ರಾಜ್ಯ
ಮೈಸೂರು ಅಪಾರ್ಟ್ಮೆಂಟ್ನಲ್ಲಿ ತಾಯಿ, ಪತ್ನಿ, ಮಗನಿಗೆ ವಿಷವುಣಿಸಿ ಸಾಯಿಸಿ ವ್ಯಕ್ತಿ ಆತ್ಮಹತ್ಯೆ ಶಂಕೆ
ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾರೆ. ಕುಶಾಲ್ (15), ಚೇತನ್ (45), ರೂಪಾಲಿ (43), ಪ್ರಿಯಂವಧಾ (62)ಮೃತಪಟ್ಟವರು. ಚೇತನ್ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ ಸಾಯಿಸಿರುವ ಅನುಮಾನ ವ್ಯಕ್ತವಾಗಿದೆ. ಮೂವರಿಗೆ ವಿಷವುಣಿಸಿ ಸಾಯಿಸಿ ಬಳಿಕ ಚೇತನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ
ಫೋಟೋ ಶೂಟಿಂಗ್ ಮಾಡಿದರೆ ಸಮಸ್ಯೆಗಳು ಪರಿಹಾರ ಆಗಲ್ಲ: ಡಿಸಿಎಂಗೆ ಆರ್. ಅಶೋಕ್ ಟಾಂಗ್
ವೈಟ್ ಟಾಪಿಂಗ್ ಕಾಮಗಾರಿ ಹೆಸರಿನಲ್ಲಿ ಫೋಟೋ ಶೂಟಿಂಗ್ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರ ಆಗುತ್ತಾ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಾಲೆಳೆದಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನಿಮಗೆ ಬ್ರ್ಯಾಂಡ್ ಬೆಂಗಳೂರಿನ
ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್: ಡಿಸಿಎಂ
ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ ಎಂದು
ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಸಿದ್ಧರಾಗಿ: ಡಿಕೆ ಶಿವಕುಮಾರ್
ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸ ದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಬೆಂಗಳೂರು ನಗರ ಪಾಲಿಕೆ ಚುನಾವಣೆ ಯನ್ನು ನಡೆಸಬೇಕಾಗಿದ್ದು
ಮದ್ದೂರಿನಲ್ಲಿ ಆಸ್ತಿಗಾಗಿ ಅಣ್ಣನ ಕೊಲೆ ಮಾಡಿಸಿ ಕುಂಭ ಮೇಳಕ್ಕೆ ತೆರಳಿದ್ದಾತ ಅರೆಸ್ಟ್
ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದಲ್ಲಿ ಜಮೀನಿನಲ್ಲಿ ಫೆಬ್ರವರಿ 11 ರಂದು ರೈತ ಕೃಷ್ಣೇಗೌಡ (45) ಎಂಬ ಹತ್ಯೆ ನಡೆದಿತ್ತು, ತನಿಖೆ ಆರಂಭಿಸಿದ ಪೊಲೀಸರು ಆಸ್ತಿಗಾಗಿ ಮೃತ ಕೃಷ್ಣೇಗೌಡನ ಸಹೋದರನೇ ಸುಪಾರಿ ನೀಡಿ ಹತ್ಯೆ ಮಾಡಿಸಿರುವುದಾಗಿ ಖಚಿತಪಡಿಸಿದ್ದಾರೆ. ಮನೆಯಿಂದ ಜಮೀನನ ಬಳಿ ಎಮ್ಮೆಗಳನ್ನು
ಬುರ್ಖಾ ಹಾಕಿಕೊಂಡು ಹೋಗಿ ಗಲಾಟೆ ಮಾಡಿರುವ ವೀಡಿಯೊವಿದೆ ಎಂದ ಬಿಕೆ ಹರಿಪ್ರಸಾದ್
ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡಲು ಹೋಗುತ್ತಾರೆ, ಇದೇನು ಹೊಸದಲ್ಲ, ನನ್ನ ಬಳಿ ವೀಡಿಯೊ ಇದೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರೆಸ್ಸೆಸ್ಗೆ ನೂರು ವರ್ಷ ತುಂಬುತ್ತಿದೆ.
ಪಂಜಾಬ್ನಿಂದ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್ಲಿಫ್ಟ್
ಪಟಿಯಾಲ ಬಳಿ ಶುಕ್ರವಾರ ಕಾರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ
ಶಿವಮೊಗ್ಗ ಖಾಸಗಿ ಆಸ್ಪತೆಯಲ್ಲಿ ಬಾಣಂತಿ ಸಾವು
ರಾಜ್ಯದಲ್ಲಿ ಸರ್ಕಾರಿ ಖಾಸಗಿ ಎಂಬ ವ್ಯತ್ಯಾವಿಲ್ಲದೆ ಆಸ್ಪತ್ರೆಗಳಲ್ಲಿ ಬಾಣಂತಿಯ ಸಾವು ಪ್ರಕರಣಗಳು ವರದಿಯಾಗುತ್ತಿರುವುದು ಮುಂದುವರಿದಿದ್ದು, ಜನರಲ್ಲಿ ಆತಂಕವುಂಟಾಗಿದೆ. ಕಳೆದ 6 ದಿನಗಳ ಹಿಂದೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಾಳೂರು
ಮತ್ತೆ ಕಾಂಗ್ರೆಸ್ ಕೈ ಹಿಡಿದ ಎಲ್.ಆರ್ ಶಿವರಾಮೇಗೌಡ
ಮಾಜಿ ಸಂಸದ, ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಗೆ ಸೇರಿದರು. ಕೆಪಿಸಿಸಿ ಅಧ್ಯಕ್ಷ
ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ: ಬೊಮ್ಮಾಯಿ
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ