Menu

ಗಾಳಿ ಸಹಿತ ಮಳೆ: ಕರ್ನಾಟಕ ಕರಾವಳಿಗೆ ರೆಡ್‌ ಅಲರ್ಟ್‌

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಕರಾವಳಿಯ ಜನರು ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಗಂಟೆಗೆ 30-40 ಕಿ.ಮೀ.

ಯಾದಗಿರಿಯಲ್ಲಿ ಅಣ್ಣ ತಮ್ಮ ಹೃದಯಾಘಾತಕ್ಕೆ ಬಲಿ

ಯಾದಗಿರಿಯ ಸುರಪುರ ತಾಲೂಕಿನ ಕೆಂಭಾವಿಯ ಮನೆಯೊಂದರಲ್ಲಿ ಅಣ್ಣ ಮತ್ತು ತಮ್ಮ ಹೃದಯಾಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತಪಟ್ಟ ಸೋದರರು. ತಮ್ಮ ಇರ್ಫಾನ್‌ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್‌ಗೂ ತೀವ್ರ

ಬಿಜೆಪಿ ಮಾಡ್ತಿರೋದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ

ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಶ್ರವಣ ಸಮಸ್ಯೆ ಪತ್ತೆ  ನಿಜಕ್ಕೂ ದೊಡ್ಡ ಸಾಧನೆ: ಸಿಎಂ

ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು 

ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ:  ಡಿಕೆ ಶಿವಕುಮಾರ್

ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ  ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ 

ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲು: ಆರ್‌. ಅಶೋಕ

ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು. ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಯಲಾಗಿದೆ

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು  ಮಾತನಾಡಿದರು.‌ ನನ್ನ ಊರಿನ ಶಾಲೆಯಲ್ಲಿ ನಾನು

ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ

ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ,

ವೃತ್ತಿಪರ ಕೋರ್ಸ್‌ಗಳ ಪ್ರವೇಶ 2 ನೇ ಸುತ್ತಿನ ಸೀಟು ಪ್ರಕಟ: ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ ನೀಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ ಗಳ ಎರಡನೇ ಸುತ್ತಿನ

ರಾಜ್ಯದಲ್ಲಿ ಏಳು ದಿನ ಭಾರಿ ಮಳೆ, ಕರಾವಳಿಯಲ್ಲಿ ವ್ಯಾಪಕ ವರ್ಷಧಾರೆ

ರಾಜ್ಯದಲ್ಲಿ ಏಳು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಬೆಂಗಳೂರಿನಲ್ಲಿ ಕೆಲವು ಕಡೆ ಸೆಪ್ಟೆಂಬರ್ 4 ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಕರಾವಳಿ