Menu

ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಕೆ ಶಿವಕುಮಾರ್ 

ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು  ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಅರಸು ಅಸೋಸಿಯೇಷನ್ ನ ಸುವರ್ಣ ಮಹೋತ್ಸವದಲ್ಲಿ ಶಿವಕುಮಾರ್ ಮಾತನಾಡಿದರು. “ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹು ದೊಡ್ಡದು. ನಾಲ್ವಡಿ ಕೃಷ್ಣರಾಜ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಚಾಮುಂಡೇಶ್ವರಿ ಚಲೋ’ :  ಆರ್.ಅಶೋಕ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ

ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ: ಬಾನು ಮುಷ್ತಾಕ್  ಉದ್ಘಾಟಿಸುವುದು ಸೂಕ್ತವೆಂದ ಸಿಎಂ

ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು  ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿದ್ದರಾಮಯ್ಯ

ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ‌ ಪರಿಷತ್ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ 

ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ

ಧರ್ಮಸ್ಥಳ ಪ್ರಕರಣ: ಎಸ್‌ಐಟಿಯಿಂದ ಬೆಂಗಳೂರಿನಲ್ಲಿ ಮಹಜರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾತಂಡವು ಬೆಂಗಳೂರಿನಲ್ಲಿ ಮಹಜರು ಪ್ರಕ್ರಿಯೆ ಮುಂದುವರಿಸಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಎಸ್‌ಐಟಿ ಮಹಜರು ನಡೆಸುತ್ತಿದೆ. ವಿದ್ಯಾರಣ್ಯಪುರದ ಎಸ್.ಬಿ ಮ್ಯಾನ್ ಷನ್ ಸರ್ವೀಸ್ ಅಪಾರ್ಟ್ಮೆಂಟ್ ನಲ್ಲಿ ಷಡ್ಯಂತ್ರ

ಅಮೆರಿಕ “ನಾವಿಕ” ದಲ್ಲಿ ಕೆಎಂಎಫ್‌ನ ನಂದಿನಿ ಕಲರವ

ಕನ್ನಡ ನಾಡಿನ ಹೆಮ್ಮೆಯ ಕೆಎಂಎಫ್ ನಂದಿನಿ ಬ್ರಾಂಡಿನ ಎಲ್ಲ ಉತ್ಪನ್ನಗಳನ್ನು ಅಮೆರಿಕ ದೇಶದ ಫ್ಲೋರಿಡಾದ ಲೇಕ್ ಲ್ಯಾಂಡ್ ನಲ್ಲಿ ಅಧಿಕೃತವಾಗಿ ಇಂದು ನಡೆದ ನಾವಿಕ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು. ನಂದಿನಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ, ಸಿಹಿ ತಿಂಡಿಗಳು ಸೇರಿದಂತೆ ಎಲ್ಲಾ

ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ, ನನ್ನನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ:  ಡಿಕೆ ಶಿವಕುಮಾರ್

“ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ 

ಮುದ್ರಾಂಕ ಶುಲ್ಕ ಕರ್ನಾಟಕದಲ್ಲೇ ಕಡಿಮೆ: ಆಯುಕ್ತ ಮುಲೈ ಮುಗಿಲನ್ ಸಮರ್ಥನೆ

ಬೆಂಗಳೂರು: ಆಗಸ್ಟ್ 31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಪರಿಷ್ಕೃತ ಶುಲ್ಕ ನೆರೆಹೊರೆಯ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ಸಮರ್ಥಿಸಿಕೊಂಡಿದ್ದಾರೆ. ಆಗಸ್ಟ್ 31ರಿಂದ

ಸೆಪ್ಟೆಂಬರ್ 1ರಿಂದ ಆನ್ ಲೈನ್ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಮುಳ್ಳಯ್ಯನಗಿರಿ ಪ್ರವೇಶ

ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದಾದ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಸೆಪ್ಟೆಂಬರ್ 1ರಿಂದ ಅನ್ವಯವಾಗುವಂತೆ ಹೊಸ ನಿಯಮ ಜಾರಿಗೆ ತಂದಿದೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದು ಹಾಗೂ ವಾಹನಗಳ ಸಂಖ್ಯೆ ಹೆಚ್ಚಾಗುವುದರಿಂದ ಉಂಟಾಗುವ ಸಂಚಾರಿ ದಟ್ಟಣೆ ತಗ್ಗಿಸಲು