ರಾಜ್ಯ
ಸಿಎನ್ ಆರ್ ರಾವ್ ದೇಶ ಕಂಡ ಅಪರೂಪದ ವಿಜ್ಞಾನಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗದಗ: ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ವತಿಯಿಂದ ಆಯೋಜಿಸಲಾಗಿದ್ದ ಭಾರತ ರತ್ನ ಪ್ರೋ ಸಿ ಎನ್ ಆರ್ ರಾವ್ 10 ನೇ ವರ್ಷದ ವಿಜ್ಞಾನ ವಿಸ್ಕೃತ ಕಾರ್ಯಕ್ರಮ-2025 ಹಾಗೂ ಬಿ ಎಸ್ ಪಾಟೀಲ ಇವರಿಗೆ 2025 ನೇ ಸಾಲಿನ ಪ್ರತಿಷ್ಠಿತ ಚಂದನ ಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೌಢ್ಯ ಹಾಗೂ ಕಂದಾಚಾರಗಳನ್ನು
ಅಳಂದದಲ್ಲಿ ಮತಗಳ್ಳತನ: ಮಾಜಿ ಶಾಸಕ ಸುಭಾಷ್ ಗುತ್ತೆದಾರ್, ಪುತ್ರ ಸೇರಿ 7 ಜನರ ವಿರುದ್ಧ ಚಾರ್ಜ್ ಶೀಟ್
ಬೆಂಗಳೂರು: 2023ರ ಚುನಾವಣೆ ವೇಳೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ, ಅವರ ಮಗ ಮತ್ತು ಆಪ್ತ ಸಹಾಯಕ ಸೇರಿದಂತೆ 7 ಮಂದಿಯ ವಿರುದ್ಧ ಎಸ್ ಐಟಿ ಚಾರ್ಜ್ ಶೀಟ್ ಸಲ್ಲಿಸಿದೆ. ವಿಶೇಷ ತನಿಖಾ
ಡಿಸೆಂಬರ್ 17-18: ಕೆಪಿಎಸ್‍ಸಿಯಿಂದ ಗ್ರೂಪ್-ಬಿ ಹುದ್ದೆಗಳ ಮೂಲ ದಾಖಲೆ ಪರಿಶೀಲನೆ
ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿಸಲಾಗಿದ್ದ ವಿವಿಧ ಇಲಾಖೆಗಳ ಗ್ರೂಪ್-ಬಿ ಹುದ್ದೆಗಳಿಗೆ ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಲು ಉದ್ದೇಶಿಸಲಾಗಿದ್ದ ದಾಖಲೆಗಳ ಪರಿಶೀಲನೆಯನ್ನು 2025 ನೇ ಡಿಸೆಂಬರ್ 17 ರಿಂದ 23 ರವರೆಗೆ ಬೆಂಗಳೂರಿನ ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಕೇಂದ್ರ
ಪಾಲಿಕೆಗಳಿಗೆ ತಲಾ 200 ಕೋಟಿ ರೂ. ನೀಡಲು ಸರ್ಕಾರದಿಂದ ಐತಿಹಾಸಿಕ ನಿರ್ಧಾರ: ಸಚಿವ ಬೈರತಿ ಸುರೇಶ್
ವಿಧಾನಸಭೆ: ರಾಜ್ಯದಲ್ಲಿರುವ 12 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂಪಾಯಿಯಂತೆ ಒಟ್ಟು 2400 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್
ಮೈಸೂರು ಮೃಗಾಲಯದಲ್ಲಿ 25ನೇ ಹುಟ್ಟುಹಬ್ಬ ಆಚರಿಸಿಕೊಂಡ `ಯುವರಾಜ’!
ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲೇ ಹುಟ್ಟಿ ಬೆಳೆದ ಯುವರಾಜ ಹೆಸರಿನ ಜಿರಾಫೆಯ 25ನೇ ವರ್ಷದ ಹುಟ್ಟುಹಬ್ಬವನ್ನು ಗುರುವಾರ ಅಧಿಕಾರಿಗಳು ಮತ್ತು ಸಿಬ್ಬಂದಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಯುವರಾಜನಿಗೆ ಇಷ್ಟವಾದ ಹುಲ್ಲು, ವಿವಿಧ ಕಾಳು ಹಾಗೂ ಹಣ್ಣುಗಳಿಂದ ಸಿಬ್ಬಂದಿ ವಿಶೇಷ ಕೇಕ್ ತಯಾರಿಸಿದ್ದರು. ಮೃಗಾಲಯದ
14.21 ಲಕ್ಷ ರೈತರ ಖಾತೆಗೆ 2,249 ಕೋಟಿ ರೂ. ಪರಿಹಾರ ಜಮೆ: ಸಚಿವ ಕೃಷ್ಣಬೈರೇಗೌಡ
ಬೆಳಗಾವಿ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14.21 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ನ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯರಾದ
ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಗುರುವಾರ ಶಿವಕುಮಾರ್ ಬಣದ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿ, ಪ್ರೀತಿ ವಿಶ್ವಾಸಕ್ಕಾಗಿ
ಮಾಜಿ ಸಚಿವ ಎಚ್.ಎಂ. ರೇವಣ್ಣ ಪುತ್ರ ಕಾರು ಡಿಕ್ಕಿ: ಬೈಕ್ ಸವಾರ ಸಾವು
ಮಾಜಿ ಸಚಿವ ಹೆಚ್ ಎಂ ರೇವಣ್ಣ ಅವರ ಪುತ್ರ ಹಾಗೂ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಶಾಂಕ್ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾಬರನಹಳ್ಳಿ ಬಳಿ ಗುರುವಾರ ಸಂಜೆ
ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನ ಪರಿಷತ್ನಲ್ಲಿ ಶುಕ್ರವಾರ
ಹಾವೇರಿ ಜಿಲ್ಲೆಯ ಕೆಡಿಎಂ ಕಿಂಗ್ ಹೋರಿ ಸಾವು
ಕೆಡಿಎಂ ಕಿಂಗ್ ಎಂದು ಹೆಸರಾಗಿದ್ದ ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೋರಿಯು ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿದೆ. ಗ್ರಾಮಕ್ಕೆ ಆಗಮಿಸಿದ ಅಭಿಮಾನಿಗಳು ಹಾಗೂ ಊರಿನವರು ಈ ಹೋರಿಯ ಸಾವಿನಿಂದ ಶೋಕ ತಪ್ತರಾಗಿದ್ದಾರೆ. ಸೋಲೆ ಇಲ್ಲದ ಸರದಾರ ಎಂದು




