Menu

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಅಪಘಾತಗಳು: ಚಾಲಕರಿಗೆ ಸುರಕ್ಷತಾ ಮಾರ್ಗಸೂಚಿಗೆ ಸಚಿವ ರಾಮಲಿಂಗಾರೆಡ್ಡಿ ಕೇಂದ್ರಕ್ಕೆ ಆಗ್ರಹ

ಹಿರಿಯೂರು ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಹಲವು ಮಂದಿ ಸಜೀವ ದಹನಗೊಂಡ ಭಯಾನಕ ಘಟನೆಯ ಬಳಿಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಅವಧಿಯ ಸಂಚಾರದ ಸುರಕ್ಷತೆ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿರು ವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭೀಕರ ರಸ್ತೆ ದುರಂತಗಳು ಮಧ್ಯರಾತ್ರಿಯ ನಂತರವೇ ನಡೆಯುತ್ತಿವೆ. ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುವುದೇ ಅಪಘಾತಗಳಿಗೆ ಮುಖ್ಯ ಕಾರಣವಾಗಿರುತ್ತದೆ. ಚಾಲಕರು ನಿದ್ದೆ ಬರುವಾಗ

ಗರ್ಭಿಣಿಯ ಹತ್ಯೆಗೈದ ತಂದೆ: ದೌರ್ಜನ್ಯಕ್ಕೊಳಗಾದ ಕುಟುಂಬ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಮಂಡ್ಯ ಬಳಿ ಕಲ್ಲು ಗಣಿಗಾರಿಕೆ ಕ್ವಾರಿಗೆ ಟಿಪ್ಪರ್ ಬಿದ್ದು ಚಾಲಕ ಸಾವು

ಕಲ್ಲು ಗಣಿಗಾರಿಕೆಯ ಕ್ವಾರಿಯಲ್ಲಿ ಪ್ರಪಾತಕ್ಕೆ ಟಿಪ್ಪರ್ ಬಿದ್ದು, ಚಾಲಕ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ಶುಕ್ರವಾರ ಸಂಭವಿಸಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಜಟಕ ಗೇಟ್ ಬಳಿ ರವಿ ಹಾಗೂ ಕಾಂತ ಎಂಬುವವರು ಸೇರಿ ನಡೆಸುತ್ತಿದ್ದ ಕ್ವಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಣಿಗಾರಿಕೆಯಿಂದ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್

ಜನಮನ್ನಣೆಗೆ ಪಾತ್ರರಾಗಿದ್ದ ನಾಯಕ ಶಾಮನೂರು ಶಿವಶಂಕರಪ್ಪ: ಸಿದ್ದರಾಮಯ್ಯ

ದಾವಣಗೆರೆ: ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಳಿವಯಸ್ಸಿನಲ್ಲಿಯೂ ಅತ್ಯಂತ

ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ: ರಾಜ್ಯದ ಬಿಜೆಪಿ ನಾಯಕರು ಯಾಕೆ ಪ್ರಶ್ನಿಸುವುದಿಲ್ಲ ಎಂದು ಸಿಎಂ ಪ್ರಶ್ನೆ

ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು

ರೈತರ ನೆರವಿಗೆ ಕ್ರೆಡಲ್‌ನಿಂದ ‘ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ‌

ಬೆಂಗಳೂರು: ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್‌ 23ರಿಂದ 2025ರ ಡಿಸೆಂಬರ್‌ 31ರವರೆಗೆ ಸಹಾಯವಾಣಿ

ಟಿಪ್ಪರ್ ಡಿಕ್ಕಿ: ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ದುರ್ಮರಣ

ಚಿಕ್ಕಬಳ್ಳಾಪುರ: ಟಿಪ್ಪರ್​ಗೆ ಬೈಕ್ ಡಿಕ್ಕಿ ಹೊಡೆದು ಸಹೋದರರಿಬ್ಬರು ಸೇರಿದಂತೆ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ

ಕಾಂಬೊಡಿಯಾದಲ್ಲಿ ವಿಷ್ಣುವಿನ ಪ್ರತಿಮೆ ನೆಲಸಮ: ಭಾರತ ಖಂಡನೆ

ಕಾಂಬೊಡಿಯಾದಲ್ಲಿ ಸರ್ಕಾರದಿಂದ ನಿರ್ಮಾಣವಾಗಿದ್ದ 30 ಅಡಿ ಎತ್ತರದ ಹಿಂದೂ ದೇವರ ಪ್ರತಿಮೆಯನ್ನು ಬುಲ್ಡೋಜರ್ ನಿಂದ ನೆಲಸಮಗೊಳಿಸಲಾಗಿದೆ. ಥಾಯ್ಲೆಂಡ್​ ಮತ್ತು ಕಾಂಬೋಡಿಯಾ ನಡುವಿನ ಹಲವು ದಶಕಗಳ ಗಡಿ ವಿವಾದದ ಹಿನ್ನೆಲೆಯಲ್ಲಿ ಥಾಯ್ಲೆಂಡ್ ಸೇನೆ 30 ಅಡಿ ಎತ್ತರದ ವಿಷ್ಣುವಿನ ಪ್ರತಿಮೆಯನ್ನು ನೆಲಸಮಗೊಳಿಸಿದೆ. ವಿಷ್ಣು

ನಾನು ಕೇವಲ ವೇದಿಕೇಲಿ ಕೂತು ಭಾಷಣ ಮಾಡಿಲ್ಲ, ಪಕ್ಷದ ಎಲ್ಲ ಕೆಲಸ ಮಾಡಿದ್ದೇನೆ: ಡಿಕೆ ಶಿವಕುಮಾರ್

“ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು