ರಾಜ್ಯ
ನಮ್ಮ ಸರ್ಕಾರ 65 ಸಾವಿರ ಕೋಟಿ ರೂಪಾಯಿ ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಮಾತನಾಡಿದರು. ನಾನು ರಾಜಪ್ಪ ಮೇಸ್ಟ್ರಿಂದ ಶಾಲಾ ಶಿಕ್ಷಣವನ್ನು ಹಾಗೂ ಪ್ರೊ.ನಂಜುಂಡಸ್ವಾಮಿ ಅವರಿಂದ ರಾಜಕೀಯ ಪಾಠ ಕಲಿತೆ ಎನ್ನುವ ಮೂಲಕ ತಮ್ಮ ಶಿಕ್ಷಕರನ್ನು ಸ್ಮರಿಸಿದ
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ: ಡಿಕೆ ಶಿವಕುಮಾರ್
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡುವ ಸರ್ಕಾರದ
ರಾಜ್ಯದ ಶಾಲೆಗಳಲ್ಲೂ ‘ವಾಟರ್ ಬೆಲ್’ ?
ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ಉತ್ತೇಜಿಸಲು ಕೇರಳ ರಾಜ್ಯದ ಶಾಲೆಗಳಲ್ಲಿ ದಿನಕ್ಕೆ ಎರಡು ಬಾರಿ ‘ವಾಟರ್ ಬೆಲ್’ ಜಾರಿಯಲ್ಲಿದೆ. ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ಚಿಂತನೆ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ವಾಟರ್ ಬೆಲ್ ಜಾರಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಕೇರಳ
ಡಿಕೆ ಶಿವಕುಮಾರ್ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ: ಆರ್.ಅಶೋಕ
ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ “ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ.” ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ. ಈಗ “ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ” ಎಂದು ರೈತರ
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್: ಸಂಪುಟ ನಿರ್ಣಯ
ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ವ್ಯವಸ್ಥೆ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಬಳಕೆಗೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಚುನಾವಣಾ ಪ್ರಕ್ರಿಯೆಯಲ್ಲಿ ಅಗತ್ಯವಾದ ಕೆಲವು ಕಾನೂನು ಹಾಗೂ
ಕೋಲಾರದ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು. ನಂತರದ ಮಾತನಾಡಿದ ಅವರು, ಬೆಂಗಳೂರಿನ ಸುತ್ತಮುತ್ತಲಿನ
ಜಕ್ಕೂರು ಏರೋಡ್ರೋಂ ವಿಸ್ತರಣೆ ಹಾಗೂ ಸ್ಥಳ ಬಳಕೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ
ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನ: ಮೂರು ದಿನಗಳಲ್ಲಿ ಅಂತಿಮ ತೀರ್ಮಾನವೆಂದ ಡಿಕೆ ಶಿವಕುಮಾರ್
ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ
ಶಾಸಕ ಮುನಿರತ್ನ ವಿರುದ್ಧ ಎರಡನೇ ಅತ್ಯಾಚಾರ ಪ್ರಕರಣ: ಬಿ ರಿಪೋರ್ಟ್ ಸಲ್ಲಿಸಿದ ಎಸ್‌ಐಟಿ
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಎಸ್‌ಐಟಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಬಿ ರಿಪೋರ್ಟ್ ಸಲ್ಲಿಸಿದ್ದು, ಈ ಆರೋಪ ಸಾಬೀತಾಗಿಲ್ಲ ಎಂದು ಹೇಳಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇನ್ನೂ ಬಿ ರಿಪೋರ್ಟ್ ಅನ್ನು ಮಾನ್ಯ
ಆಸ್ಪತ್ರೆ ಬಗ್ಗೆ ಕೇಳಿದ್ರೆ ಪತ್ರಕರ್ತೆಗೆ ಉಡಾಫೆ ಉತ್ತರವಿತ್ತ ಆರ್.ವಿ. ದೇಶಪಾಂಡೆ ನಡೆಗೆ ವ್ಯಾಪಕ ಟೀಕೆ
ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪತ್ರಕರ್ತೆಯೊಬ್ಬರು ಪ್ರಶ್ನಿಸಿದಾಗ, ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಸಂಬದ್ಧ ಮತ್ತು ಅವಮಾನಕರವಾಗಿ ಉಡಾಫೆ ಉತ್ತರ ನೀಡಿರುವುದಕ್ಕೆ ಮಾಧ್ಯಮಗಳು ಸೇರಿದಂತೆ ನಾಗರಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ದೇಶಪಾಂಡೆ ಈ ಸಂಬಂಧ




