Menu

ಇನ್ವೆಸ್ಟ್ ಕರ್ನಾಟಕ ಯಶಸ್ಸು: ಹರಿದುಬಂದ 10.27 ಲಕ್ಷ ಕೋಟಿ ಬಂಡವಾಳ!

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಭರ್ಜರಿ ಪ್ರತಿಕ್ರಿಯೆ ಬಂದಿದ್ದು, ರಾಜ್ಯದಲ್ಲಿ 10.27 ಲಕ್ಷ ಕೋಟಿ ರೂ. ಹೂಡಿಕೆಯಾಗಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಡೆದ ‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಶುಕ್ರವಾರ ತೆರೆಬಿದ್ದಿದೆ. ಬಂಡವಾಳ ಹೂಡಿಕೆದಾರರಿಂದ ನಿರೀಕ್ಷೆಗಿಂತ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಶೇ.75ರಷ್ಟು ರಾಜ್ಯದಲ್ಲಿ ಹೂಡಿಕೆ ಮಾಡಲು ಕಂಪನಿಗಳು

ತುಂಬಿದ ಕೊಡ ತುಳಿಕೀತಾಳೆ ಪರಾಕ್: ಮೈಲಾರಲಿಂಗೇಶ್ವರ ಕಾರ್ಣಿಕ

`ತುಂಬಿದ ಕೊಡ ತುಳುಕಿತಲೇ ಪರಾಕ್’ ಎಂದು ಐತಿಹಾಸಿಕ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಗೊರವಯ್ಯ ಭವಿಷ್ಯ ನುಡಿಯುವ ಮೂಲಕ ರೈತರಲ್ಲಿ ಹರ್ಷ ಮೂಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಶ್ರೀ ಕ್ಷೇತ್ರ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ರಾಮಣ್ಣ ಗೊರವಯ್ಯ ತುಂಬಿದ ಕೊಡ ತುಳುಕಿತಲೇ ಪಾರಕ್ ಎಂದು ಹೇಳಿದ್ದಾರೆ.

ಹೊಸ ಕೈಗಾರಿಕಾ ನೀತಿಯಿಂದ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್‌ ಖರ್ಗೆ

ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ  20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ

ಮಕ್ಕಳ ಶಾಲಾ ದಾಖಲಾತಿ ವಯೋಮಿತಿಯಿಂದ ಅನ್ಯಾಯ: ಮಧು ಬಂಗಾರಪ್ಪ ಬಳಿ ಪೋಷಕರ ಅಹವಾಲು

ಬೆಂಗಳೂರು: ಆರು ವರ್ಷವಾಗದ ಮಕ್ಕಳಿಗೆ ಒಂದನೇ ತರಗತಿಗೆ ಪ್ರವೇಶ ನೀಡದ ಶಿಕ್ಷಣ ನೀತಿಯಿಂದ ಮಕ್ಕಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯದ ಪೋಷಕರ ನಿಯೋಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಒತ್ತಾಯಿಸಿದೆ. ಈ ಸಂಬಂಧ ಸುಧೀನ್ ಕುಮಟಾ, ಮೇಘನಾ, ಶೀತಲ್ ಶೆಟ್ಟಿ ಮತ್ತಿತರರ ನಿಯೋಗ

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ: ಡಿಕೆ ಶಿವಕುಮಾರ್

ಬೆಂಗಳೂರು: ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕೋವಿಡ್ ಹಗರಣದ ತನಿಖೆ ಸಿಐಡಿಗೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಿಐಡಿಗೆ ವಹಿಸಿದೆ. ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸರ್ಕಾರವು ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ

ಜನನ ಮರಣ ನೋಂದಣಿ ಕಾಯಿದೆ ತಿದ್ದುಪಡಿಗೆ ಕೋರ್ಟ್‌ ಆದೇಶ

ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮಗನ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ

2 ಹಾಗೂ 3ನೇ ಹಂತದ ನಗರಗಳತ್ತ ಮುಖಮಾಡಿ: ಉದ್ಯಮಿಗಳಿಗೆ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು ಹೊರತಾಗಿ ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ. ನಮ್ಮ ಸರ್ಕಾರ ನಿಮಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸಲಹೆ ನೀಡಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಸಮಾವೇಶದಲ್ಲಿ

ಕಾವೇರಿ-ಗೋದಾವರಿ ನದಿಗಳ ಜೋಡಣೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಲಹೆ

ನವದೆಹಲಿ: ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆಯಿಂದ ನಗರಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್

ಪಂಚಭೂತಗಳಲ್ಲಿ ಲೀನವಾದ ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ

ಅಂಕೋಲಾ: ಸಾವಿರಾರು ಜಾನಪದ ಹಾಡುಗಳಿಗೆ ದನಿಯಾಗಿ ಹಾಲಕ್ಕಿ ಜಾನಪದ ಕಂಪನ್ನು ದೇಶದ್ಯಂತ ಪಸರಿಸಿದ ದೇಶದ ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀ ಪುರಸ್ಕರತ ಜಾನಪದ ಕೋಗಿಲೆ ಸುಕ್ರಿ ಬೊಮ್ಮ ಗೌಡ (88) ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಗುರುವಾರ ಸಂಜೆ ಸರ್ಕಾರಿ ಗೌರವಾಧರಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ