ರಾಜ್ಯ
ಧರ್ಮಸ್ಥಳ ಪ್ರಕರಣ: ಸ್ವತಂತ್ರ ಮಾಹಿತಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ
ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ ದೂರುದಾರ, ಆರೋಪಿಯಾಗಿದ್ದವರು ಹೊಂದಿರುವುದಕ್ಕಿಂತ ಹೆಚ್ಚಿನ ಮಾಹಿತಿ ತಾವು ಹೊಂದಿರುವುದಾಗಿ ಹೇಳಿಕೊಂಡಿರುವ ಅರ್ಜಿದಾರರು ಸೆಪ್ಟೆಂಬರ್ 26 ರಂದು ನ್ಯಾಯಾಲಯಕ್ಕೆ ಸ್ವತಂತ್ರ ಮಾಹಿತಿಯನ್ನು ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿದಾರರಾದ ಪುರಂದರ ಗೌಡ ಮತ್ತು ತುಕಾರಾಂ ಗೌಡ ಅವರ ಪರವಾಗಿ ಹಿರಿಯ ವಕೀಲ ದೀಪಕ್ ಖೋಸ್ಲಾ ಮತ್ತು ವಿಶೇಷ ಸಾರ್ವಜನಿಕ ಅಭಿಯೋಜಕ ಬಿ ಎನ್ ಜಗದೀಶ ಅವರ ವಾದವನ್ನು ಆಲಿಸಿದ ನಂತರ
ಹಿಂದೂ ಯುವತಿಯ ಮದುವೆಯಾದ ಧಾರವಾಡ ಯೂಟ್ಯೂಬರ್ ವಿರುದ್ಧ ಪ್ರಕರಣ
ಕನ್ನಡದ ಯೂಟ್ಯೂಬರ್ ಖ್ವಾಜಾ ಅಲಿಯಾಸ್ ಮುಕಳೆಪ್ಪ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನು ಮದುವೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಖ್ವಾಜಾ ತನ್ನ
ದಸರಾ ಮತ್ತು ಬಾನು ಮುಷ್ತಾಕ್: ಸುಪ್ರೀಂನಲ್ಲೂ ಪಿಐಎಲ್ ವಜಾ
ಬುಕರ್ ಪ್ರಶಸ್ತಿ ವಿಜೇತೆ, ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ತಡೆಯಲು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಒಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ತೀರ್ಮಾನದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಂಗ ನಿರಾಕರಿಸಿದ್ದು, ಬಾನು
ಚಾಮರಾಜನಗರದಲ್ಲಿ ವಿಚಿತ್ರ ರೋಗಕ್ಕೆ ಜಾನುವಾರುಗಳು ಬಲಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಕಳೆದೊಂದು ತಿಂಗಳಲ್ಲಿ ವಿಚಿತ್ರ ರೋಗದಿಂದ 15 ಜಾನುವಾರುಗಳು ಮೃತಪಟ್ಟಿವೆ. ದೇಹದ ಮೇಲೆಲ್ಲ ಗುಳ್ಳೆ ಎದ್ದು ರಕ್ತ ಸುರಿದು ಜಾನುವಾರುಗಳು ಸಾಯುತ್ತಿರುವುದು ಪಶು ಸಾಕಣೆದಾರರಲ್ಲಿ ಆತಂಕ ಸೃಷ್ಟಿಸಿದೆ. ವಿಚಿತ್ರ ಗುಳ್ಳೆ ರೋಗ ಕಾಣಿಸಿಕೊಂಡ
ನಮ್ಮ ಪಕ್ಷ, ನಮ್ಮ ಸರ್ಕಾರ ಯಾವುದೇ ಸಮಾಜವನ್ನು ವಿಭಜಿಸಲು ಇಚ್ಚಿಸುವುದಿಲ್ಲ: ಡಿಸಿಎಂ
“ನಮ್ಮ ಪಕ್ಷ, ನಮ್ಮ ಸರ್ಕಾರವು ಯಾವುದೇ ಸಮಾಜವನ್ನು ವಿಭಜಿಸಲು ಇಚ್ಚಿಸುವುದಿಲ್ಲ. ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ನಡೆಸುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಹಿಂದುಳಿದ ವರ್ಗಗಳ ಆಯೋಗವು
ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರು ಹೊರತು ದಾಖಲೆ ನೀಡಲಿ: ಆರ್.ಅಶೋಕ
ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ
ಪ್ರವಾಸೋದ್ಯಮ ಹಾಗೂ ಹೋಟೆಲ್ ಉದ್ಯಮದಲ್ಲಿ ಹೂಡಿಕೆಗೆ ರಾಜ್ಯ ಪ್ರಶಸ್ತ: ಡಿಕೆ ಶಿವಕುಮಾರ್
“ಕರ್ನಾಟಕ ಪ್ರಾಕೃತಿಕವಾಗಿ, ಸಾಂಸ್ಕೃತಿವಾಗಿ ಸದೃಡವಾಗಿದೆ. ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಸೇರಿದಂತೆ ಪ್ರತಿಯೊಂದು ಭಾಗವೂ ವೈಶಿಷ್ಟ್ಯ ಪೂರ್ಣವಾಗಿವೆ. ಪ್ರವಾಸೋದ್ಯಮ ಹಾಗೂ ಹೋಟೆಲ್ ಉದ್ಯಮದ ಮೇಲೆ ಹೂಡಿಕೆ ಮಾಡಲು ನಮ್ಮ ರಾಜ್ಯ ಪ್ರಶಸ್ತ್ಯವಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನಲ್ಲಿ ನಡೆದ
ಸ್ಪೇಸ್ ಟೆಕ್: ಶ್ರೇಷ್ಠತಾ ಕೇಂದ್ರ ಸ್ಥಾಪಿಸಲು ಸರ್ಕಾರ ಅನುಮೋದನೆ: ಪ್ರಿಯಾಂಕ್ ಖರ್ಗೆ
ಮುಂದಿನ ಒಂದೂವರೆ ವರ್ಷಗಳ ಅವಧಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ (ಸ್ಪೇಸ್ ಟೆಕ್) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶ್ರೇಷ್ಠತಾ ಕೇಂದ್ರ (ಸೆಂಟರ್ ಆಫ್ ಎಕ್ಸಲೆನ್ಸ್ -CoE) ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ
ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ
ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟವು ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಂಡಿದ್ದು, ಅವು ಹೀಗಿವೆ ಸಹಕಾರ ಇಲಾಖೆಯಡಿ ಬೆಂಗಳೂರಿನ ದಾಸನಪುರ,ಕೋಲಾರ, ಮೈಸೂರು ಎಪಿಎಂಸಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ)
ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ 7 ತಲೆಬರುಡೆ ಪತ್ತೆ, ಒಂದು ಗುರುತು ಪತ್ತೆ!
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಂಗ್ಲೆಗುಡ್ಡದಲ್ಲಿ 2ನೇ ದಿನ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮತ್ತೆರಡು ತಲೆಬುರುಡೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಬಂಗ್ಲೆಗುಡ್ಡದಲ್ಲಿ ಅನೇಕ ಅಸ್ಥಿಪಂಜರಗಳನ್ನು ನೋಡಿದ್ದೇನೆ ಎಂದು ಸೌಜನ್ಯ ಅವರ ಮಾವ ವಿಠಲ್ ಗೌಡ ಮಾಡಿದ್ದ




