ ವಿಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಚ್ಚಾ ಗ್ರಾಮದಲ್ಲಿ 2014ರ ಜು.19 ರಿಂದ 2019ರ
ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ದ.ಭಾರತ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ
ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಇದು ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ.
ಎನ್‌ಒಸಿಗಳ ನೀಡಿಕೆ ಕಾಲಮಿತಿ ಕಡಿಮೆ ಮಾಡಬೇಕು: ಹೂಡಿಕೆ ಆಕರ್ಷಣೆ ಸಭೆಯಲ್ಲಿ ಸಿಎಂ ಸೂಚನೆ
ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ
ಕೆಎಸ್ಡಿಎಲ್‌ನಿಂದ ಸರಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ
ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಡ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಸ್ಥೆಯ
ಅರಕಲಗೂಡಿನಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಸಾವು
ಕಳೆದೊಂದು ವಾರದಿಂದ ಹಾಸನದಲ್ಲಿ ಮಳೆ ಸುರಿಯುತ್ತಿದ್ದು, ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ ಈ ದುರಂತ ನಡೆದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ
ಆಳಂದದಲ್ಲಿ ಮತ ಕಳವು ಹೇಗಾಯ್ತು: ಎಸ್‌ಐಟಿ ತನಿಖೆಯಲ್ಲಿ ಬಯಲಾಯ್ತು
ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಪ್ರಕರಣದ ಎಸ್ಐಟಿ ತನಿಖೆ ಚುರುಕುಗೊಂಡಿದ್ದು, ಹಲವು ಮಹತ್ವದ ವಿಚಾರಗಳು ಬಯಲಾಗಿವೆ. ಮತದಾರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು 6,018 ನಕಲಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಹೆಸರು ಕೈ ಬಿಡಲು ಸಲ್ಲಿಕೆಯಾದ ಒಂದು ಅರ್ಜಿ ಸಂಬಂಧ ಡೇಟಾ
ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವಿಲ್ಲ: ಆರ್. ಅಶೋಕ ಕಿಡಿ
ಆಶಾ ಕಾರ್ಯಕರ್ತೆಯರ ಗೌರವಧನ ₹8,000ಕ್ಕೆ ಹೆಚ್ಚಳ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಬೊಗಳೆ ಬಿಟ್ಟು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, ಗೌರವಧನ ಹೆಚ್ಚಿಸುವುದಿರಲಿ, ಕಳೆದ ಮೂರು ತಿಂಗಳಿಂದ ಕೊಡಬೇಕಾದ ಗೌರವಧನವನ್ನೂ ಕೊಟ್ಟಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಿಡಿ ಕಾರಿದ್ದಾರೆ.
ಆನೇಕಲ್ ಭಾಗ ಭವಿಷ್ಯದಲ್ಲಿ ಜಿಬಿಎ ವ್ಯಾಪ್ತಿಗೆ: ಡಿಕೆ ಶಿವಕುಮಾರ್
“ಆನೇಕಲ್ ಭಾಗ ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ. ಈಗಾಗಲೇ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರ ಪ್ರದಕ್ಷಿಣೆ ಅಂಗವಾಗಿ ಗುರುವಾರ ಆನೇಕಲ್




