ರಾಜ್ಯ
ಮೈಸೂರು ದಸರಾ: ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಅಧಿಕೃತ ವೆಬ್ ಸೈಟ್‌ನಲ್ಲಿ ಬಿಡುಗಡೆ
ನಾಡಹಬ್ಬ ಮೈಸೂರು ದಸರಾ-2025ಕ್ಕೆ ಎಲ್ಲ ಬಗೆಯ ಸಿದ್ಧತೆ ಭರದಿಂದ ಸಾಗಿದೆ, ದಸರಾ ವೀಕ್ಷಣೆಗಾಗಿ ಸಾರ್ವಜನಿಕರಿಗೆ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳನ್ನು ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್‌ನಲ್ಲಿ ಬಿಡುಗಡೆಗೊಳಿಸಿದೆ. ದಸರಾ ಹಬ್ಬದಲ್ಲಿ ಅರಮನೆ, ಜಂಬೂಸವಾರಿ, ಪಂಜಿನ ಕವಾಯತು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳಬೇಕು ಎಂದು ಯೋಚಿಸುತ್ತಿರುವವರಿಗೆ ಜಿಲ್ಲಾಡಳಿತವು 6500 ರೂಪಾಯಿ ಗೋಲ್ಡ್ ಕಾರ್ಡ್, ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ಗೋಲ್ಡ್ ಕಾರ್ಡ್ ಪಡೆದುಕೊಂಡರೆ ಸೆ.22 ರಿಂದ ಅ.2 ರವರೆಗೆ ನಡೆಯಲಿರುವ ದಸರಾದ
ಬಾನು ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ಗೆ ಅರ್ಜಿ; ಬದುಕಿದ್ದೇವೆ ಎಂದು ತೋರಿಸಿಕೊಳ್ಳುವ ಪ್ರಯತ್ನವೆಂದ ಡಿಕೆ ಶಿವಕುಮಾರ್
“ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ದಸರಾ ಉದ್ಘಾಟನೆಗೆ
ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಸಿಎಂ, ಡಿಸಿಎಂ ವಿರುದ್ಧ ಆರ್.ಅಶೋಕ ಕಿಡಿ
ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಅವರನ್ನು ರಕ್ಷಿಸಲು ಚುನಾವಣಾ ಆಯೋಗದ ಬಗ್ಗೆ, ಚುನಾವಣಾ ಪ್ರಕ್ರಿಯೆ ಬಗ್ಗೆ, ಮತಯಂತ್ರಗಳ ಬಗ್ಗೆ ಇಲ್ಲಸಲ್ಲದ ಅನುಮಾನ ಬಿತ್ತಿ ಊಹಾಪೋಹ ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಲೇ ಬಂದಿದೆ. ಭಾರತದ ಪ್ರಜ್ಞಾವಂತ ಮತದಾರರು ಈ ಹತಾಶ ಪ್ರಯತ್ನವನ್ನು
ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸಬೇಡಿ, ಅವರು ಇಡೀ ನಾಡಿನ ನಾಯಕ: ಡಿಸಿಎಂ
“ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು. ಇವರು ಸರ್ವ ಸಮುದಾಯದ ನಾಯಕ. ನಾಡಿನ ಸಾಂಸ್ಕೃತಿಕ, ಸಾಮಾಜಿಕ ನಾಯಕ. ಆದ ಕಾರಣಕ್ಕೆ ನಮ್ಮ ಸರ್ಕಾರ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ರಾಜಾಜಿನಗರದಲ್ಲಿ
ಬ್ಯಾಲೆಟ್ ಪೇಪರ್ ಬಳಕೆಯು ಚುನಾವಣೆಯಲ್ಲಿನ ಪಾರದರ್ಶಕತೆ ಕಾಯ್ದುಕೊಳ್ಳಲು ಸಹಕಾರಿ
ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ಶ್ಲಾಘನೀಯ ಎಂದು ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಅಕ್ರಮ
ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನ ನವೆಂಬರ್ 14ಕ್ಕೆ
ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು. ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ
ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆ ಶಿವಕುಮಾರ್
ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ. ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಆಲಮಟ್ಟಿ ಅಣೆಕಟ್ಟಿನಲ್ಲಿ
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಕಾವೇರಿ ಪಾಲಾದ ಬೆಂಗಳೂರಿನ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು!
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ಸಂಭವಿಸಿದೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಗಳಾದ ವಿಲಿಯಂ ಸ್ಯಾಮ್ (21), ವೆಂಕಟೇಶ್ (21) ಮೃತ ದುರ್ದೈವಿಗಳು. ಇಬ್ಬರು ಅಂತಿಮ ವರ್ಷದ ಬಿಬಿಎಂ ವ್ಯಾಸಂಗ
ಪಂಚಾಯಿತಿ ಅಧ್ಯಕ್ಷನ ಹತ್ಯೆ: ಚಡಚಣ ಪಿಎಸ್ ಐ ಅಮಾನತು
ವಿಜಯಪುರ ಜಿಲ್ಲೆಯ ಭೀಮಾತೀರದ ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಚಡಚಣ ಪಿಎಸ್‌ಐ ಪ್ರವೀಣ್ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಪಂ ಅಧ್ಯಕ್ಷ ಭೀಮನಗೌಡ ಬಿರಾದಾರ್‌ನ ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ




