Menu

ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರೇಹಳ್ಳಿ ಬಳಿ ನಿರ್ಮಿಸುತ್ತಿರುವ ಹೆಲಿಪ್ಯಾಡ್‌ಗೆ ತೆರಳಿ ಗ್ರೀನ್ ರೂಂ ನಿರ್ಮಾಣ, ವಿದ್ಯುತ್ ಕಂಬಗಳ ತೆರವು, ಜಾಗ ಸಮತಟ್ಟಾಗಿಸುವುದು, ಕಾರ್ಯಕ್ರಮಕ್ಕೆ

ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆಗೆ ಕೇಂದ್ರಕ್ಕೆ ಒತ್ತಡ ಹಾಕುವ ಬಗ್ಗೆ ಅಧಿವೇಶನದಲ್ಲಿ ಚರ್ಚೆ: ಡಿಸಿಎಂ

“ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವುದು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್  ಮಾಧ್ಯಮಗಳ

ಅಭಿವೃದ್ಧಿ ಮ್ಯಾಜಿಕ್ ಅಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ: ಡಿಕೆ ಶಿವಕುಮಾರ್ 

“ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ

ಜನವರಿಯಿಂದ ಇಂದಿರಾ ಕಿಟ್ ವಿತರಣೆ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಳಗಾವಿ:ಬಿಪಿಎಲ್ ಪಡಿತರದಾರರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯ ಬದಲಿಗೆ ಬರುವ ಜನವರಿಯಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಮೇಲ್ಮೈಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸಿಟಿ ರವಿ ಅವರ ಪ್ರಶ್ನೆಗೆ ಉತ್ತರ ನೀಡಿದ

ಕೃಷ್ಣ ಮೃಗಗಳ ಸಾವಿಗೆ ಸಾಂಕ್ರಮಿಕ ರೋಗ ಕಾರಣ: ಸಚಿವ ಈಶ್ವರ ಬಿ ಖಂಡ್ರೆ

ಬೆಳಗಾವಿ ಸುವರ್ಣ ವಿಧಾನಸೌಧ: ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಡಲು ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಳವಾರ್

ಯುವನಿಧಿ ಯೋಜನೆ: 2.84 ಲಕ್ಷ ಮಂದಿಗೆ 757 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ!

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು

ಹಣಕ್ಕಾಗಿ ಸಿಸೇರಿಯನ್ ಮಾಡಿದರೆ ಹುಷಾರ್: ಖಾಸಗಿ ಆಸ್ಪತ್ರೆಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್  ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನ ಪರಿಷತ್  ಅಧಿವೇಶನದಲ್ಲಿ

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿಶೇಷ ಚರ್ಚೆಗೆ ಬುಧವಾರದ ಅಧಿವೇಶನ ಮೀಸಲು: ಸಭಾಪತಿ ಹೊರಟ್ಟಿ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ  157ನೇ ಅಧಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ 

ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಬೈರತಿ ಸುರೇಶ್

ಸುವರ್ಣವಿಧಾನಸೌಧ: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರದ

ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ  ಹೇಳಿದ್ದಾರೆ. ಬೆಳಗಾವಿ