ರಾಜ್ಯ
ಕೆಎಸ್ಡಿಎಲ್‌ನಿಂದ ಸರಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ
ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಡ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ
ಅರಕಲಗೂಡಿನಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಸಾವು
ಕಳೆದೊಂದು ವಾರದಿಂದ ಹಾಸನದಲ್ಲಿ ಮಳೆ ಸುರಿಯುತ್ತಿದ್ದು, ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ ಈ ದುರಂತ ನಡೆದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ
ಆಳಂದದಲ್ಲಿ ಮತ ಕಳವು ಹೇಗಾಯ್ತು: ಎಸ್‌ಐಟಿ ತನಿಖೆಯಲ್ಲಿ ಬಯಲಾಯ್ತು
ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಪ್ರಕರಣದ ಎಸ್ಐಟಿ ತನಿಖೆ ಚುರುಕುಗೊಂಡಿದ್ದು, ಹಲವು ಮಹತ್ವದ ವಿಚಾರಗಳು ಬಯಲಾಗಿವೆ. ಮತದಾರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು 6,018 ನಕಲಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಹೆಸರು ಕೈ ಬಿಡಲು ಸಲ್ಲಿಕೆಯಾದ ಒಂದು ಅರ್ಜಿ ಸಂಬಂಧ ಡೇಟಾ
ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವಿಲ್ಲ: ಆರ್. ಅಶೋಕ ಕಿಡಿ
ಆಶಾ ಕಾರ್ಯಕರ್ತೆಯರ ಗೌರವಧನ ₹8,000ಕ್ಕೆ ಹೆಚ್ಚಳ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಬೊಗಳೆ ಬಿಟ್ಟು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, ಗೌರವಧನ ಹೆಚ್ಚಿಸುವುದಿರಲಿ, ಕಳೆದ ಮೂರು ತಿಂಗಳಿಂದ ಕೊಡಬೇಕಾದ ಗೌರವಧನವನ್ನೂ ಕೊಟ್ಟಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಿಡಿ ಕಾರಿದ್ದಾರೆ.
ಆನೇಕಲ್ ಭಾಗ ಭವಿಷ್ಯದಲ್ಲಿ ಜಿಬಿಎ ವ್ಯಾಪ್ತಿಗೆ: ಡಿಕೆ ಶಿವಕುಮಾರ್
“ಆನೇಕಲ್ ಭಾಗ ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ. ಈಗಾಗಲೇ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರ ಪ್ರದಕ್ಷಿಣೆ ಅಂಗವಾಗಿ ಗುರುವಾರ ಆನೇಕಲ್
ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರ ಸಭೆ: ಡಿಸಿಎಂ
“ಇದೇ 30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರುಗಳ ಸಮ್ಮೇಳನವನ್ನು ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಒಪ್ಪಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ
ಪ್ರಿಯಾಂಕ್ ಖರ್ಗೆ ಡಿಸಿಎಂ ಆಗಲಿದ್ದಾರೆ: ಶ್ರೀ ರಾಮುಲು
ಪ್ರಿಯಾಂಕ್ ಖರ್ಗೆ ರಾಜ್ಯದ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರಿಯಾಂಕ್ ಖರ್ಗೆ ಉಪಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಪ್ಲ್ಯಾನ್ ನಡೆದಿದೆ ಎಂದರು. ಒಂದು
ಹಾಸನಾಂಬೆ ಗರ್ಭಗುಡಿ ಬಂದ್: ದಾಖಲೆಯ 25 ಕೋಟಿ ಆದಾಯ ನಿರೀಕ್ಷೆ
ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರೆ ಮಹೋತ್ಸವ ನೆರವೇರಿತು. ಈ ಮೂಲಕ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿಗೆ ಬಾಗಿಲು ಮುಚ್ಚಲಾಯಿತು. ಅಕ್ಟೋಬರ್ 9ರಿಂದ ನಡೆದ ಹಾಸನಾಂಬೆ ದೇವಿಯ ದರ್ಶನ ಒಂದು ತಿಂಗಳ ಕಾಲ ಸುಗಮನವಾಗಿ ನೆರವೇರಿದ್ದು, ದಾಖಲೆ
ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ, ಪಂಗನಾಮ ಪಕ್ಕಾ ಎಂದ ಆರ್. ಅಶೋಕ
ಡಿಸಿಎಂ ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ. ಅವರು ಚಾಮುಂಡಿ, ಮಾರಮ್ಮ, ಗೌರಮ್ಮ, ರಾಘವೇಂದ್ರ ಸ್ವಾಮಿ ಎಂದು ಟೆಂಪಲ್ ರನ್ ಮಾಡುವುದರಿಂದ ಪ್ರಯೋಜನವಿಲ್ಲ. ಇಟಲಿ ಟೆಂಪಲ್ ಸುತ್ತಬೇಕು. ಅಲ್ಲಿ ಸರಿಯಾದ ಕಪ್ಪ ಕಾಣಿಕೆ ಕೊಟ್ಟು, ಪ್ರದಕ್ಷಿಣೆ ಹಾಕಿದರೆ ಮಾತ್ರ ಮುಖ್ಯಮಂತ್ರಿ ಆಗುತ್ತಾರೆ
ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಬಿಜೆಪಿಯವರಿಗೆ ಡಿಕೆ ಶಿವಕುಮಾರ್ ಸವಾಲು
ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲೆಸೆದರು.




