Menu

ಫೆಬ್ರವರಿ 13 ರಿಂದ  ‘ಹಂಪಿ ಉತ್ಸವ-2026’

ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನ  ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್ ಹಾಗೂ ಬಳ್ಳಾರಿ  ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್  ಹೇಳಿದರು. ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ-2026 ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು. ಫೆಬ್ರವರಿ 13ರ ಸಂಜೆ  ಮುಖ್ಯಮಂತ್ರಿ ಸಿದ್ದರಾಮಯ್ಯ  ಹಂಪಿ

ಶಿಡ್ಲಘಟ್ಟ ಪೌರಾಯುಕ್ತರ ವಿರುದ್ಧ ಅವಾಚ್ಯ ಶಬ್ಧ: ತಪ್ಪು ಮಾಡಿದವರ ವಿರುದ್ಧ ಕ್ರಮವೆಂದ ಡಿಸಿಎಂ

ಇದು ಪವಿತ್ರವಾದ ಜಾಗ, ಇಲ್ಲಿ ಅಂತಹ ವಿಚಾರ ಚರ್ಚೆ ಬೇಡ. ಯಾರೂ ಕಾನೂನಿಗಿಂತ ದೊಡ್ಡವರಲ್ಲ. ತಪ್ಪು ಮಾಡಿದವರು ಕ್ಷಮೆ ಕೇಳಬೇಕು ಎಂದು ಸೂಚಿಸುತ್ತೇನೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಶಿಡ್ಲಘಟ್ಟದಲ್ಲಿ  ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಗರಸಭೆ ಪೌರಾಯುಕ್ತೆಗೆ ಅಶ್ಲೀಲ ಪದಗಳಿಂದ

ಮಲ ಹೊರುವ ಪದ್ಧತಿ ನಿಷೇಧ ಪರಿಷ್ಕೃತ ವರದಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧ ಕಾಯಿದೆ, ಅನುಷ್ಠಾನ ಮತ್ತು ಪುನರ್ವಸತಿ ಕಲ್ಪಿಸಿರುವುದಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳ ಕುರಿತ ಪರಿಷ್ಕೃತ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್  ಸೂಚನೆ ನೀಡಿದೆ. ಮಲ ಹೊರುವ ಪದ್ದತಿ ನಿಷೇಧವಿದ್ದರೂ ಮನುಷ್ಯದಿಂದ ಮಲ ಗುಂಡಿಗಳ ಸ್ವಚ್ಛಗೊಳಿಸಲು

ಡ್ರಗ್‌ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಚರ್ಚೆಗೆ ವಿಶೇಷ ಅಧಿವೇಶನ ಕರೆಯಲಿ: ಆರ್‌ ಅಶೋಕ

ಕಾಂಗ್ರೆಸ್‌ ಸರ್ಕಾರ ವಿಬಿ ಜಿ ರಾಮ್‌ ಜಿ ಯೋಜನೆ ಬದಲು ಡ್ರಗ್‌ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಬಿ

ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು:ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಸಂಬಂಧ ಆರೋಪಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ. ಸಿಬಿಐ ನೋಟೀಸ್ ಹಿನ್ನೆಲೆಯಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ

ವೀರಶೈವ ಲಿಂಗಾಯತ ಸಮಾಜವನ್ನು ಒಡೆಯವ ಹುನ್ನಾರ ನಡೆಯುತ್ತಿದೆ: ಬಿವೈ ವಿಜಯೇಂದ್ರ

ಚಿತ್ರದುರ್ಗ/ ಹೊಳಲ್ಕೆರೆ: ವೀರಶೈವ ಲಿಂಗಾಯತ ಸಮಾಜವನ್ನು ರಾಜಕೀಯ ಉದ್ದೇಶಕ್ಕಾಗಿ ಒಡೆಯವ ಉನ್ನಾರ ನಡೆಯಿತ್ತಿದ್ದು ಇದನ್ನ ನಾವು ಸಹಿಸಲ್ಲ ಎಂದು ರಾಜ್ಯ ಬಿಜಿಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಸಮುದಾಯ ಭವನದ ಮೈದಾನದಲ್ಲಿ ಬುಧವಾರ ನೊಳಂಬ ಲಿಂಗಾಯತ ಸಮಾಜ

ಪೌರಾಯುಕ್ತೆಗೆ ನಿಂದನೆ ಬೆದರಿಕೆ: ಕಾಂಗ್ರೆಸ್​ ಮುಖಂಡ ರಾಜೀವ್ ಗೌಡಗೆ ಸಂಕಷ್ಟ

ಬೆಂಗಳೂರು: ಬ್ಯಾನರ್ ತೆರವು ಮಾಡಿದ್ದ ಸಂಬಂಧ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಫೋನ್​​ನಲ್ಲಿ ಅಶ್ಲೀಲವಾಗಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ಅಶ್ಲೀಲವಾಗಿ ಬೈದು ನಿಂದಿಸಿರುವುದಕ್ಕೆ ನೊಂದ ಪೌರಾಯುಕ್ತೆ ಅಮೃತಾಗೌಡ ಅವರು ಚಿಕ್ಕಬಳ್ಳಾಪುರ

ಜ. 22ರಿಂದ 31ರವರೆಗೆ ವಿಶೇಷ ಅಧಿವೇಶನ: ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಜನವರಿ 22ರಿಂದ ಒಂದು ವಾರ ಕಾಲ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಮನರೇಗಾ ರದ್ದುಗೊಳಿಸಿ ಜಾರಿಗೆ ತಂದಿರುವ ವಿಬಿ ಜಿ ರಾಮ್

ಚುನಾವಣೆ ಭರವಸೆ ಈಡೇರಿಸಲು 500 ಬೀದಿನಾಯಿಗಳ ಹತ್ಯೆ!

ಹೈದರಾಬಾದ್: ಚುನಾವಣೆಯ ವೇಳೆ ನೀಡಿದ ಭರವಸೆ ಈಡೇರಿಸಲು ಎರಡು ಜಿಲ್ಲೆಗಳಲ್ಲಿ ಒಂದು ವಾರದಲ್ಲಿ ಸುಮಾರು 500ಕ್ಕೂ ಅಧಿಕ ಬೀದಿನಾಯಿಗಳನ್ನು ಹತ್ಯೆಗೈದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಕಮರೆಡ್ಡಿ ಮತ್ತು ಹನಮಕೊಂಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ನೀಡಿದ ಭರವಸೆ

ಬೀದರ್ ನಲ್ಲಿ ಕತ್ತು ಸೀಳಿದ ಗಾಳಿಪಟ ದಾರ: ಬೈಕ್‌ ಸವಾರ ಸಾವು

ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ಗಾಳಿಪಟ ಹಾರಿಸುವ ದಾರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಕುತ್ತಿಗೆಯನ್ನೇ ಸೀಳಿದ್ದು, ಅತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ (48) ಮೃತಪಟ್ಟವರು. ಅವರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ.