ರಾಜ್ಯ
ಕಾಶ್ಮೀರದಲ್ಲಿ ಸಿಲುಕಿರುವ ಮೈಸೂರಿನ 10 ಮಂದಿ: ಸಚಿವ ಸಂತೋಷ್ ಲಾಡ್ ಅಭಯ
ಮೈಸೂರು: ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ 26 ಮಂದಿ ಹತ್ಯೆಯಾದ ಜಮ್ಮು ಕಾಶ್ಮೀರದಲ್ಲಿ ಮೈಸೂರಿನ 10 ಮಂದಿ ಕಾಶ್ಮೀರದಲ್ಲಿ ಸಿಲುಕಿದ್ದಾರೆ. ಸಚಿವ ಸಂತೋಷ್ ಲಾಡ್ ಕಾಶ್ಮೀರದಲ್ಲಿ ಸಿಲುಕಿರುವ ಮೈಸೂರಿನವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. ಮೈಸೂರಿನ ಕೇಂದ್ರ ಅಂಚೆ ಕಚೇರಿಯ ಸೂಪರ್ ವೈಸರ್ ವಿಲೀಶ್, ಸುನೀತಾ ಹಾಗೂ ಕುಟುಂಬಸ್ಥರಾದ ಜೆ.ಪ್ರಸಾದ್, ಆಶಾ, ಲಕ್ಷ್ಮಿ ಹಾಗೂ ಮಕ್ಕಳು ಸೇರಿ 10 ಮಂದಿ ದೆಹಲಿ ಹಾಗೂ ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. 8
ಉಗ್ರ ಸಂಘಟನೆಗಳನ್ನು ಸದೆಬಡಿಯಬೇಕು: ಡಿಕೆ ಶಿವಕುಮಾರ್
ಬೆಂಗಳೂರು: ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್
ರಾಜ್ಯದಲ್ಲಿನ ಸ್ಲೀಪರ್ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ.
ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಕರೆತರಲು ವಿಶೇಷ ವಿಮಾನ
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಬ್ಬ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸ್ಪಷ್ಟಪಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ಉಗ್ರರ ದಾಳಿ ಈ ಘಟನೆಯನ್ನು ನಾವು ಕೂಡ ಖಂಡಿಸುತ್ತೇವೆ. ಮುಂದೆ ಈ ರೀತಿ ಘಟನೆಗಳು
ರನ್ಯಾ ರಾವ್, ತರುಣ್ ರಾಜು ಜಾಮೀನು ಅರ್ಜಿಗಳ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾರಾವ್ ಹಾಗೂ ಉದ್ಯಮಿ ತರುಣ್ ರಾಜು ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಜಾಮೀನು ಅರ್ಜಿಗಳ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್
ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಬಲಿಯಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್
ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲ ಎಂದು ಹೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ
ಮಂಡ್ಯ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ
ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನ ಬಗೆಹರಿಸುವ ಶಕ್ತಿ ಸರ್ಕಾರಕ್ಕಿದೆ: ಡಿಕೆ ಸುರೇಶ್
ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮುಂದಿದೆ. ಈ ಅನುಮಾನಗಳಿಗೆ ತೆರೆ ಎಳೆಯುವ ಶಕ್ತಿ ಸರ್ಕಾರಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ಸುದೀರ್ಘವಾಗಿ ಚರ್ಚಿಸಿ ಈ ಕೆಲಸ ಮಾಡಲಿದ್ದಾರೆ” ಎಂದು ಮಾಜಿ
ಮಾಡಬಾರದ್ದನೆಲ್ಲಾ ಮಾಡಿ ದೇವರ ಪೂಜೆ ಮಾಡಿದರೆ ಪಾಪಕರ್ಮ ಹೋಗುತ್ತಾ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ




