ರಾಜ್ಯ
ಮಂಡ್ಯದ ಶಿವನಸಮುದ್ರ ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ!
ಮಂಡ್ಯದ ಶಿವನ ಸಮುದ್ರದ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ 3 ಗಂಟೆಗಳ ಕಾರ್ಯಾಚರಣೆ ನಂತರ ರಕ್ಷಿಸಿದ್ದಾರೆ. ಶಿವನಸಮುದ್ರದ ನಾಲೆಗೆ ಬಿದ್ದಿದ್ದ ಕಾಡಾನೆ ಹೊರಗೆ ಬರಲು ಆಗದೇ ಕಳೆದೆರಡು ದಿನಗಳಿಂದ ಬಳಲುತ್ತಿತ್ತು. ಎರಡು ದಿನಗಳಿಂದ ಆಹಾರ ಇಲ್ಲದೇ ಹಾಗೂ ಸೊಂಡಿಲಿಗೆ ಸೋಂಕು ತಗುಲಿದ್ದರಿಂದ ಆನೆ ಪರದಾಟ ನೋಡಲು ಆಗುತ್ತಿರಲಿಲ್ಲ. ನಾಲೆಯಲ್ಲಿ ಆನೆ ಸಿಲುಕಿರುವ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸತತ ಮೂರು ಗಂಟಗಳ ಕಾರ್ಯಾಚರಣೆ
ಬಳ್ಳಾರಿಯ 36 ಜೀನ್ಸ್ ಘಟಕಗಳಿಗೆ ಬೀಗ ಜಡಿದ ಜಿಲ್ಲಾಡಳಿತ!
ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿ ಆಗುತ್ತದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಬಳ್ಳಾರಿಯ 36 ಘಟಕಗಳಿಗೆ ಬೀಗ ಜಡಿಯಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಬಳ್ಳಾರಿ
ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು: ಡಿಕೆ ಶಿವಕುಮಾರ್
“ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ನಲ್ಲಿ ಬೆಂಗಳೂರು ಟೆಕ್ ಸಮಿಟ್ 2025 ‘ಫ್ಯೂಚರೈಸ್ ‘ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ
ಸಂಪನ್ಮೂಲ ಸಂರಕ್ಷಣೆಗೆ ಪುನರ್ ಬಳಕೆಗೆ ಒತ್ತು ಅಗತ್ಯ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು8: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ನಗರದ ಖಾಸಗಿ ಹೊಟೆಲ್ ನಲ್ಲಿಂದು ನಡೆದ ಕರ್ನಾಟಕ
ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆ: ಡಿಕೆ ಶಿವಕುಮಾರ್
“ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್
ಸಂಪುಟ ವಿಸ್ತರಣೆಯಾದರೆ ಡಿಕೆ ಶಿವಕುಮಾರ್ ದೇಗುಲಗಳಲ್ಲಿ ಪೂಜೆ ಮಾಡಿದ್ದು ವ್ಯರ್ಥ: ಆರ್ ಅಶೋಕ ವ್ಯಂಗ್ಯ
ಸಚಿವ ಸಂಪುಟ ವಿಸ್ತರಣೆಯಾದರೆ ಡಿಕೆ ಶಿವಕುಮಾರ್‌ಗೆ ಪಂಗನಾಮ ಸಿಗಲಿದೆ. ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಪ್ರಶ್ನಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಕರ್ನಾಟಕದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರದ ಪರಿಹಾರ ನೀಡಲು ಆಗ್ರಹಿಸಿ ಪಿಎಂಗೆ ಸಿಎಂ ಪತ್ರ
ಸಕ್ಕರೆಯ ಎಂಎಸ್‌ಪಿ ತಕ್ಷಣ ಪರಿಷ್ಕರಿಸುವ ಮೂಲಕ ನಮ್ಮ ರಾಜ್ಯದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಅತ್ಯಂತ ಪರಿಣಾಮಕಾರಿ ಪರಿಹಾರ ನೀಡಬೇಕಾಗಿದೆ. ಇದರಿಂದ ಕಾರ್ಖಾನೆಗಳಲ್ಲಿ ಹಣದ ಹರಿವು ತಕ್ಷಣ ಸುಧಾರಿಸಿ, ಕೇಂದ್ರ ಅಥವಾ ರಾಜ್ಯದ ಸಹಾಯಧನದ ಅವಶ್ಯಕತೆ ಇಲ್ಲದೆ ರೈತರಿಗೆ ಅಗತ್ಯ ಬೆಲೆ ಪಾವತಿಸಲು
ಮಲ್ಲಿಕಾರ್ಜುನ ಖರ್ಗೆ ಬಳಿ ರಾಜಕೀಯ ಚರ್ಚೆ ಮಾಡಿಲ್ಲ: ಡಿಕೆ ಶಿವಕುಮಾರ್
“ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಪಕ್ಷದ ನೂತನ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ
ಪ್ರವಾಹ ಪರಿಹಾರ, ನೀರಾವರಿ ಯೋಜನೆಗೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ
ಮೃಗಾಲಯದಲ್ಲಿ 31ಕ್ಕೇರಿದ ಕೃಷ್ಣಮೃಗಗಳ ಸಾವಿನ ಸಂಖ್ಯೆ: ಬನ್ನೇರುಘಟ್ಟ ತಜ್ಞರಿಂದ ಪರಿಶೀಲನೆ
ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಸೋಮವಾರ ಬೆಳಗಿನ ಜಾವ ಮತ್ತೊಂದು ಮೃತಪಟ್ಟಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿರು ಮೃಗಾಲಯದಲ್ಲಿ ಕಳೆದ ಒಂದು ವಾರದಿಂದ




